Thu,May09,2024
ಕನ್ನಡ / English

ಸಿಆರ್‌ಪಿಎಫ್ ನೇಮಕಾತಿಗೆ ಸ್ಥಳೀಯ ಭಾಷೆಯಲ್ಲಿಯೇ ಮರುಪರೀಕ್ಷೆ ನಡೆಸಿ | JANATA NEWS

10 Apr 2023
2124

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರ ಮತ್ತೊಮ್ಮೆ ಕನ್ನಡಿಗರಿಗೆ ಮೋಸ ಮಾಡಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ, ಇಂಗ್ಲಿಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ ಎಂದು ಹೆಚ್​ಡಿ ಕುಮಾರಸ್ವಾಮಿ ಕೂಡ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ನಲ್ಲಿ ಪರೀಕ್ಷೆ ಬರೆದಿದ್ದಾರೆ. ಈ ಭಾಷೆಯಲ್ಲೇ ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ.

ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷಿನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ. ಇದು ಸ್ಪಷ್ಟ ಎಂದಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ. ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯ ಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರ್ಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ ಎಂದು ಅವರು ಕಿಡಿಕಾರಿದ್ದಾರೆ. ಮುಲಾಜಿಲ್ಲದೆ ಸಿಆರ್ ಪಿಎಫ್ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು ಎಂದು ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.

RELATED TOPICS:
English summary :Retest for CRPF Recruitment in local language itself

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...