Sun,May12,2024
ಕನ್ನಡ / English

200 ಕೋಟಿ ರೂ. ಲೂಟಿ ಆರೋಪ: ಮಾಡಾಳ್ ವಿರೂಪಾಕ್ಷಪ್ಪ ಹಗರಣವನ್ನು ದಿಕ್ಕು ತಪ್ಪಿಸಲು ಬಿಜೆಪಿ ಕಾಫಿ ತಿಂಡಿ ಹಿಂದೆ ಬಿದ್ದಿದೆ‌ | JANATA NEWS

06 Mar 2023
1657

ಬೆಂಗಳೂರು : ಮಾಡಾಳ್ ವಿರೂಪಾಕ್ಷಪ್ಪ ಹಗರಣವನ್ನು ದಿಕ್ಕು ತಪ್ಪಿಸಲು ಸುಳ್ಳಿನ ಕಾರ್ಖಾನೆಯಾದ ಬಿಜೆಪಿ ಕಾಫಿ ತಿಂಡಿ ಹಿಂದೆ ಬಿದ್ದಿದೆ‌ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್​ ನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಕೇಲವ ಕಾಫಿ, ತಿಂಡಿ, ಊಟದ ವಿಚಾರಕ್ಕೆ 200 ಕೋಟಿ ರೂ. ಹಣ ಲೂಟಿ ಮಾಡಿದ್ದಾರೆ ಬಿಜೆಪಿ ನಾಯಕರು ಆರೋಪಿಸಿದ್ದರು.

ಈ ಸಂಬಂಧ ಪತ್ರಿಕಾ ಬಿಡುಗಡೆ ಮಾಡಿರುವ ಸಿದ್ಧರಾಯ್ಯ, ಸಿಎಂ ಆಗಿದ್ದಾಗ ಆತಿಥ್ಯದ ವೆಚ್ಚಕ್ಕೆ 200 ಕೋಟಿ ಖರ್ಚು ಮಾಡಿಲ್ಲ. 5 ವರ್ಷದಲ್ಲಿ 3 ಕೋಟಿ 26 ಲಕ್ಷ ರೂಪಾಯಿ ಮಾತ್ರ ಖರ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. 2013-18ರವರೆಗೆ ಮುಖ್ಯಮಂತ್ರಿಗಳ ಕಚೇರಿಯ ಸಭೆಗಳು ಹಾಗೂ ಜನತಾದರ್ಶನ ಸೇರಿ ಇತರೆ ಕಾರ್ಯಕ್ರಮಕ್ಕೆ 3.26 ಕೋಟಿ ಖರ್ಚು ಎಂದು ಸರ್ಕಾರದ ದಾಖಲೆಗಳೇ ಹೇಳುತ್ತವೆ. ನನ್ನ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡಿದ್ದಾರೆ. ಸುಳ್ಳನ್ನು ಉತ್ಪಾದಿಸಿ ಕರ್ನಾಟಕದ ಜನತೆಗೆ ದ್ರೋಹ ಬಗೆದಿದ್ದಾರೆ. ಬಿಜೆಪಿಯೇ ಸುಳ್ಳಿನ ಕಾರ್ಖಾನೆ ಎಂಬುದು ಪದೇಪದೆ ನಿಜವಾಗುತ್ತಿದೆ. ಅವರಿಗೆ ಆತ್ಮಸಾಕ್ಷಿ ಇದೆಯಾ ಎಂಬುದು ಯಕ್ಷ ಪ್ರಶ್ನೆ ಆಗಿದೆ ಎಂದು ಕಿಡಿಕಾರಿದ್ದಾರೆ.

