Sat,May04,2024
ಕನ್ನಡ / English

ಹಿಂದುಳಿದ ವರ್ಗಗಳ 1.14 ಲಕ್ಷ ಫಲಾನುಭವಿಗಳಿಗೆ 900 ಕೋಟಿ ರೂ. ಹಣ ಬಿಡುಗಡೆ | JANATA NEWS

11 Mar 2023
2390

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂದುಳಿದ ವರ್ಗಗಳ ವಿವಿಧ ನಿಗಮಗಳ ವತಿಯಿಂದ 1.14 ಲಕ್ಷ ಫಲಾನುಭವಿಗಳಿಗೆ 900 ಕೋಟಿ ರೂ.ಗಳನ್ನು ಇಂದು ಬಿಡುಗಡೆ ಮಾಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ವಿವಿಧ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಯಾರಿಗೋಸ್ಕರ ಈ ಶಕ್ತಿ ಸೌಧ ಕಟ್ಟಿದ್ದಾರೆ ಅವರು ಸರ್ಕಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅದರ ಲಾಭವನ್ನು ಪಡೆಯುವುದು ವ್ಯವಸ್ಥೆ ನಿಜವಾದ ಪ್ರಜಾಪ್ರಭುತ್ವದ ವ್ಯವಸ್ಥೆ ಎಂದರು.

ಸರ್ಕಾರ ಜನರಿಂದ ಸ್ಥಾಪಿತವಾಗಿದ್ದು, ಇದರ ಅರಿವಿನಿಂದ ಈ ಸೌಧದಲ್ಲಿ ಕೆಲಸ ಮಾಡಬೇಕು. ನ್ಯಾಯ ಕೊಡುವ ಭ್ರಮೆ ಹುಟ್ಟಿಸುವುದರಿಂದ ಬದುಕು ಬಂಗಾರವಾಗೋಲ್ಲ. ಹುಸಿ ಭರವಸೆಯನ್ನ ಕೊಟ್ಟು ನ್ಯಾಯವನ್ನು ನೀಡಲಾಗದು. ವಸ್ತುನಿಷ್ಠವಾಗಿ ಬದುಕಿನಲ್ಲಿ ಸ್ವಾಭಿಮಾನ ಬದುಕನ್ನ ಬದಕಲು ಸಾಧ್ಯವೆಂದು ಮನಗಂಡು ಸರ್ಕಾರ ಕಾರ್ಯಕ್ರಮ ರೂಪಿಸಿದಾಗ ಮಾತ್ರ ಬದಲಾವಣೆ ಸಾಧ್ಯ ಎಂದರು.

ಹಿಂದುಳಿದವರ ಬದುಕು ಹಸನಾದಾಗ ಪ್ರಜಾಪ್ರಭುತ್ವದ ಗೆಲುವು ಆಗುತ್ತದೆ. ಸಮಯ ಬಂದಾಗ ನಿಮ್ಮ ಪರವಾದ ನಿರ್ಣಯ ತೆಗೆದುಕೊಳ್ಳುವವರೇ ನಿಜವಾದ ಹಿಂದುಳಿದ ವರ್ಗಗಳ ನಾಯಕರು ಎಂದರು.

ಇಂದು ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡುತ್ತಿದ್ದು, ಇದನ್ನ 75 ವರ್ಷಗಳಿಂದ ಮಾಡಿದ್ದರೆ ಇಂದು ಇದರ ಅವಶ್ಯಕತೆ ಇರಲಿಲ್ಲ. ದೊಡ್ಡ ಪ್ರಮಾಣದ ಉನ್ನತ ಶಿಕ್ಷಣಕ್ಕೆ ಈ ಅನುದಾನ ಬಳಕೆ ಮಾಡಬಹುದಿತ್ತು. ಎಲ್ಲರಿಗೂ ಸೂರು ಸಿಕ್ಕಿದ್ದರೆ ಮನೆ ಕಟ್ಟುವ ಅವಕಾಶವಿರುತ್ತಿರಲಿಲ್ಲ. ಸ್ವಯಂ ಉದ್ಯೋಗ ಸಿಕ್ಕಿದ್ದಾರೆ ಇತರರಿಗೆ ಸಹಾಯ ಮಾಡಬಹುದಿತ್ತು. ಇದ್ಯಾವುದು ಆಗಲಿಲ್ಲ.

