Sat,May04,2024
ಕನ್ನಡ / English

H3N2 ಆತಂಕಕಾರಿಯಲ್ಲ, ಮುನ್ನೆಚ್ಚರಿಕೆ ಅತ್ಯಗತ್ಯ, ರಾಜ್ಯದಲ್ಲಿ 26 ಕೇಸ್ ಪತ್ತೆ! | JANATA NEWS

06 Mar 2023
2028

ಬೆಂಗಳೂರು : H3N2 ವೈರಸ್‌ ಸೋಂಕು ಭೀತಿ ಆವರಿಸಿದೆ, ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರೊಂದಿಗೆ ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು.

ಸಭೆ ಬಳಿಕ ಮಾತನಾಡಿದ ಅವರು, ಎಚ್ 3 ಎನ್ 2 ವೈರಸ್ ಅಪಾಯಕಾರಿ ಅಲ್ಲ. ಆದರೆ, ಮುಂಜಾಗ್ರತಾ ಕ್ರಮ ವಹಿಸುವುದು ಅಗತ್ಯ. ಇದುವರೆಗೆ ರಾಜ್ಯದಲ್ಲಿ 26 ಪ್ರಕರಣಗಳು ವರದಿಯಾಗಿವೆ. ಎಚ್ 3 ಎನ್ 2 ದೇಶದಲ್ಲಿ ಹೆಚ್ಚು ಸೋಂಕು ವರದಿಯಾಗುತ್ತಿರುವ ಕಾರಣದಿಂದ ಜನರು ಗಾಬರಿಯಾಗಿದ್ದಾರೆ. ಈ ಸಂಬಂಧ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಗಾಬರಿಪಡುವ ಯಾವುದೇ ಸ್ಥಿತಿ ಇಲ್ಲ. ಆದರೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.

ಮಕ್ಕಳು, 65 ವರ್ಷಕ್ಕಿಂತ ಮೇಲ್ಪಟ್ಟವರು, ಇತರೆ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ಗರ್ಭಿಣಿಯರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ, ಅನವಶ್ಯಕವಾಗಿ ಗುಂಪು ಸೇರದಂತೆ ಮತ್ತು ಶುಚಿತ್ವದ ಕಡೆ ಗಮನ ಹರಿಸುವಂತೆ ಸಲಹೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಹೊಸ ವೈರಸ್ ಕುರಿತು ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಎಲ್ಲ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಈಗಾಗಲೇ ಆದೇಶಿಸಲಾಗಿದೆ. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಇನ್‌ಫ್ಲುಯೆಂಜಾಗೆ ಪ್ರತಿ ವರ್ಷ ಲಸಿಕೆ ನೀಡಲಾಗುತ್ತಿದೆ. ಈಗ ಆರೋಗ್ಯ ಸಿಬ್ಬಂದಿ ಪಡೆಯಲು ಲಿಖಿತ ಸೂಚನೆ ನೀಡಲಾಗುವುದು ಎಂದರು.

15 ವರ್ಷದವರಿಗಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಹಾಗೂ 65 ವರ್ಷ ಮೇಲ್ಪಟ್ಟ ನಾಗರಿಕರಲ್ಲಿ ಈ ಹೊಸ ಸೋಂಕು ಕಂಡು ಬರುವ ಸಾಧ್ಯತೆ ಇದೆ. ಗರ್ಭಿಣಿಯರಿಗೂ ಸೋಂಕು ಬರುವ ಸಾಧ್ಯತೆ ಹೆಚ್ಚಿದೆ. ಶುಚಿತ್ವ ಪಾಲಿಸುವ ಜೊತೆಗೆ ಗುಂಪು ಗೂಡುವುದನ್ನು ಬಿಡಬೇಕು. ಈ ಮೂಲಕ ಸೋಂಕು ವ್ಯಾಪಿಸುವುದನ್ನು ತಡೆಯಬಹುದು.

ನಾವು ಈಗ ಬೇಸಿಗೆಗೆ ಕಾಲಿಡುತ್ತಿದ್ದು, ತಾಪಮಾನ ಫೆಬ್ರವರಿಯಿಂದ ಹೆಚ್ಚಾಗಿದೆ. ಬಿಸಿಲಿನ ತಾಪಮಾನಕ್ಕೆ ಜನ ಬಳಲುತ್ತಿದ್ದಾರೆ. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ವರೆಗೆ ಬಿಸಿಲಿನಲ್ಲಿ ಹೋಗೋದು ಕಡಿಮೆ ಮಾಡಿ. ದಿನನಿತ್ಯ ಬೇಸಿಗೆಯಲ್ಲಿ ಹೆಚ್ಚು ನೀರನ್ನು ಸೇವಿಸಬೇಕು, ಕನಿಷ್ಠ 2-3 ಲೀಟರ್ ನಿರು ಸೇವಿಸಬೇಕು, ಎಳನೀರು, ಮಜ್ಜಿಗೆ ಸೇವಿಸುವುದು ಉತ್ತಮ ಎಂದು ತಿಳಿಸಿದರು

RELATED TOPICS:
English summary :H3N2 is not alarming, precaution is essential, 26 cases detected in the state!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...