Sat,Apr27,2024
ಕನ್ನಡ / English

ಬಿಜೆಪಿ 40% ಲೆಕ್ಕಾಚಾರದ ಪ್ರಕಾರ ಚುನಾವಣೆಯಲ್ಲಿ ಅವರ ಸೀಟುಗಳ ಸಂಖ್ಯೆ 40ಕ್ಕೆ ಇಳಿದರೂ ಆಶ್ಚರ್ಯ ಇಲ್ಲ! | JANATA NEWS

08 Mar 2023
1832

ಬೆಂಗಳೂರು : ಬಿಜೆಪಿ 40% ಲೆಕ್ಕಾಚಾರದ ಪ್ರಕಾರ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅವರ ಸೀಟುಗಳ ಸಂಖ್ಯೆ 40ಕ್ಕೆ ಇಳಿದರೂ ಆಶ್ಚರ್ಯ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, "ಈಗಿನ ಪ್ರಕಾರ ಅವರದ್ದು 65 ಸೀಟಿಗಿಂತ ಮೇಲೆ ಏರುತ್ತಿಲ್ಲ. ಆದರೆ ಜನರ ಆಕ್ರೋಶ ನೋಡಿದರೆ ಅವರು 40 ಸೀಟಿಗೆ ನಿಲ್ತಾರೆ ಅಂತ ಅನ್ನಿಸುತ್ತಿದೆ" ಎಂದರು.

ಲೋಕಾಯುಕ್ತಕ್ಕೆ ಶಕ್ತಿ ಕೊಡುವಲ್ಲಿ ಬಿಜೆಪಿ ಸಾಧನೆ ಏನೂ ಇಲ್ಲ. ಜನರು ಈ ಭ್ರಷ್ಟ ಸರ್ಕಾರವನ್ನು ತೆಗೆದು ಹಾಕಲಿ. ನಿನ್ನೆ ನಡೆದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮೆರವಣಿಗೆ ಬಗ್ಗೆ ಬಿಜೆಪಿ ಉತ್ತರ ಕೊಡಬೇಕು. ಅವರ ಪಕ್ಷದ ಸಿದ್ದಾಂತವೇನು ಎಂಬುದೇ ನನಗೆ ಆಶ್ಚರ್ಯವಾಗುತ್ತಿದೆ. ಎಸಿಬಿ ತೆಗೆದು ಲೋಕಾಯುಕ್ತಕ್ಕೆ ಶಕ್ತಿ ಕೊಡ್ತೇವೆ ಅಂತ ಬಿಜೆಪಿ ಹೇಳಲಿಲ್ಲ. ಕೋರ್ಟ್ ಹೇಳಿದ ಮೇಲೆ ಲೋಕಾಯುಕ್ತಕ್ಕೆ ಶಕ್ತಿ ಬಂದಿತು" ಎಂದು ಅವರು ಹೇಳಿದರು.

ಲೋಕಾಯುಕ್ತ ಸಂಸ್ಥೆಗೆ ನಾವು ಶಕ್ತಿ ತುಂಬಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರು, ಅಧಿಕಾರಕ್ಕೆ ಬಂದ ತಕ್ಷಣ ಎಸಿಬಿ ಕಿತ್ತುಹಾಕಿ ಲೋಕಾಯುಕ್ತರ ನೇಮಕ ಮಾಡಲಿಲ್ಲ ಯಾಕೆ? ಈ ವಿಚಾರವಾಗಿ ಹೈಕೋರ್ಟ್ ನಿರ್ದೇಶನ ನೀಡಿದ ನಂತರ ಎಸಿಬಿ ಸಂಸ್ಥೆ ರದ್ದುಗೊಳಿಸಿ ಲೋಕಾಯುಕ್ತರ ನೇಮಕ ಮಾಡಿದ್ದಾರೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಕ್ರಮ ಕೈಗೊಂಡು ಈಗ ತಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ.

ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಕುರಿತು ಬಿಜೆಪಿ ವ್ಯಂಗ್ಯ ಕುರಿತು ಮಾತನಾಡಿದ ಅವರು, ನಮ್ಮ ಬಗ್ಗೆ ಏನೆಲ್ಲಾ ವ್ಯಂಗ್ಯ ಮಾಡುತ್ತಾರೋ ಮಾಡಲಿ. ಬಂದ್ ವಿಚಾರವಾಗಿಯಾದರೂ ವ್ಯಂಗ್ಯ ಮಾಡಲಿ, 200 ಯುನಿಟ್ ಉಚಿತ ವಿದ್ಯುತ್, 2000 ರೂ. ನೀಡುವ ಬಗ್ಗೆಯಾದರೂ ವ್ಯಂಗ್ಯ ಮಾಡಲಿ. ನಾವು ಅಧಿಕಾರಕ್ಕೆ ಬಂದ ನಂತರ ಇದೆಲ್ಲವನ್ನು ಮಾಡಿ ತೋರಿಸಿ ಅವರಿಗೆ ಉತ್ತರ ನೀಡುತ್ತೇವೆ.

200 ಯುನಿಟ್ ಉಚಿತ ವಿದ್ಯುತ್ ನೀಡಲು ಹೇಗೆ ಸಾಧ್ಯ ಎಂದು ಕೇಳುವ ಅವರು ಯಾವ ಲೆಕ್ಕಾಚಾರದಲ್ಲಿ ರೈತರಿಗೆ 7 ಗಂಟೆಯಿಂದ 10 ಗಂಟೆವರೆಗೂ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದರು? ನಿಮ್ಮ ಸರ್ಕಾರ ಇದ್ದರೂ ಅದನ್ನು ಯಾಕೆ ಜಾರಿ ಮಾಡಲಿಲ್ಲ? ರೈತರ 1 ಲಕ್ಷ ವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಅದನ್ನು ಯಾಕೆ ಮಾಡಲಿಲ್ಲ? ಈಗ 75 ಯುನಿಟ್ ನೀಡುವುದಾಗಿ ಹೇಳಿದ್ದಾರೆ.

ನಾವು 2 ಸಾವಿರ ನೀಡುತ್ತೇವೆ ಎಂದಾಗ ಅವರು 500 ರೂ. ನೀಡುವುದಾಗಿ ಹೇಳಿ ನಂತರ 1 ಸಾವಿರ ನೀಡುತ್ತೇವೆ ಎಂದು ಘೋಷಣೆ ಮಾಡಿರುವುದೇಕೆ? ಜ.16 ರಂದು ಸರ್ಕಾರ ಗೃಹಿಣಿ ಶಕ್ತಿ ಯೋಜನೆ ಜಾರಿ ಮಾಡುವುದಾಗಿ ಹೇಳಿದ್ದರು. ಹೀಗೆ ಮುಖ್ಯಮಂತ್ರಿಗಳು ಸುಳ್ಳಿನ ಮೇಲೆ ಸುಳ್ಳು ಹೇಳುತ್ತಾ ಸುಳ್ಳಿನ ಸರದಾರರಾಗುತ್ತಿದ್ದಾರೆ ಎಂದು ತಿಳಿಸಿದರು.

RELATED TOPICS:
English summary :According to BJP 40% calculation, no wonder their number of seats in the election has come down to 40!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...