Sun,May19,2024
ಕನ್ನಡ / English

ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಸೇರ್ಪಡೆ | JANATA NEWS

22 Mar 2023
1729

ಬೆಂಗಳೂರು : ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದಲ್ಲಿ ಬುಧವಾರ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಚಿಂಚನಸೂರು ಅವರಿಗೆ ಪಕ್ಷದ ಶಾಲು ಹಾಕುವ ಮೂಲಕ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಳ್ಳಲಾಯಿತು.

ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಬಾಬುರಾವ್ ಚಿಂಚನಸೂರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸಮಾಧಾನಗೊಂಡು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಒಂದು ತಿಂಗಳ ಹಿಂದೆಯಷ್ಟೇ ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಸೋಲಿಸುವ ಸವಾಲು ಹಾಕಿದ್ದರು. ಇದೀಗ ಬಾಬುರಾವ್ ಚಿಂಚನಸೂರು ಅವರು ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ನಂತರ ಮಾತನಾಡಿದ ಅವರು, ''ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ದೇಶವೇ ಗುರುತಿಸುವ ಮಟ್ಟಿಗೆ ಬೆಳೆದಿದ್ದಾರೆ. ಅವರ ಅಧ್ಯಕ್ಷತೆ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ. ಹೈದರಾಬಾದ್ ಕರ್ನಾಟಕ ಖರ್ಗೆ ಅವರ ಭದ್ರಕೋಟೆ, ಅದನ್ನು ಛಿದ್ರ ಮಾಡಬೇಕು ಅಂತ ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ ಖರ್ಗೆ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಹೈದರಾಬಾದ್ ಕರ್ನಾಟಕದಲ್ಲಿ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಂಡ ಗೆಲವು ಸಾಧಿಸಲಿದೆ. 2023ರಲ್ಲಿ ಬಾಬುರಾವ್ ಚಿಂಚನಸೂರು ಸಾಮರ್ಥ್ಯ ಏನು ಎಂಬುದನ್ನು ತೋರಿಸುತ್ತೇನೆ'' ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಈಗಾಗಲೇ ಹಳ್ಳಿಗಳಿಂದ ರಾಜ್ಯ ಮಟ್ಟದವರೆಗೆ ನೂರಾರು ಅನ್ಯ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕೆಲ ದಿನಗಳ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ನಾಲ್ಕೂವರೆ ವರ್ಷಗಳ ಕಾಲ ಅಧಿಕಾರ ಇದ್ದರೂ ಪುಟ್ಟಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರು ಅವರು ಪರಿಷತ್ ಸದಸ್ಯರಾಗಿ ಒಂದೂವರೆ ವರ್ಷಗಳ ಕಾಲ ಅಧಿಕಾರ ಬಾಕಿ ಇದ್ದರೂ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ನಾನು ಅವರು ಜತೆಯಲ್ಲಿ ಅನೇಕ ಬಾರಿ ಮಂತ್ರಿಯಾಗಿ ಕೆಲಸ ಮಾಡಿದ್ದೇವೆ.

ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡವರ ಕಲ್ಯಾಣವಾಗಿ, ಅವರ ಜೀವನ ಭದ್ರಾವಾಗಲಿದೆ. ಈ ಸಮಾಜಕ್ಕೆ ನ್ಯಾಯ ಸಿಗಲಿದೆ ಎಂದು ನಂಬಿಕೆ ಇಟ್ಟು, ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ವಿಶ್ವಾಸ ಇಟ್ಟು, ಅವರ ಅನುಯಾಯಿಯಾಗಿ ಪಕ್ಷ ಸೇರುತ್ತಿದ್ದಾರೆ. ಅವರ ರಾಜೀನಾಮೆ ನಿನ್ನೆ ಅಂಗೀಕಾರವಾಗಿದ್ದು, ಇಂದು ಹೊಸ ವರ್ಷದ ಹೊಸ ದಿನ ಆರಂಭವಾಗಲಿ ಎಂದು ಪಕ್ಷಕ್ಕೆ ಸೇರುತ್ತಿದ್ದಾರೆ ಎಂದರು

RELATED TOPICS:
English summary :Former minister Baburao Chinchansur joins Congress party

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...