Sun,May19,2024
ಕನ್ನಡ / English

ರಾಮರಾಜ್ಯವಾಗಿದ್ದ ಕರ್ನಾಟಕವನ್ನು ಬಿಜೆಪಿ ಪಕ್ಷವು ಕಮೀಷನ್ ರಾಜ್ಯ ಮಾಡಿದೆ! | JANATA NEWS

03 Mar 2023
1455

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ದಾಳಿಗೆ ತುತ್ತಾಗಿ, ಅವರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಬಿಜೆಪಿಗೆ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಸದ್ಯ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಖಾರವಾಗಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಾಮರಾಜ್ಯವಾಗಿದ್ದ ಕರ್ನಾಟಕವನ್ನು ಬಿಜೆಪಿ ಪಕ್ಷವು ಕಮೀಷನ್ ರಾಜ್ಯ ಮಾಡಿದೆ ಎಂದು ಕಟುವಾಗಿ ಟೀಕಿಸಿದ್ದಾರೆ. ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ.. ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹಾಗೂ ಸರ್‌ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ʼಸ್ವಚ್ಚ ಭಾರತ್‌ʼ ಪರಿಕಲ್ಪನೆಯೇ ಅದ್ಭುತ!! ವಾರೆವ್ಹಾ.. ಅಮಿತ್‌ ಶಾ ಅವರೇ!! ಎಂದು ಕೇಂದ್ರ ಸಚಿವರ ಕಾಲೆಳೆದಿದ್ದಾರೆ ಮಾಜಿ ಮುಖ್ಯಮಂತ್ರಿಗಳು.

ಅಮಿತ್ ಶಾ ಅವರೇ ಈಗ ಹೇಳಿ. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ 40% ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40% ಕಮೀಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಪಕ್ಷದ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ? ಎಂದು ಕುಮಾರಸ್ವಾಮಿ ಅವರು ಅಮಿತ್ ಶಾ ಅವರನ್ನು ಕೇಳಿದ್ದಾರೆ.

ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40% ಪರ್ಸಂಟ್‌ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ʼಕಮೀಷನ್‌ ರಾಜ್ಯʼ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ? ಎಂದು ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ; ಈ ರೀತಿ ಪರ್ಸಂಟೇಜ್ ವ್ಯವಹಾರ ಮುಂದುವರಿದರೆ ಮುಂದೆಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮೀಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ 20%, ಬಿಜೆಪಿ 40%. ಕರ್ನಾಟಕವನ್ನು 'ಕಮೀಷನ್‌ ರಾಜ್ಯ' ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮೀಷನ್‌ʼಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ ʼಕಮೀಷನ್‌ ರಾಜ್ಯʼ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ ಎಂದು ಕಿಡಿಕಾರಿದ್ದಾರೆ.

RELATED TOPICS:
English summary :Congress 20%, BJP 40%, the sin of making Karnataka a commission state is the fault of these national parties

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...