ಇನ್ನು ಮುಂದಾದರೂ ಬದಲಾವಣೆಯಾಗಬೇಕು.ನಾವು ನೀಡುವ ಕಾರ್ಯಕ್ರಮಗಳು ನಿಮ್ಮ ಹಕ್ಕು. ನಾವು ಯಾವುದೇ ಉಪಕಾರ ಮಾಡುತ್ತಿಲ್ಲ. ಒಂದು ಸರ್ಕಾರ ಸ್ಪಂದನಾಶೀಲ ಹಾಗೂ ಸೂಕ್ಷ್ಮವಾಗಿದ್ದರೆ ನಿಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸರಿಯಾದ ಕಾರ್ಯಕ್ರಮ ಕೊಡಬಹುದು ಎಂದರು.

ಗಂಗಾ ಕಲ್ಯಾಣ ಯೋಜನೆಯಡಿ 19 ಸಾವಿರ ಫಲಾನುಭವಿಗಳಿಗೆ ಬೇರೆ ಬೇರೆ ನಿಗಮಗಳ ವತಿಯಿಂದ ಕೊಳವೆಬಾವಿ ಮಂಜೂರು ಮಾಡಲಾಗಿದೆ. ಪಂಚವಾರ್ಷಿಕ ಯೋಜನೆಯಂತೆ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದರು. ಐದು ತಿಂಗಳಲ್ಲಿ ಆಗೋದನ್ನು ಐದು ವರ್ಷ ಮಾಡುತ್ತಿದ್ದರು. ನಾವು ನೇರವಾಗಿ ಫಲಾನುಭವಿಗಳ ಖಾತೆಗೆ ಅನುದಾನವನ್ನು ವರ್ಗಾಯಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಗುತ್ತಿಗೆದಾರನಿಗೆ ಸಹಾಯ ಮಾಡೋ ಕೆಲಸ ನಾವು ಮಾಡಿಲ್ಲ ಎಂದರು.

ದೇವರಾಜ ಅರಸು ಹಿಂದುಳಿದ ಆಯೋಗ ರಚಿಸಿ ಹಿಂದುಳಿದವರಿಗೆ ಮೀಸಲಾತಿ ನೀಡಿದ ನಾಯಕ ಡಿ.ದೇವರಾಜ ಅರಸು ಅವರು. ರೈತ ಕಾರ್ಮಿಕರಿಗೆ ವಿದ್ಯಾ ನಿಧಿ ವಿಸ್ತರಿಸಲಾಗಿದೆ. ಸಫಾಯಿ ಕರ್ಮಚಾರಿಗಳಿಗೆ 11, 141 ಜನರೊಗೆ ಖಾಯಂ ಗೊಳಿಸಿ ಒಟ್ಟು 24 ಸಾವಿರ ಪೌರ ಕಾರ್ಮಿಕರಿಗೆ ಖಾಯಂ ಮಾಡಿದಲಾಗಿದೆ. ಸ್ಮಶಾನ ಕಾರ್ಮಿಕರ ಜೀವನಕ್ಕೆ ಭದ್ರತೆ ನೀಡಿದೆ. ಕುರಿಗಾಹಿಗಳಿಗೆ 350 ಕೋಟಿ ವೆಚ್ಚದಲ್ಲಿ ಸಹಾಯ, ಲಮಾಣಿ ಜನಾಂಗಕ್ಕೆ ಹಕ್ಕು ಪತ್ರ ನೀಡಿದೆ. ೫೦ ಸಾವಿರ ಜನರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟಿದ್ದಾರೆ.

ಕುರುಬರಹಟ್ಟಿ ಗೊಲ್ಲರ ಹಟ್ಟಿ ಲಮಾಣಿ ಸಮುದಾಯಕ್ಕೆ ಒಂದು ವಾರದೊಳಗೆ 1.ಲಕ್ಷ ಜನರಿಗೆ ಹಕ್ಕು ಪತ್ರ ನೀಡಲಾಗುವುದು.ಹೊಲದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಒಂದು ಸಾವಿರ ರೂಪಾಯಿ ಕೊಡುತ್ತೇವೆ. ವಿದ್ಯಾರ್ಥಿನಿಯರಿಗೆ ಉಚಿತ ಪಾಸ್ ನೀಡುವ ಕಾರ್ಯಕ್ರಮ ಜಾರಿಯಾಗಿದೆ ಬಜೆಟ್ ನಂತರ 850 ಕೋಟಿ ರೂಪಾಯಿ ಎಲ್ಲಾ ನಿಗಮಗಳಿಗೆ ನೀಡಲಾಗಿದೆ ಎಂದರು.

RELATED TOPICS:
English summary :900 crores to 1.14 lakh beneficiaries belonging to backward classes. Release of funds

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...