Fri,May17,2024
ಕನ್ನಡ / English

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜನಲ್ಲ, ಪೇಜಾವರ ಶ್ರೀ ಸ್ಪಷ್ಟನೆ | JANATA NEWS

08 Mar 2023
3142

ತುಮಕೂರು : ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು, ಎಂಬ ಮಿಥುನ್ ರೈ ಹೇಳಿಕೆಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ತಿರುಗೇಟು ಕೊಟ್ಟಿದ್ದಾರೆ.

ಆಧಾರ ರಹಿತವಾದ ಹೇಳಿಕೆ ಇಟ್ಟುಕೊಂಡು ಚರ್ಚಿಸಿದರೆ ಅದಕ್ಕೆ ಅರ್ಥವಿಲ್ಲ. ಕೃಷ್ಣ ಮಠಕ್ಕೆ ರಾಮಭೋಜ ಅರಸ ಜಾಗ ಕೊಟ್ಟಿದ್ದಕ್ಕೆ ಆಧಾರಗಳಿವೆ, ಗುರುಗಳ ಹೇಳಿಕೆಯನ್ನು ಅವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ತುಮಕೂರಿನಲ್ಲಿ ಪೇಜಾವರ ಶ್ರೀ ಹೇಳಿದ್ದಾರೆ.

ಮಧ್ವಾಚಾರ್ಯರು ಎಲ್ಲ ಶಿಷ್ಯರೊಡನೆ ಸೇರಿಕೊಂಡು ಬದ್ರಿ ಯಾತ್ರೆಗೆ ಹೊರಟಿದ್ರು. ಹಾಗೆ ಯಾತ್ರೆಗೆ ಹೋಗುವಾಗ ಗಂಗಾ ನದಿಯನ್ನ ದಾಟಬೇಕಿತ್ತು. ಅಲ್ಲೊಬ್ಬ ತುರ್ಕರ ರಾಜ ಆಳ್ವಿಕೆ ಮಾಡುತ್ತಿದ್ದನು. ನದಿ ದಾಟಲಿಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನ ಆತ ನಿಲ್ಲಿಸಿದ್ದ. ಆಗ ಮಧ್ವಾಚಾರ್ಯರು ಗಂಗಾ ನದಿಯನ್ನ ಈಜಿಯೇ ದಾಟಲು ಮುಂದಾದರು. ಬಳಿಕ ಶಿಷ್ಯರಿಗೆ ತಮ್ಮ ಕಾಲನ್ನ ಹಿಡಿದುಕೊಳ್ಳಲು ಹೇಳಿದರು. ಆಗ ತುರ್ಕ ರಾಜನ ಸೈನಿಕರು ಇವರತ್ತ ಓಡಿಬಂದರು. ಆದರೆ ಮಧ್ವಾಚಾರ್ಯರು ಸ್ವಲ್ಪವೂ ಹೆದರದೇ ಅವರಿಗೆ ತಿಳಿ ಹೇಳಿದರು.

ಆದರೆ ಮಧ್ವಾಚಾರ್ಯರು ತಮ್ಮ ಶಿಷ್ಯರೊಂದಿಗೆ ನದಿಯನ್ನು ಈಜಿಕೊಂಡು ದಾಟುವಾಗ ಸೇನೆ ಇವರನ್ನು ತಡೆಯಲು ಬಂತು. ಈಜುತ್ತಲೇ ನಾವು ಬರುವವರೆಗೆ ಅಲ್ಲೇ ಇರಿ, ನಾವು ನಿಶಸ್ತ್ರಧಾರಿಗಳು ಎಂದು ಸೈನಿಕರಿಗೆ ತಿಳಿಸಿದರು. ನಂತರ ದಡ ತಲುಪಿ ನಿರ್ಭೀತರಾಗಿ ಸೈನಿಕರ ಕಡೆ ನಡೆದರು. ಆಚಾರ್ಯರ ತೇಜಸ್ಸು ತುಂಬಿದ ಮಮತೆಯ ಕಣ್ಣುಗಳಿಗೆ ತುರ್ಕರ ದೊರೆ ಕೂಡ ಪ್ರಭಾವಕ್ಕೆ ಒಳಗಾದ.

ಅದನ್ನ ನಮ್ಮ ಗುರುಗಳು ಉಲ್ಲೇಖ ಮಾಡಿದ್ದಾರೆ ಹೊರತು, ಉಡುಪಿ ಮಠದ ಜಾಗವನ್ನ ಮುಸ್ಲಿಂ ರಾಜರು ನೀಡಿದ್ದು ಎಂದು ಹೇಳಿದ್ದಲ್ಲ. ಈ ಗೊಂದಲದಿಂದ ಅವರು ಈ ರೀತಿಯ ಹೇಳಿಕೆ ಕೊಟ್ಟಿರಬಹುದು. ಆದ್ರೆ ಅದು ಆಧಾರ ರಹಿತವಾಗಿರೋದ್ರಿಂದ ಈ ಚರ್ಚೆಯನ್ನ ಮುಂದುವರಿಸೋದು ಅರ್ಥಹೀನ ಎಂಬುದು ನನ್ನ ಅನಿಸಿಕೆ ಎಂದಿದ್ದಾರೆ.

RELATED TOPICS:
English summary :It was not the Muslim king who gave the land to Udupi Krishna Mutt, it was Shri Acharane of Page

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...