Wed,May08,2024
ಕನ್ನಡ / English

ಹಾಸನದ ಜೆಡಿಎಸ್ ಟಿಕೆಟ್ ಗೊಂದಲ, ನಾಳೆ/ನಾಡಿದ್ದು 2ನೇ ಪಟ್ಟಿ ಬಿಡುಗಡೆ: ಎಚ್​ಡಿಕೆ | JANATA NEWS

04 Apr 2023
1962

ಬೆಂಗಳೂರು : ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧವಾಗಿದೆ. ಇಂದು ಮಂಗಳವಾರ ಆದ್ದರಿಂದ ಪಟ್ಟಿ ಬಿಡುಗಡೆ ಮಾಡಿಲ್ಲ. ನಾಳೆ ಅಥವಾ ಗುರುವಾರ ಬೆಳಗ್ಗೆ ಮಾಡುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನನಗಿಂತ ಹೆಚ್ಚು ಮಾಧ್ಯಮಗಳಿಗೆ ಹಾಸನ ಟಿಕೆಟ್ ಘೋಷಣೆ ಬಗ್ಗೆ ಕುತೂಹಲವಿದೆ. ಅದನ್ನು ಬಿಟ್ಟು ಟಿಕೆಟ್ ಘೋಷಣೆ ಮಾಡಿದರೆ ಇನ್ಯಾವುದೋ ಕಥೆ ಹುಟ್ಟಿಕೊಳ್ಳುತ್ತದೆ. ಹಾಗಾಗಿ ಆ ಪಟ್ಟಿಯಲ್ಲಿ ಹಾಸನದ್ದೂ ಒಳಗೊಂಡಂತೆ ತೀರ್ಮಾನ ಮಾಡಬೇಕು ಎಂಬ ಲೆಕ್ಕಾಚಾರವಿದೆ.

ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೆಗೌಡರು ಬುಧವಾರ ಸಂಜೆ ದೆಹಲಿಯಿಂದ ವಾಪಸ್ ಆಗುತ್ತಾರೆ. ನಂತರವೇ ಎರಡು ಪಟ್ಟಿಯಲ್ಲಿನ ಹೆಸರುಗಳು ಬಹಿರಂಗಗೊಳ್ಳಲಿವೆ ಎಂದರು.

ಮೊದಲ ಪಟ್ಟಿ ಬಿಡುಗಡೆಯಾದಗಲೂ ಯಾವುದೇ ಸಮಸ್ಯೆ ಇರಲಿಲ್ಲ. ಎರಡನೇ ಪಟ್ಟಿ ವೇಳೆ ಹಾಸನದ್ದು ಹೆಚ್ಚು ಪ್ರಚಾರವಾಗಿದೆ. ಹಾಸನ ವಿಚಾರದಿಂದ ಜನತಾದಳಕ್ಕೂ ಹೆಚ್ಚು ಪ್ರಚಾರ ಸಿಕ್ಕಿದೆ. ಇದರಿಂದಾಗಿ ರಾಜ್ಯದಲ್ಲಿ ಶೇ. 2-3 ರಷ್ಟು ನಮ್ಮ ಮತ ಪ್ರಮಾಣ ಹೆಚ್ಚಾಗಲಿದೆ. ಇದರಿಂದ ಜನತಾದಳಕ್ಕೆ ಲಾಭವಾಗಿದೆ. ಇದಕ್ಕೆ ಹಾಸನ ಜಿಲ್ಲೆಯ ಬೆಳವಣಿಗೆಗೆ ಆದ ಕಾರಣಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ನಮ್ಮ ಗುರಿ ಮುಟ್ಟಲು ಯಾವುದೇ ದುಡುಕಿ ತೀರ್ಮಾನ ಮಾಡಲ್ಲ. ಕಾರ್ಯಕರ್ತರ ಅಪೇಕ್ಷೆ, ಗೆಲ್ಲುವ ಮಾನದಂಡದಲ್ಲೇ ಟಿಕೆಟ್ ಕೊಡಲಾಗುವುದು ಎಂದು ತಿಳಿಸಿದರು.

ಪಟ್ಟಿ ರಿಲೀಸ್ ಆಗದ ಹಿನ್ನೆಲೆ ಜೆಡಿಎಸ್ ಪಟ್ಟಿ ವಿಳಂಬ ಆಗುತ್ತಿದೆಯಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಟ್ಟಿ ಬಗ್ಗೆ ಚಿಂತೆ ನಮಗಿಲ್ಲ. ಜೆಡಿಎಸ್ ಪಕ್ಷವು ನಮ್ಮದೇ ಆದ ರೀತಿಯಲ್ಲಿ ಅಭ್ಯರ್ಥಿಗಳನ್ನು ನಿರ್ಧರಿಸಿ ಪಟ್ಟಿ ಬಿಡುಗಡೆ ಮಾಡಲಿದೆ ಎಂದರು.

RELATED TOPICS:
English summary :Hassan JDS ticket confusion, tomorrow/Naiddu 2nd list release: HDK

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...