Tue,May07,2024
ಕನ್ನಡ / English

ಮನೆ ಮುಂದೆ ನಾಯಿ ಗಲೀಜು ವಿಚಾರಕ್ಕೆ ಜಗಳ, ಬ್ಯಾಟ್ ನಿಂದ ಹೊಡೆದು ವೃದ್ಧನ ಹತ್ಯೆ | JANATA NEWS

11 Apr 2023
1380

ಬೆಂಗಳೂರು : ಮನೆ ಮುಂದೆ ನಾಯಿ ಕರೆದುಕೊಂಡು ಬಂದು ಗಲೀಜು ಮಾಡಿಸುವ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಾಗಿ ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೋಲದೇವನಹಳ್ಳಿಯ ಗಣಪತಿನಗರ ನಿವಾಸಿ 67 ವರ್ಷದ ಮುನಿರಾಜು ಕೊಲೆಯಾದ ವೃದ್ಧ. ಘಟನೆಯಲ್ಲಿ ಮುರುಳಿ ಎಂಬಾತ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಕೃತ್ಯವೆಸಗಿದ ಸಂಬಂಧ ಪ್ರಮೋದ್, ರವಿಕುಮಾರ್ ಹಾಗೂ ಈತನ ಪತ್ನಿ ಪಲ್ಲವಿ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಯಲಹಂಕ ಮೂಲದ ಮುನಿರಾಜು ಕಳೆದ ಮೂರು ವರ್ಷಗಳಿಂದ ಗಣಪತಿ ನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು‌. ಖಾಸಗಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದರು. ಅದೇ ಏರಿಯಾದಲ್ಲಿ ರವಿಕುಮಾರ್ ದಂಪತಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ನಾಯಿಗಳನ್ನ ಸಾಕಿಕೊಂಡಿದ್ದರು‌. ಸ್ನೇಹಿತ ಪ್ರಮೋದ್ ಜೊತೆಗೆ ರವಿ ಆಗಾಗ ನಾಯಿಗಳನ್ನು ಮುನಿರಾಜು ಅವರ ಮನೆ ಮುಂದೆ ಕರೆದೊಯ್ದು ಮಲ - ಮೂತ್ರ ಮಾಡಿಸುತ್ತಿದ್ದ. ಅಲ್ಲದೇ ಅದೇ ಜಾಗದಲ್ಲಿ ಸಿಗರೇಟು ಸೇದುತ್ತಿದ್ದ ಎಂದು ರವಿ ಮತ್ತು ಮುನಿರಾಜುರ ನಡುವೆ ಹಲವು ಬಾರಿ ಮಾತಿನ ಸಂಘರ್ಷ ನಡೆದಿತ್ತು‌‌. ಇದರಿಂದ ಬೇಸತ್ತು ಮುನಿರಾಜು ಅವರಿಬ್ಬರ ವಿರುದ್ಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮುನಿರಾಜು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಮೋದ್ ಮತ್ತು ರವಿಕುಮಾರ್ ಅವರನ್ನು ಠಾಣೆಗೆ ಬರಹೇಳಿ ಇಬ್ಬರಿಗೂ ಬೈದು ಬುದ್ದಿ ಹೇಳಿ ಮುಚ್ಚಳಿಕೆ ಬರೆದು ಕಳುಹಿಸಲಾಗಿತ್ತು. ಆದರೆ ಇಬ್ಬರು ಠಾಣೆಗೆ ಹೋಗಿ ಬಂದ ಮರುದಿನ ಮತ್ತೆ ಮುನಿರಾಜು ಜೊತೆಗೆ ಗಲಾಟೆ ಮಾಡಿದ್ದಾರೆ. ಗಲಾಟೆ ವೇಳೆ ಪ್ರಮೋದ್, ಪತ್ನಿ ಪಲ್ಲವಿ ಮತ್ತು ರವಿಕುಮಾರ್ ಇಬ್ಬರು ಮುನಿರಾಜು ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಪರಿಣಾಮ ಮುನಿರಾಜು ಸಾವನ್ನಪ್ಪಿದ್ದು, ಮುರಳಿ ಎಂಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.

ಕೃತ್ಯವೆಸಗಿದ ಪ್ರಮೋದ್, ರವಿಕುಮಾರ್ ಹಾಗೂ ಇದಕ್ಕೆ ಸಹಾಯ ಮಾಡಿದ ರವಿ ಪತ್ನಿ ಪಲ್ಲವಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

RELATED TOPICS:
English summary :An old man was killed by beating him with a bat in a fight over the mess of a dog in front of his house

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...