40 ಪರ್ಸೆಂಟ್ ಹಗರಣ, ಮಾಡಾಳ್ ವಿರೂಪಾಕ್ಷಪ್ಪನವರ ಹಗರಣದಿಂದ ಕಂಗಾಲಾಗಿರುವ ಬಿಜೆಪಿಯು ಇಂಥ ಸುಳ್ಳುಗಳನ್ನು ಉತ್ಪಾದಿಸಿಕೊಂಡು ಓಡಾಡುತ್ತಿದೆ. ವಾಸ್ತವ ಏನೆಂದರೆ 2013-14 ರಿಂದ 2017-18 ರವರೆಗೆ ಕಾಫಿ ತಿಂಡಿ ಸೇರಿದಂತೆ ಮುಖ್ಯಮಂತ್ರಿಗಳ ಕಛೇರಿಯು ಆತಿಥ್ಯಕ್ಕೋಸ್ಕರ ಖರ್ಚು ಮಾಡಿದ ದಾಖಲೆಗಳನ್ನು ಸರ್ಕಾರ ನನಗೆ ನೀಡಿದೆ.
ಅದು ಈ ರೀತಿ ಇದೆ.
13-5-2013 ರಿಂದ 30-01-2014 ರವರೆಗೆ 85,13 ಲಕ್ಷ ರೂಪಾಯಿಗಳು,
2014-15 ರಲ್ಲಿ 58.45 ಲಕ್ಷ ರೂಪಾಯಿಗಳು,
2015-16 ರಲ್ಲಿ 39.20 ಲಕ್ಷ ರೂಪಾಯಿಗಳು,
2016-17 ರಲ್ಲಿ 66,03 ಲಕ್ಷ ಮತ್ತು 2017- 18 ರಲ್ಲಿ 77.26 ಲಕ್ಷ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ.

ಒಟ್ಟಾರೆ 5 ವರ್ಷಗಳ ನಮ್ಮ ಸಕಾರದ ಅವಧಿಯಲ್ಲಿ 3.26 ಕೋಟಿ ರೂಪಾಯಿಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಛೇರಿಯ ಸಭೆಗಳಿಗೆ, ಜನತಾದರ್ಶನಗಳು ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಕಾಫಿ, ತಿಂಡಿ ಮತ್ತು ಊಟ ಮುಂತಾದವುಗಳಿಗೆ ಖರ್ಚಾಗಿದೆ ಎಂದು ವಿವರ ನೀಡಿದ್ದಾರೆ.

ಇನ್ನು ಎಜಿ ಆಡಿಟ್ ವಿಚಾರಕ್ಕೆ ಬಂದರೆ ನಮ್ಮ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರವಾಗಿದೆ ಎಂದು ಎಲ್ಲಿಯೂ ಹೇಳಿಲ್ಲ. ಆದರೆ 2021 ರಲ್ಲಿ 4109924 ರೂಪಾಯಿಗಳು [ 7.54 ಕೋಟಿ] ಮತ್ತು ಫೆಬ್ರವರಿ 2022 ರಲ್ಲಿ 34243290 ಕೋಟಿ ಖರ್ಚು ಮಾಡಿರುವುದರಲ್ಲಿ ದಾಖಲೆಗಳಿಲ್ಲ. ಡಿಸ್ಕ್ರಿಪೆನ್ಸಿಗಳಿವೆ ಎಂದು ಎಜಿಯವರು ತಮ್ಮ ವರದಿಯಲ್ಲಿ ಹೇಳಿದ್ದಾರೆ. ನಾನು ಲೆಕ್ಕ ಕೊಟ್ಟಿದ್ದೇನೆ. ಹಾಗೆಯೆ ಬಸವರಾಜ್ ಬೊಮ್ಮಾಯಿಯವರು 2019 ರ ಜುಲೈನಿಂದ ಈ ಬಾಬತ್ತಿಗೆ ಎಷ್ಟು ಖರ್ಚಾಗಿದೆ ಎಂಬುದನ್ನು ಜನರ ಮುಂದೆ ಇಡಬೇಕೆಂದು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್​ಆರ್ ರಮೇಶ್ ಗಂಭೀರ ಆರೋಪ ಮಾಡುವ ಮೂಲಕ ದಾಖಲೆ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ರಾಜ್ಯ BJP ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ಸಿದ್ದರಾಮಯ್ಯ ವಿರುದ್ಧ 200 ಕೋಟಿ ಹಗರಣ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಅವಧಿಯಲ್ಲಿ ಕಾಫಿ, ತಿಂಡಿ, ಬಿಸ್ಕತ್​​ ಹೆಸರಲ್ಲಿ ಹಗರಣ ನಡೆದಿದೆ. 5 ವರ್ಷದಲ್ಲಿ​​ ಸುಮಾರು 200 ಕೋಟಿ ರೂಪಾಯಿ ಲೂಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ವಿರುದ್ಧ ಕಾಫಿ ತಿಂಡಿ ಹಗರಣದ ತನಿಖೆಗೆ ಸಿಎಂಗೆ ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು ಕೂಡ ನನ್ನ ಮನವಿಗೆ ಸ್ಪಂದಿಸಿದ್ದಾರೆ ಎಂದಿದ್ದಾರೆ.

RELATED TOPICS:
English summary :200 crores of Rs. Looting allegation: BJP falls behind coffee snack to deflect Madal Virupakshappa scandal

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...