Thu,May02,2024
ಕನ್ನಡ / English

ನಾನು ಯಾವುದೇ ಚಿತ್ರನಟರನ್ನ ವೈಯಕ್ತಿಕವಾಗಿ ದುರುಪಯೋಗ ಮಾಡಿಕೊಳ್ಳಲ್ಲ, ನನ್ನ ಕಾರ್ಯಕರ್ತರೇ ನನಗೆ ಸ್ಟಾರ್ ಕ್ಯಾಂಪೇನರ್ | JANATA NEWS

05 Apr 2023
1585

ಬೆಂಗಳೂರು : ಚಿತ್ರ ನಟರು ಸಮಾಜದ ಎಲ್ಲಾ ವರ್ಗಕ್ಕೂ ಸೇರಿದವರು. ನಾನು ಯಾವುದೇ ಚಿತ್ರ ನಟರನ್ನು ವೈಯಕ್ತಿಕವಾಗಿ ದುರುಪಯೋಗ ಮಾಡಿಕೊಳ್ಳಲು ಇಷ್ಟ ಪಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಟರನ್ನು ನೋಡಲು ಅಭಿಮಾನಿಗಳು, ಜನರು ಬರುತ್ತಾರೆ, ಜೈಕಾರ ಹಾಕುತ್ತಾರೆ. ಅವರು ಎಲ್ಲಾ ಪಕ್ಷದ ಪರವಾಗಿಯೂ ಪ್ರಚಾರಕ್ಕೆ ಹೋಗುತ್ತಾರೆ. ಅವರಿಗೆ ಸ್ಥಿರತೆ ಇಲ್ಲ. ವೈಯಕ್ತಿಕ ಬಾಂಧವ್ಯದ ಹಿನ್ನೆಲೆ ಹೋಗಬಹುದು. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳುವ ಮೂಲಕ ನಟ ಸುದೀಪ್ ಬೊಮ್ಮಾಯಿ ಪರ ಪ್ರಚಾರಕ್ಕೆ ಬರುವುದಾಗಿ ಘೋಷಣೆ ಮಾಡುತ್ತಿದ್ದಂತೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ನಾನು ಯಾವುದೇ ಚಿತ್ರನಟರನ್ನು ವೈಯಕ್ತಿಕವಾಗಿ ದುರುಪಯೋಗ ಪಡಿಸಿಕೊಳ್ಳಲು ಸಿದ್ದನಿಲ್ಲ. ನಟರು ಸಮಾಜದ ಎಲ್ಲ ವರ್ಗದ ಜನರಿಗೆ ಸೇರಿದವರು. ನನ್ನ ಸ್ವಂತಕ್ಕೆ ದುರುಪಯೋಗ ಪಡಿಸಿಕೊಂಡು ನಟರ ಘನತೆ ಗೌರವವನ್ನು ಸೀಮಿತಗೊಳಿಸಲು ಇಷ್ಟಪಡುವುಲ್ಲ. ಮಮತಾ ಬ್ಯಾನರ್ಜಿ, ಕೆ.ಚಂದ್ರಶೇಖರ್ ರಾವ್ ಕೆಲವೊಂದು ಭಾಗಕ್ಕೆ ಪ್ರಚಾರಕ್ಕೆ ಬರುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್‌ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪರ ಚುನಾವಣಾ ಪ್ರಚಾರ ಮಾಡುತ್ತೇನೆ. ಅವರು ನನ್ನ ಕಷ್ಟಕಾಲದಲ್ಲಿ ಜತೆಗೆ ನಿಂತಿದ್ದು, ಹೀಗಾಗಿ, ಯಾವುದೇ ಪಕ್ಷಕ್ಕೂ ಸೇರ್ಪಡೆಯಾಗದೇ ಬೊಮ್ಮಾಯಿ ಅವರ ಪರ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದ್ದರು.

RELATED TOPICS:
English summary :I do not abuse any actor personally, my activists are star campaigners for me

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...