Mon,May13,2024
ಕನ್ನಡ / English

ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ 3ನೇ ಸಂಚು! | JANATA NEWS

08 Apr 2023
2045

ಬೆಂಗಳೂರು : ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ ಸಂಚು ನಡೆಯುತ್ತಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಬಿಡದಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಸಂಚು 1: ಅಮುಲ್ ಜತೆ ನಂದಿನಿ ವಿಲೀನ; ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ, ಸಂಚು 2: ಮೊಸರಿನ ಮೇಲೆ ಹಿಂದಿಯ 'ದಹಿ' ಪದ ಮುದ್ರಣ; ಕನ್ನಡಿಗರ ತೀವ್ರ ವಿರೋಧದಿಂದ ಎರಡನೇ ಸಂಚು ವಿಫಲ. 3ನೇ ಸಂಚನ್ನು ಸಫಲಗೊಳಿಸಲು ಕೇಂದ್ರ ಸರ್ಕಾರ ಅಮುಲ್ ಅನ್ನು ಮುಂದಿಟ್ಟುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ.

ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್ಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ.ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ ಎಂದು ಆರೋಪಿಸಿದ್ದಾರೆ.

ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್ನಲ್ಲಿಯೇ ಕರ್ನಾಟಕದಲ್ಲಿ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಕನ್ನಡಿಗರು ಪ್ರಬಲ ಪ್ರತಿರೋಧ ಒಡ್ಡುತ್ತಿರುವುದರಿಂದ ಕೆಎಂಎಫ್ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ ಎಂದಿದ್ದಾರೆ.

ಅಮುಲ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಶೋಭಾ ಕರಂದ್ಲಾಜೆ ಹೇಳಿಕೆ ಗಮನಿಸಿದ್ದೇನೆ. ಅವರಿಗೆ ಕೆಎಂಎಫ್ ಮೇಲಾಗುವ ದಾಳಿ ಅರಿವಾಗುತ್ತಿಲ್ಲ. ಅವರಿಬ್ಬರೂ ಅದರ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು. ರಾಜ್ಯ ನಾಯಕರು ಗುಜರಾತ್ ನಾಯಕರನ್ನು ಮೆಚ್ಚಿಸಲು ಹೊರಟಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

RELATED TOPICS:
English summary :Now there is a 3rd plot to end the lifeline of Kannadigas Nandini!

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...