Sun,May05,2024
ಕನ್ನಡ / English

ದೇಶದಲ್ಲಿ ಹುಲಿಗಳ ಸಂಖ್ಯೆ 3,167 ಕ್ಕೆ ಏರಿಕೆ ಹೆಮ್ಮೆಯ ಸಂಗತಿ ಎಂದ ಪ್ರಧಾನಿ ಮೋದಿ | JANATA NEWS

09 Apr 2023
1873

ಮೈಸೂರು : ಮೈಸೂರಿನಲ್ಲಿ ಹುಲಿ ಯೋಜನೆಯ ಸುವರ್ಣಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹುಲಿ ಗಣತಿ ವರದಿ ಬಿಡುಗಡೆ ಮಾಡಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಹುಲಿ ಯೋಜನೆಯ 50ನೇ ವರ್ಷಾಚರಣೆ ಹಾಗೂ ಪ್ರಥಮ ಸಂರಕ್ಷಣಾ ಸಮ್ಮೇಳನದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡಿ, ಹುಲಿಗಣತಿ ವರದಿ ಬಿಡುಗಡೆ ಮಾಡಿದ್ದು, ದೇಶದಲ್ಲಿ 2022 ರಲ್ಲಿ ಹುಲಿಗಳ ಸಂಖ್ಯೆ 3,167 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 10 ವರ್ಷಗಳಲ್ಲಿ ಶೇ. 75 ರಷ್ಟು ಹುಲಿಗಳ ಸಂಖ್ಯೆ ಏರಿಕೆಯಾಗಿದೆ. ಭಾರತದಲ್ಲಿ ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಗೌರವದ ಕ್ಷಣ ಎಂದು ತಿಳಿಸಿದ್ದಾರೆ.

ಹುಲಿ ಯೋಜನೆ ದೊಡ್ಡ ಹುಲಿಗಳ ರಕ್ಷಣೆ ಮತ್ತು ಸಂರಕ್ಷಣೆಯಲ್ಲಿ ದಾರಿ ಮಾಡಿಕೊಡುತ್ತದೆ. ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಒಂದು ಭಾಗವಾಗಿದೆ. ಹುಲಿ ಯೋಜನೆಯ ಯಶಸ್ಸು ಭಾರತಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ಹೆಮ್ಮೆಯ ವಿಷಯವಾಗಿದೆ. ಭಾರತವು ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದೆ; ಮತ್ತು ಅದೇ ಸಮಯದಲ್ಲಿ, ವಿಶ್ವದ ಹುಲಿ ಜನಸಂಖ್ಯೆಯ 75% ಭಾರತದಲ್ಲಿದೆ ಎಂದು ಹೇಳಿದ್ದಾರೆ.

ಪರಿಸರಕ್ಕೆ ಸಂಬಂಧಿಸಿದಂತೆ ಭಾರತದ ಪರಂಪರೆಯಲ್ಲಿ ಗೌರವ ಇದೆ. ಈ ಕಾರಣಕ್ಕಾಗಿ ಹುಲಿಗಳ ಸಂಖ್ಯೆ ನಮ್ಮಲ್ಲಿ ಹೆಚ್ಚುತ್ತಿದೆ. ಹಲವು ಸಮುದಾಯಗಳಲ್ಲಿ ಹುಲಿಗಳನ್ನು ಬಂಧು ಎಂದು ಭಾವಿಸಲಾಗುತ್ತದೆ. ಭಾರತದಲ್ಲಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮ ಪರಂಪರೆಯ ಒಂದು ಭಾಗವಾಗಿದೆ. ಜಾಗತಿಕ ಪರಿಸರ ವೈವಿಧ್ಯತೆಗೆ ಭಾರತದ ಕೊಡುಗೆ ಶೇ. 8ರಷ್ಟಿದೆ. ಹುಲಿಗಳ ಸಂರಕ್ಷಣೆಗೆ ವಿವಿಧ ದೇಶಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಭಾರತದಲ್ಲಿ 30 ಸಾವಿರಕ್ಕೂ ಅಧಿಕ ಆನೆಗಳಿವೆ ಎಂದು ತಿಳಿಸಿದರು.

ಹುಲಿ ಯೋಜನೆ 50 ವರ್ಷ ಪೂರೈಸಿದಕ್ಕೆ ಸ್ಮರಣಾರ್ಥವಾಗಿ ಪ್ರಧಾನಿ ಮೋದಿ ನಾಣ್ಯವನ್ನು ಬಿಡುಗಡೆ ಮಾಡಿದರು. ಇದರ ಜೊತೆಗೆ ಪ್ರಧಾನಿ ಮೋದಿ ಇಂಟರ್ನ್ಯಾಷನಲ್ ಬಿಗ್​ ಕ್ಯಾಟ್ಸ್​ ಅಲಯನ್ಸ್​ (ಐಬಿಸಿಎ) ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆ ಮೂಲಕ ಪ್ರಪಂಚದ ಏಳು ಪ್ರಮುಖ ದೊಡ್ಡ ಬೆಕ್ಕುಗಳ ರಕ್ಷಣೆ ಮತ್ತು ಸಂರಕ್ಷಣೆಯ ಮೇಲೆ ಸರ್ಕಾರ ಕೇಂದ್ರೀಕರಿಸುತ್ತದೆ. ಹುಲಿ, ಸಿಂಹ, ಚಿರತೆ, ಹಿಮ ಚಿರತೆ, ಪೂಮಾ, ಜಾಗ್ವಾರ್ ಹಾಗೂ ಚಿರತೆಗಳ ರಕ್ಷಣೆಯನ್ನು ಈ ಯೋಜನೆ ಒಳಗೊಂಡಿರುತ್ತದೆ.

RELATED TOPICS:
English summary :Prime Minister Modi said that the increase in the number of tigers in the country to 3,167 is a matter of pride

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...