Thu,May09,2024
ಕನ್ನಡ / English

ವಿವಾಹವಾದ ಮರುದಿನವೇ ಬೆಂಗ್ಳೂರು ಟ್ರಾಫಿಕ್​ನಲ್ಲಿ ಪತ್ನಿ ಬಿಟ್ಟು ಪತಿ ಎಸ್ಕೇಪ್​! | JANATA NEWS

09 Mar 2023
1962

ಬೆಂಗಳೂರು : ನವವಿವಾಹಿತ ಮಹಾನಗರಿಯ ಟ್ರಾಫಿಕ್​ನಲ್ಲೇ ಹೆಂಡತಿಯನ್ನು ಕಾರಿನಲ್ಲಿ ಬಿಟ್ಟು ಓಡಿ ಹೋಗಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.

ಪರಾರಿಯಾದವನ ಹೆಸರು ವಿಜಯ್​ ಜಾರ್ಜ್​. ಚಿಕ್ಕಬಳ್ಳಾಪುರ ಮೂಲದವನು. ಗೋವಾದಲ್ಲಿರುವ ತನ್ನ ಕಂಪನಿಯನ್ನು ನೋಡುಕೊಂಡು ತಂದೆಗೆ ಸಹಾಯ ಮಾಡಿಕೊಂಡು ಹೋಗುತ್ತಿದ್ದನು.

ಮದುವೆ ಮುಗಿಸಿ ಚರ್ಚ್​ನಿಂದ ಮನೆಗೆ ಮರಳುತ್ತಿದ್ದರು. ಈ ವೇಳೆ ಕಾರು ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಕಾರಿನಿಂದ ಕೆಳಗೆ ಇಳಿದು ಜಾರ್ಜ್​ ಎಸ್ಕೇಪ್​ ಆಗಿದ್ದು, ಆತನಿಗಾಗಿ ಪೊಲೀಸರು ಕಳೆದ ಎರಡು ವಾರಗಳಿಂದ ಹುಡುಕಾಟ ನಡೆಸುತ್ತಿದ್ದಾರೆ.

ಫೆಬ್ರವರಿ 15ರಂದು ವಿಜಯ್​ ಮದುವೆಯಾಗಿದ್ದಾನೆ. ಆದರೆ ಫೆಬ್ರವರಿ 16 ರಂದು ಟ್ರಾಫಿಕ್​ನಲ್ಲಿ ಹೆಂಡತಿಯನ್ನು ಬಿಟ್ಟು ಕಾರಿನಿಂದ ಇಳಿದು ಓಡಿ ಹೋಗಿದ್ದಾನೆ. ಅಷ್ಟಕ್ಕೂ ಆತ ಓಡಿ ಹೋಗಿದ್ದೇಕೆ ಗೊತ್ತಾ..

ಈ ಹಿಂದೆ ವಿಜಯ್ ಮಹಿಳೆಯೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದ. ತನ್ನ ತಂದೆಯ ಕಂಪನಿಯಲ್ಲಿ ಕೆಲಸ ಮಾಡುವ ಆಟೋ ಚಾಲಕನ ಪತ್ನಿಯೊಂದಿಗಿ ವಿಜಯ್​, ಲವ್ವಿಡವ್ವಿ ಇಟ್ಟುಕೊಂಡಿದ್ದ. ಮಹಿಳೆ ಇಬ್ಬರು ಮಕ್ಕಳಿದ್ದು ಅದೇ ಕಂಪನಿಯಲ್ಲಿ ಕ್ಲರ್ಕ್​ ಆಗಿ ಕೆಲಸ ಮಾಡುತ್ತಿದ್ದಳು.

ಮದುವೆಗು ಮುನ್ನ ವಿಜಯ್​, ತನ್ನ ತಪ್ಪನ್ನು ಪತ್ನಿಯ ಮುಂದೆ ಹೇಳಿಕೊಂಡಿದ್ದ. ಎಲ್ಲವನ್ನು ಕ್ಷಮಿಸಿ ಆತನನ್ನು ಮದುವೆ ಆಗಿದ್ದಳು. ಆದರೆ, ಬೇರೊಬ್ಬಳನ್ನು ಮದುವೆ ಆದರೆ, ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಹರಿಬಿಡುವುದಾಗಿ ಮಾಜಿ ಪ್ರೇಯಸಿ ಬೆದರಿಸುತ್ತಿದ್ದಳು. ಇದರಿಂದ ಜಾರ್ಜ್​ ತುಂಬಾ ಒತ್ತಡಕ್ಕೆ ಒಳಗಾಗಿದ್ದ.

ಜಾರ್ಜ್​ ಪತ್ನಿ ಘಟನೆಯ ಬಗ್ಗೆ ಮಾತನಾಡಿ, ಚರ್ಚ್​ನಿಂದ ಮನೆಗೆ ಬರುವಾಗ ಕಾರು ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಜಾರ್ಜ್​ ಕಾರಿನ ಬಾಗಿಲು ತೆರೆದು ಓಡಿ ಹೋದ. ಇದನ್ನು ನೋಡಿ ನಾನು ಆಘಾತಕ್ಕೆ ಒಳಗಾದೆ. ಆತನನ್ನು ಹಿಂಬಾಲಿಸಲು ಯತ್ನಿಸಿದೆ. ಆದರೆ, ಆತ ಸಿಗಲಿಲ್ಲ. ಆತನ ಪರವಾಗಿ ನಿಲ್ಲುವುದಾಗಿ ನಾನು ಮತ್ತು ನನ್ನ ಕುಟುಂಬದವರು ಭರವಸೆ ನೀಡಿದ್ದೆವು. ಆದರೂ ಆತ ಓಡಿ ಹೋಗಿದ್ದಾನೆ ಎಂದು ಹೆಂಡತಿ ದೂರಿನಲ್ಲಿ ತಿಳಿಸಿದ್ದಾಳೆ.

RELATED TOPICS:
English summary :The day after the wedding, the husband left his wife in Bangalore traffic and escaped!

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...