Sun,Apr28,2024
ಕನ್ನಡ / English

ಮೈಕ್ ಹಾಕಿ ಕೂಗಿದ್ರೆ ಮಾತ್ರ ಅಲ್ಲಾನಿಗೆ ಕಿವಿ ಕೇಳೋದಾ? ವಿವಾದಾತ್ಮಕ ಹೇಳಿಕೆ ನೀಡಿದ ಕೆ.ಎಸ್.ಈಶ್ವರಪ್ಪ | JANATA NEWS

13 Mar 2023
1115

ಮಂಗಳೂರು : ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಇಲ್ಲದೆ ಕೂಗಿದರೆ ಆಜಾನ್ ಕೇಳುವುದಿಲ್ಲವೇ? ಅಲ್ಲಾನೇನು ಕಿವುಡನೇ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೊಂದು ವಿವಾದದ ಕಿಡಿ ಹೊತ್ತಿಸಿದ್ದಾರೆ.

ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾಜಿ ಸಚಿವ ಈಶ್ವರಪ್ಪ ವಿವಾದದ ಕಿಡಿ ಹೊತ್ತಿಸಿದ್ದಾರೆ. ಆಜಾನ್ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದಾರೆ.

ಭಾಷಣ ವೇಳೆ ಈಶ್ವರಪ್ಪ ಮಾತನಾಡುವಾಗ ಆಜಾನ್ ಕೇಳಿ ಬಂದಿದೆ. ಇದರಿಂದ ಸಿಡಿಮಿಡಿಯಾದ ಈಶ್ವರಪ್ಪ, ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಅಂತ ಹೇಳಿದ್ದಾರೆ.

ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಆದರೆ ಮೈಕ್​​​ನಲ್ಲಿ ಕೂಗಿದ್ರೆ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ? ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ‌. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡಿದುಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಎಂದು ಕೇಳಬೇಕಾಗುತ್ತದೆ ಅಂತ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ಕಡಿವಾಣ ಬೀಳಲಿದೆ. ಸುಪ್ರೀಂಕೋರ್ಟ್ ಆದೇಶವಿದ್ದು, ಮುಂದಿನ ದಿನಗಳಲ್ಲಿ ಈ ಸಮಸ್ಯೆ ಇತ್ಯರ್ಥವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯ ಅವರು ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಹೇಳುತ್ತಾರೆ ಎಂದು ಈಶ್ವರಪ್ಪ ಹೇಳಿದರು.

RELATED TOPICS:
English summary :Do you listen to Allani only if you pick up the mic and shout? K.S.Eshwarappa gave a controversial statement

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...