Sat,May04,2024
ಕನ್ನಡ / English

ಉರಿಗೌಡ ನಂಜೇಗೌಡ್ರು ಬಗ್ಗೆ ಮಂಡ್ಯದಲ್ಲಿ ನಮ್ಮ ತಂಡದಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ: ಸಿ.ಟಿ. ರವಿ | JANATA NEWS

22 Mar 2023
2008

ಚಿಕ್ಕಮಗಳೂರು : ಮಂಡ್ಯದಲ್ಲಿ ನಮ್ಮ ತಂಡವು ಟಿಪ್ಪುವನ್ನು ಕೊಂದಿದ್ದ ಉರಿಗೌಡ ನಂಜೇಗೌಡರ ಬಗ್ಗೆ ದಾಖಲೆ ಸಂಗ್ರಹಿಸುವ ಕೆಲಸ ಮಾಡುತ್ತಿದೆ. ದಾಖಲೆ ಸಿಕ್ಕ ಕೂಡಲೇ ಅದನ್ನು ಆದಿಚುಂಚನಗಿರಿ ಶ್ರೀಗಳ ಮುಂದಿಟ್ಟು ಚರ್ಚೆ ನಡೆಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ತಿಳಿಸಿದ್ದಾರೆ.

ಸಿ.ಟಿ.ರವಿ ಉರಿಗೌಡ, ಅಶ್ವಥ್ ನಾರಾಯಣ್ ನಂಜೇಗೌಡ ಎಂಬಂತೆ ಬಿಂಬಿಸಿ ಸೋಶಿಯಲ್ ಮೀಡಿಯಾದಲ್ಲಿ ಆಧಾರ್ ಕಾರ್ಡ್ ಹರಿಬಿಟ್ಟಿರುವುದನ್ನು ಸಮರ್ಥಿಸಿಕೊಂಡರು. ಹೌದು, ನಾವು ಅದೇ. ನಮಗೆ ಖುಷಿ, ಹೆಮ್ಮೆ ಇದೆ ಎಂದರು. ಗುಲಾಮಿ ಮಾನಸಿಕತೆಯಲ್ಲಿ ಬದುಕುವ ಜನರಿಗಿಂತ ಹಾಗೆ ಕರೆಸಿಕೊಳ್ಳುವುದು ಒಳ್ಳೆಯದು ಎಂದು ಕಾಂಗ್ರೆಸ್ ಪ್ರಚಾರಕ್ಕೆ ಟಾಂಗ್ ನೀಡಿದರು.

ಸ್ಥಳೀಯವಾಗಿ ಮಾಹಿತಿ ಕಲೆ ಹಾಕುವ ಕೆಲಸ ಮಾಡಲಾಗುತ್ತಿದೆ. ಮಾಹಿತಿ ಕಲೆ ಹಾಕಲು ಒಂದು ತಂಡ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಉರಿಗೌಡ, ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು ಎಂಬುದರ ಬಗ್ಗೆ ಸಾಕ್ಷ್ಯ ಇದೆ. ಸುವರ್ಣ ಮಂಡ್ಯ ಪುಸ್ತಕದಲ್ಲಿ ಉರಿಗೌಡ, ನಂಜೇಗೌಡ ಹೆಸರುಗಳ ಉಲ್ಲೇಖ ಮಾಡಲಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿ ಸಂಗ್ರಹಿಸಿ ಶ್ರೀಗಳಿಗೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಸ್ಥಳೀಯವಾಗಿ ಸಂಶೋಧನೆ ನಡೆಸುತ್ತಿರುವ ತಂಡಕ್ಕೆ ಟಿಪ್ಪು ಹಿಂದೂದ್ರೋಹಿ ಎಂಬ ಸಾಕಷ್ಟು ಮಾಹಿತಿಗಳು ಸಿಕ್ಕಿವೆ. ಟಿಪ್ಪು ಸುಲ್ತಾನ್‌ ತನ್ನ ಆಡಳಿತದಲ್ಲಿ ಮತಾಂತರ ಮಾಡಿದ್ದು, ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿದ್ದ ವಿಜೃಂಭಣೆಯ ದಸರಾ ಉತ್ಸವ ನಿಲ್ಲಿಸಿದ್ದರ ಬಗ್ಗೆ ದಾಖಲೆಗಳಿವೆ.

ಮುಂದುವರೆದು ಆಂಜನೇಯ ಸ್ವಾಮಿ ದೇವಸ್ಥಾನವನ್ನು ಜಾಮಿಯಾ ಮಸೀದಿ ಮಾಡಿದ್ದು, ಮಂಡ್ಯದ ಸುತ್ತಮುತ್ತಲ ಗ್ರಾಮಗಳ ಹೆಸರು ಬದಲಾಯಿಸಿರುವ ಬಗ್ಗೆಯೂ ಅಧಿಕೃತ ದಾಖಲೆಗಳು ಸಿಕ್ಕಿವೆ ಎಂದು ಸಿಟಿ ರವಿ ಅವರು ಮಾಹಿತಿ ನೀಡಿದರು.

ಟಿಪ್ಪುವನ್ನು ನೀವು ಹೇಗೆ ಮೈಸೂರಿನ ಹುಲಿ, ಧರ್ಮಸಹಿಷ್ಣು, ಕನ್ನಡ ಪ್ರೇಮಿ ಅಂತ ಕರೆಯುತ್ತೀರಾ. ಆತ ತನ್ನ ಖಡ್ಗದ ಮೇಲೆ ಕಾಫಿಗರ ರಕ್ತಕ್ಕಾಗಿ ತನ್ನ ಖಡ್ಗ ತಹತಹಿಸುತ್ತಿದೆ ಎಂದು ಅರೆಬಿಕ್ ಭಾಷೆಯಲ್ಲಿ ಬರೆಸಿಕೊಂಡಿದ್ದ. ರಕ್ತಕ್ಕಾಗಿ ಹಾತೊರೆಯುತ್ತಿದ್ದವನನ್ನು ಮತಾಂಧ ಅನ್ನದೆ ಇನ್ನೇನು ಹೇಳಬೇಕು ಎಂದು ಟಿಪ್ಪು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Information is being collected by our team in Mandya about Urigowda Nanjegaudru: C.T. Ravi

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...