Sat,Apr27,2024
ಕನ್ನಡ / English

ಶಿವಾಜಿ ಪ್ರತಿಮೆಯನ್ನು ಮತ್ತೊಮ್ಮೆ ಅನಾವರಣಗೊಳಿಸಿದ ಲಕ್ಷ್ಮಿ ಹೆಬ್ಬಾಳ್ಕರ್ | JANATA NEWS

05 Mar 2023
1611

ಬೆಳಗಾವಿ : ರಾಜಹಂಸಗಡ ಕೋಟೆಯಲ್ಲಿ ಇಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​​ ಮತ್ತೊಮ್ಮೆ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಕೋಟೆ ಆವರಣದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್​ , ನಿಮ್ಮೆಲ್ಲರ ಮಗಳಾಗಿ 2018ರಲ್ಲಿ ಪ್ರಮಾಣ ಮಾಡಿದ್ದೆ. ಧೈರ್ಯಕ್ಕೆ ಏನೂ ಲಕ್ಷ್ಮೀ ಹೆಬ್ಬಾಳ್ಕರ್ ಕಡಿಮೆ ಇಲ್ಲ. ಆದ್ರೇ ಇವತ್ತು ಭಾವುಕ ಆಗಿದ್ದೇನೆ. ಕೊಡಬಾರದಷ್ಟು ಕಷ್ಟ ಕೊಡುತ್ತಿದ್ದಾರೆ. ಹೀಗಾಗಿ ಭಾವುಕ ಆಗಿದ್ದೇನೆ.

ನನ್ನ ಮೇಲೆ ಬಿಜೆಪಿ ಸರ್ಕಾರ ಎರಡು ಕೇಸ್ ಹಾಕಿದೆ, ನಾನು ಏನು ಮಾತನಾಡಲಿಲ್ಲ. ಬಹಳ ವಿನಮ್ರತೆಯಿಂದ ಸತ್ಯಮೇವ ಜಯತೇ ಅಂತಾ ಕೆಲಸ ಮಾಡಿದೆ. ಬಹಳ ಜನ ಬರ್ತಾರೆ, ಪಹಣಿ ಮಾಡ್ತಾರಂತೆ. ಶಿಷ್ಟಾಚಾರದ ಪ್ರಕಾರ ಉದ್ಘಾಟನೆ ಮಾಡ್ತಾರಂತೆ. ಸಿಎಂ ಮೇಲೆ ನನಗೆ ಹೆಚ್ಚಿನ ಗೌರವ ಇದೆ, ಅವರದ್ದೇನು ತಪ್ಪಿಲ್ಲ. ಅವರ ಮೇಲೆ ರಾಜಕೀಯ ಒತ್ತಡ ಹಾಕಿ ಶಿವಾಜಿ ಪ್ರತಿಮೆ ಲೋಕಾರ್ಪಣೆ ಮಾಡಿಸಿದ್ದಾರೆ.

ಶಿವಾಜಿ ಪ್ರತಿಮೆ ಇನ್ನೂ ಪೂರ್ಣಗೊಂಡಿರಲಿಲ್ಲ. ಸಂಜಯ್ ಪಾಟೀಲ್, ಗೋಕಾಕ್‌ ಶಾಸಕ ಇಲ್ಲಿ ಭೇಟಿ ನೀಡಿ ಹೋದ ಬಳಿಕ ಒಂದು ದಿನ ಬರಲಿಲ್ಲ. ಅವರು ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ನಿರತರಾಗಿದ್ದರು. ಅಷ್ಟೇ ಅಲ್ಲದೇ ಅಂದು ನಮ್ಮ ಮಹಾರಾಜರ ಪ್ರತಿಮೆ ಪಕ್ಕದಲ್ಲಿಯೇ ಪೊರಕೆ, ಪೇಂಟ್ ಬಕೆಟ್ ಇತ್ತು. ಕೇವಲ 12 ನಿಮಿಷದಲ್ಲಿ ಅಪೂರ್ಣ ಮೂರ್ತಿ ಉದ್ಘಾಟನೆ ಮಾಡಿ ಅಪಮಾನ ಮಾಡಿದ್ದರು. ಶಿವಭಕ್ತರ ಅಪಮಾನ ಮಾಡಿದ್ರು, ರಾಜಕಾರಣ ಮಾಡಿದ್ದಾರೆ‌ ಎಂದು ಕಿಡಿಕಾರಿದರು.

ಯಾರಾರೋ ಬಂದು ಶಿಷ್ಟಾಚಾರ ಬಂದು ಮಾತನಾಡುತ್ತಾರೆ. ಸಿಎಂ ಬಸವರಾಜ ಬೊಮ್ಮಾಯಿ ಬಗ್ಗೆ ಗೌರವ ಇದೆ. ಅವರ ದಿಕ್ಕು ತಪ್ಪಿಸಿ, ಕರೆದುಕೊಂಡು ಬಂದು ಉದ್ಘಾಟನೆ ಮಾಡಿಸಿದ್ರು. ಅರ್ಧ ಬಣ್ಣ ಬಳಿದ ಮೂರ್ತಿಯನ್ನು 12 ನಿಮಿಷದಲ್ಲಿ ಉದ್ಘಾಟನೆ ಮಾಡಿದ್ರು. ಶಿವಾಜಿ ಮಹಾರಾಜರಿಗೆ ಮಾಡಿದ ದೊಡ್ಡ ಅಪಮಾನ ಎಂದು ಹೆಸರು ಹೇಳದೇ ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದರು.

ತಪ್ಪು ಮಾಡಿದ್ರು, ಪ್ರತಿಷ್ಠಾಪನೆ ವಿಚಾರದಲ್ಲಿ ಅವರು ರಾಜಕೀಯ ಮಾಡಿದ್ರು. ಸಿದ್ದೇಶ್ವರನ ಮೇಲೆ ಪ್ರಮಾಣ ಮಾಡುತ್ತೇನೆ. ಈ ವಿಚಾರದಲ್ಲಿ ನಾನು ರಾಜಕೀಯ ಮಾಡಿಲ್ಲ. ಡಿಕೆ ಶಿವಕುಮಾರ್​ ಮಂತ್ರಿಯಾಗಿದ್ದ ವೇಳೆಯಲ್ಲಿ ಮೂರು ತಿಂಗಳಲ್ಲಿ ಅನುದಾನ ಬಿಡುಗಡೆ ಮಾಡಿಸಿದ್ದೆ. ನಂತರ ಕೊವಿಡ್, ಪ್ರವಾಹದಿಂದ ವಿಳಂಬವಾಯಿತು. ಈಗ ಚುನಾವಣೆ ಬಂದಿದೆ. ಪ್ರತಿಮೆ ಉದ್ಘಾಟನೆಯನ್ನ ಚುನಾವಣೆ ಬಳಸುವ ಅವಶ್ಯಕತೆ ನನಗೆ ಇಲ್ಲ. ಪುಣ್ಯದ ಕೆಲಸ ಮಾಡಲು ನನಗೆ ಅವಕಾಶ ಕೊಟ್ಟರಿ ಇದು ನಮ್ಮ ಭಾಗ್ಯ ಎಂದರು. ಈ ಕೆಲಸ ನಾನಲ್ಲ ನಾವು ಎಲ್ಲರೂ ಸೇರಿ ಮಾಡಿದ್ದೇವೆ ಎಂಬ ಅಭಿಮಾನವಿದೆ ಎಂದು ಹೇಳಿದರು.

RELATED TOPICS:
English summary :Lakshmi Hebbalkar unveiled the statue of Shivaji again

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...