Sun,Apr28,2024
ಕನ್ನಡ / English

ಅಭಿವೃದ್ಧಿ ಆಗಬೇಕು ಅಂದರೆ ಬಿಜೆಪಿ ಬೇಕು, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲ: ಸುಮಲತಾ | JANATA NEWS

10 Mar 2023
2365

ಮಂಡ್ಯ : ದೇಶವನ್ನು ಸುಸ್ಥಿರವಾಗಿ ಮುನ್ನಡೆಸಿಕೊಂಡು ಹೋಗುವ ನಾಯಕತ್ವ ನರೇಂದ್ರ ಮೋದಿಯವರದ್ದು. ನಾನು ನಾಲ್ಕು ವರ್ಷಗಳ ಹಿಂದೆ ಪಕ್ಷೇತರಳಾಗಿ ಸ್ಪರ್ಧಿಸಿದ್ದೆ. ಸ್ವಾಭಿಮಾನದ ಹೆಸರಿನಲ್ಲಿ ಮತ ಕೇಳಿದ್ದ ನಾನು ಇಂದಿಗೂ ಸ್ವಾಭಿಮಾನವಾಗಿಯೇ ಮುಂದುವರಿಯುತ್ತೇನೆ ಮತ್ತು ಕೊನೆ ಉಸಿರು ಇರುವವರೆಗೂ ಸ್ವಾಭಿಮಾನಳಾಗಿರುತ್ತೇನೆ ಎಂದು ಮಾತು ಕೊಡುತ್ತೇನೆ ಎಂದರು.

ನಾನು ಪಕ್ಷೇತರ ಸದಸ್ಯೆ. ಈ ಜಿಲ್ಲೆಯಲ್ಲಿ ಸಾಕಷ್ಟು ಯೋಜನೆಗಳನ್ನು ನಾನು ಜಾರಿಗೆ ತಂದಿದ್ದೇನೆ. ಈ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರವೇ ಕಾರಣ. ಈ ಕಾರಣಕ್ಕೆ ನಾನು ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ನೀಡುತ್ತೇನೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

ಮಂಡ್ಯದ ಕಲುಷಿತ ರಾಜಕೀಯವನ್ನು ಸ್ವಚ್ಛಗೊಳಿಸಲು ನಾನು ಮೋದಿ ಅವರಿಗೆ ಬೆಂಬಲ ನೀಡುತ್ತೇನೆ. ನನ್ನ ನಿರ್ಧಾರದಲ್ಲಿ ರಿಸ್ಕ್ ಇರಬಹುದು. ಆದರೆ ಜನರ ಅಭಿವೃದ್ಧಿ‌ ಮುಖ್ಯ. ಈ ಕಾರಣಕ್ಕೆ ನಾನು ರಿಸ್ಕ್‌ ತೆಗೆದುಕೊಂಡು ನಿರ್ಧಾರ ಮಾಡಿದ್ದೇನೆ.

ಜೆಡಿಎಸ್‌ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಎಂಪಿ ಅನ್ನೋದು ಇರಲಿ, ಒಬ್ಬ ಮಹಿಳೆ ಅನ್ನುವುದನ್ನೂ ಲೆಕ್ಕಿಸಿದೇ, ನನ್ನ ತೆಜೋವಧೆ ಮಾಡುತ್ತಲೇ ಬಂದರು. ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ನಿಲ್ಲಿಸಿದೆ. ಆ ಕಾರಣಕ್ಕಾಗಿ ನನ್ನ ಮೇಲೆ ಹಲ್ಲೆ ಯತ್ನಗಳು ನಡೆದವು ಎಂದು ಬೇಸರ ವ್ಯಕ್ತಪಡಿಸಿದರು.

ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯಾಗುತ್ತಿದೆ. ನಾನು ಭಾರತೀಯ ಎಂದು ತಲೆ ಎತ್ತುವಂತೆ ಮೋದಿ ಮಾಡಿದ್ದಾರೆ. ಯಡಿಯೂರಪ್ಪ ಅವರು ಸಿಎಂ ಆದಾಗ ಕೆಆರ್‍ಎಸ್‍ನಲ್ಲಿ ಬಾಗಿನ ಅರ್ಪಿಸಿದ್ದರು. ಅದಕ್ಕೂ ಮೊದಲು ದೆಹಲಿಯಲ್ಲಿ ನನ್ನ ಭೇಟಿ ಮಾಡಿ ಮಂಡ್ಯಗೆ ಏನು ಮಾಡಬೇಕೆಂದು ನನ್ನ ಕೇಳಿದ್ದರು. ಆಗ ಮೈಶುಗರ್ ಕಾರ್ಖಾನೆ ಓಪನ್ ಮಾಡಿಸಿ ಎಂದೆ. ಆಗ ಪರ ವಿರೋಧ ಎಲ್ಲವೂ ಬಂದಿತ್ತು. ಆದರೂ ಯಡಿಯೂರಪ್ಪ ಅವರು ಸುಮಲತಾ ಹೇಳಿದ್ದಾರೆ ಎಂದು ಮೈಶುಗರ್ ಓಪನ್ ಮಾಡಿಸಿದರು.

ಬೊಮ್ಮಾಯಿ ಅವರು 50 ಕೋಟಿಯನ್ನು ನೀಡಿದರು. ಈ ಅಭಿವೃದ್ಧಿ ಆಗಿದ್ದು ಬಿಜೆಪಿಯಿಂದ. ನನಗೆ ಬಿಜೆಪಿ ಬೆಂಬಲ ನೀಡಿದೆ. ಅಭಿವೃದ್ಧಿ ಆಗಬೇಕು ಅಂದರೆ ಬಿಜೆಪಿ ಬೇಕು. ಅದಕ್ಕೆ ನಾನು ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಬೆಂಬಲಿಸುತ್ತಿದ್ದೇನೆ ಎಂದು ತಿಳಿಸಿದರು.

ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆಯಾಗುವುದಿಲ್ಲ. ಸದ್ಯ ಬಿಜೆಪಿ ಸೇರ್ಪಡೆಗೆ ಕೆಲವು ತಾಂತ್ರಿಕ ತೊಂದರೆಗಳಿವೆ. ಮೋದಿ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಳಜಿ ಹೊಂದಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಬಾಹ್ಯ ಬೆಂಬಲ ನೀಡಿತ್ತು. ಅಂಬರೀಶ್ ಹೆಸರಿಗೆ ಕಳಂಕ ತರುವ ಕೆಲಸ ನಾನು ಮಾಡುವುದಿಲ್ಲ. ಈ ಜನ್ಮದಲ್ಲಿ ನಾನೆಂದೂ ಕಳಂಕ ತರುವ ಕೆಲಸ ಮಾಡುವುದಿಲ್ಲ. ನಾನು ರಾಜಕಾರಣ ಬಿಡುತ್ತೇನೆ ಹೊರತು ಸ್ವಾಭಿಮಾನ ಬಿಡಲ್ಲ. ಪ್ರಾಣ ಬಿಟ್ಟರು ಕೂಡ ನಾನು ಮಂಡ್ಯ ಬಿಡುವುದಿಲ್ಲ ಎಂದು ಸಂಸದೆ ಘೋಷಿಸಿದರು.

RELATED TOPICS:
English summary :Development needs BJP, I fully support Narendra Modi-led BJP govt: Sumalta

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...