Tue,May07,2024
ಕನ್ನಡ / English

ಕನ್ನಡಿಗರೇ ಎಚ್ಚರ, ನಂದಿನಿ ಆಪೋಶನಕ್ಕೆ ಸಂಚು, ಅಮುಲ್ ಉತ್ಪನ್ನ ಖರೀದಿಸದಿರಲು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು! | JANATA NEWS

07 Apr 2023
1321

ಬೆಂಗಳೂರು : ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ.ಇದೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕನ್ನಡಿಗರು ಒಮ್ಮತದಿಂದ ಅಮುಲ್ ಉತ್ಪನ್ನಗಳನ್ನು ಖರೀದಿಸುವುದಿಲ್ಲ ಎಂಬ ಪ್ರತಿಜ್ಞೆ ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ದ್ರೋಹ ಚಿಂತನೆ ನಿಲ್ಲಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ ಕುಟುಂಬಗಳ ಜೀವನಾಧಾರವಾಗಿರುವ ಕೆಎಂಎಫ್ ಅನ್ನು ಬಲಿ ಪಡೆಯುವ ಪ್ರಯತ್ನಗಳು ಆರಂಭವಾಗಿವೆ.

ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ನೇರ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ನರೇಂದ್ರ ಮೋದಿ ಮತ್ತು ಅಮಿತ್ ಶಾ ಸಂಚು ಹೂಡಿದ್ದಾರೆ ಎಂದಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ ಎಂದಿದ್ದಾರೆ.

ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿದ್ದೆವು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು.

ಈಗ ಕಡಿಮೆಯಾಗುತ್ತ ಸಾಗಲು ಏನು ಕಾರಣ? ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಇದು ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

RELATED TOPICS:
English summary :Watch out Kannadigas, Nandini is plotting to adopt, all Kannadigas should take a pledge not to buy Amul products!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...