Sat,May18,2024
ಕನ್ನಡ / English

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಸಂಚಾಲಕರು! | JANATA NEWS

10 Mar 2023
1350

ಬೆಂಗಳೂರು : ಕರ್ನಾಟಕದ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ.

ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬಸವರಾಜ ಬೊಮ್ಮಾಯಿ‌ ನೇಮಕವಾಗಿದ್ದರೆ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ.

ಪ್ರಚಾರ ಸಮಿತಿಗೆ 25 ಸದಸ್ಯರು, ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ಸದಸ್ಯರನ್ನ ನೇಮಕ ಮಾಡಲಾಗಿದೆ.

ಪ್ರಚಾರ ಸಮಿತಿಗೆ ಸಿಎಂ ಬೊಮ್ಮಾಯಿ‌ ಅಧ್ಯಕ್ಷರಾಗಿದ್ದು, ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಜಗದೀಶ ಶೆಟ್ಟರ್, ಡಿ.ವಿ.ಸದಾನಂದ ಗೌಡ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯಾಧ್ಯಕ್ಷ, ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯದ ಸಚಿವರು, ಸಂಸದ ಹಾಗೂ ಶಾಸಕರನ್ನು ಒಳಗೊಂಡ 25 ಸದಸ್ಯ ಬಲದ ಪ್ರಚಾರ ಸಮಿತಿ ರಚನೆಯಾಗಿದೆ.

ಇನ್ನು ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ನಾಯಕರನ್ನು ನೇಮಕ ಮಾಡಲಾಗಿದ್ದು, ಚುನಾವಣಾ ನಿರ್ವಹಣಾ ಸಮಿತಿಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಇನ್ನಿತರ ಪದಾಧಿಕಾರಿಗಳು ಸೇರಿ 14 ಸದಸ್ಯ ಬಲ ಹೊಂದಿದೆ.

RELATED TOPICS:
English summary :Bommai as BJP election campaign committee president, Shobha Karandlaje as organizer!

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...