Mon,May13,2024
ಕನ್ನಡ / English

ರಾಜ್ಯದ ನಿರುದ್ಯೋಗಿ ಯುವಕರಿಗಾಗಿ ಯುವ ನಿಧಿ ಯೋಜನೆ, ಇದು ಕಾಂಗ್ರೆಸ್​​ ಪಕ್ಷದ ವಾಗ್ದಾನ: ರಾಹುಲ್ ಗಾಂಧಿ | JANATA NEWS

20 Mar 2023
2004

ಬೆಳಗಾವಿ : ಬೆಳಗಾವಿಯಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾಗವಹಿಸಿ ಮಾತನಾಡಿ, ಭಾರತ ಜೋಡೋ ಯಾತ್ರೆ ಕರ್ನಾಟಕದ ಮೂಲಕ ಸಾಗಿದ ಸಂದರ್ಭದಲ್ಲಿ ಅಭೂತಪೂರ್ವ ಬೆಂಬಲ ನೀಡಿ ಯಾತ್ರೆ ಯಶಸ್ಸುಗೊಳಿಸಿದ್ದಿರಿ.ಅದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಯಾತ್ರೆ ವೇಳೆ ದೊಡ್ಡ..ದೊಡ್ಡ ರಥಗಳು ಇರಲಿಲ್ಲ. ಹಿಂಸೆ ಇರಲಿಲ್ಲ ಬದಲಾಗಿ ಸಹೋದರತ್ವ ಇತ್ತು. ದೇಶದ ಪ್ರತಿ ಕಡೆ ಬೆಂಬಲ ಸಿಕ್ಕಿದೆ. ಯಾತ್ರೆಯಲ್ಲಿ ಬಹಳಷ್ಟು ಜನರ ಜೊತೆ‌ ಮಾತನಾಡಿದ್ದೇನೆ. ಕರ್ನಾಟಕದಲ್ಲಿ ಕೆಲವು ಯುವಕರು ನನ್ನ ಪ್ರಶ್ನೆ ಮಾಡುತ್ತಾರೆ. ಯಾವುದೇ ಡಿಗ್ರಿ ಆದ್ರೂ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ. ದೇಶದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕದಲ್ಲಿದೆ ಎಂದು ಕಿಡಿಕಾಡಿದ್ದಾರೆ.

ರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮುಂದಿನ ಐದು ವರ್ಷಗಳ ಅವಧಿಯಲ್ಲಿ 10 ಲಕ್ಷ ಉದ್ಯೋಗಗಳನ್ನು ನೀಡುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ವಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ' ಎಂದು ಯುವಕರಿಗೆ ರಾಹುಲ್‌ ಭರವಸೆ ನೀಡಿದರು.

janata

ರಾಜ್ಯದ ನಿರುದ್ಯೋಗಿ ಯುವಕರಿಗಾಗಿ 'ಯುವ ನಿಧಿ' ಯೋಜನೆಯನ್ನು ನಮ್ಮ ಸರ್ಕಾರ ಹಮ್ಮಿಕೊಳ್ಳಲಿದೆ ಎಂದು ರಾಹುಲ್‌ ಹೇಳಿದರು. ಎರಡು ವರ್ಷ ನಿರುದ್ಯೋಗ ಯುವಕರಿಗೆ ಭತ್ಯೆ ನೀಡುತ್ತೇವೆ. ಯುವಕರಿಗೆ ಕಷ್ಟ ನೋಡದೆ ಈ ಗ್ಯಾರಂಟಿ ಯೋಜನೆ ತಂದಿದ್ದೇವೆ. ೧೦ ಲಕ್ಷ ಯುವಕರಿಗೆ ಐದು ವರ್ಷದಲ್ಲಿ ಉದ್ಯೋಗ ನೀಡುವ ಮೂಲಕವಾಗಿ ರಾಜ್ಯದ ಸರ್ಕಾರಿ ಉದ್ಯೋಗಗಳನ್ನು ಭರ್ತಿ‌ ಮಾಡುತ್ತೇವೆ. ಇದು‌ ಕಾಂಗ್ರೆಸ್ ಪಕ್ಷದ ವಾಗ್ದಾನ ಎಂದಿದ್ದಾರೆ.

'ಚುನಾವಣೆಯಲ್ಲಿ ಗೆದ್ದ ನಂತರ ಯುವ ನಿಧಿ ಯೋಜನೆಯನ್ನು ತಕ್ಷಣವೇ ರಾಜ್ಯದಲ್ಲಿ ಜಾರಿಗೆ ತರಲಾಗುವುದು. ಪದವಿ ಪಡೆದಿರುವ ನಿರುದ್ಯೋಗಿಗಳಿಗೆ 3000 ರೂ. ನೀಡಲಾಗುತ್ತದೆ. ಡಿಪ್ಲೋಮಾ ಹೊಂದಿರುವ ನಿರುದ್ಯೋಗಿಗಳಿಗೆ 1500 ರೂ. ಗಳನ್ನು ನೀಡಲಾಗುತ್ತದೆ. ಇದು ಎರಡು ವರ್ಷಗಳ ವರೆಗೆ ಮುಂದುವರಿಯುತ್ತದೆ' ಎಂದೂ ಅವರು ಘೋಷಿಸಿದರು.

ಈ ದೇಶ ಇಬ್ಬರ ದೇಶವಲ್ಲ.. ಅದಾನಿ ದೇಶ ಅಲ್ಲ ರೈತರು, ಮಹಿಳೆಯರು, ಯುವಕರ ದೇಶವಾಗಿದೆ. ಎಸ್ಸಿ, ಎಸ್ಟಿ ‌ಮೀಸಲಾತಿ ಈಗಾಗಲೇ ಸರ್ಕಾರ ಘೋಷಣೆ ‌ಮಾಡಿದೆ. ಈ ಘೋಷಣೆ ಮಾಡಿದ್ದನ್ನು ಸರ್ಕಾರ ‌ಪೂರ್ಣ ಮಾಡಬೇಕು. ರಾಜ್ಯದ ನಾಯಕರಿಗೆ ‌ನಾನು‌ ಭರವಸೆ ಕೊಟ್ಟಿದ್ದೇನೆ. ನೀವು ಎಲ್ಲಿಗೆ ಕರೆದರೂ‌ ನಾನು ಬರುತ್ತೇನೆ.ಎಲ್ಲೇ ಪ್ರಚಾರ ಇದ್ದರೂ ಪ್ರಚಾರಕ್ಕೆ ಬರುತ್ತೇನೆ. ಎಲ್ಲ ಸೇರಿ ಬಿಜೆಪಿ ಸೋಲಿಸೋಣ ಎಂದು ಹೇಳಿದ್ದಾರೆ.

RELATED TOPICS:
English summary :Creation of 10 lakh jobs in the state in 5 years, filling of government posts: Rahul Gandhi in Belgaum

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...