Sun,May05,2024
ಕನ್ನಡ / English

ನಾನೇನು ರೇಪ್ ಮಾಡಿದ್ದೀನಾ? ಏನ್ ತಪ್ಪು ಮಾಡಿದ್ದೆ? ಬಿಜೆಪಿ ಮುಖಂಡರ ನಿರ್ಲಕ್ಷ್ಯ ಮಾಡಿದ್ದರಿಂದ ಬೇಸರವಾಗಿದೆ! | JANATA NEWS

13 Apr 2023
1522

ಬೆಳಗಾವಿ : ನನ್ನನ್ನು ಯಾಕೆ ಡಿಸಿಎಂ ಸ್ಥಾನದಿಂದ ತೆಗದ್ರಿ? ಏನ್ ತಪ್ಪು ಮಾಡಿದ್ದೆ, ಯಾರನ್ನಾದರೂ ರೇಪ್ ಮಾಡಿದ್ನಾ? ಯಾವ ಅಪರಾಧದ ಮೇಲೆ ತೆಗೆದು ಹಾಕಿದ್ರಿ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಅಸಮಾಧಾನ ವ್ಯಕ್ತಪಡಿಸಿದರು.

ಅನೇಕ ಮುಖಂಡರು ನನ್ನನ್ನು ನಿರ್ಲಕ್ಷ್ಯ ಮಾಡಿದ್ದರಿಂದ ಬೇಸರವಾಗಿದೆ. ನನಗೆ ಆಂತರಿಕವಾಗಿ ಬಹಳಷ್ಟು ನೋವು ಮತ್ತು ಹಿಂಸೆ ಆಗಿದೆ. ಆದರೂ ಪಕ್ಷ ನನ್ನ ತಾಯಿ ಎಂದು ಸುಮ್ಮನಿದ್ದೆ. ರಾಷ್ಟ್ರೀಯ ನಾಯಕರು ಬಂದಾಗ ವೇದಿಕೆ ಹಂಚಿಕೊಳ್ಳಲೂ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾವುದೆ ಸೂಚನೆ ನೀಡದೆ ಉಪಮುಖ್ಯಮಂತ್ರಿ ಸ್ಥಾನದಿಂದ ತೆಗೆದರೂ ಸುಮ್ಮನಿದ್ದೆ. ಯಾವತ್ತೂ ಪಕ್ಷ ವಿರೋಧಿ ಚಟುವಟಿಕೆ, ಟೀಕೆ ಟಿಪ್ಪಣಿ ಮಾಡಿಲ್ಲ. ಆದಾಗ್ಯೂ ಕಡೆಗಣಿಸಿರುವುದು ಬೇಸರ ತಂದಿದೆ. ಹೀಗಾಗಿ ಪಕ್ಷದಿಂದ ಹೊರ ಹೋಗಲು ತೀರ್ಮಾನ ಮಾಡಿದ್ದೇನೆ ಎಂದು ಸವದಿ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಹಳೆಯ ಸ್ನೇಹಿತರು, ಅವರ ವಿಚಾರವೇ ಬೇರೆ, ನನ್ನ ವಿಚಾರ ಬೇರೆ, ಆ ನಂತರದಲ್ಲಿ ಅವರು ನಾವು ಕೂಡಿ ಕೆಲಸ ಮಾಡಿದ್ದೇವೆ. ನನಗೆ ರಾಜಕೀಯವಾಗಿ ಈ ಬೆಳವಣಿಗೆ ಅನಿವಾರ್ಯವಾಗಿದೆ. ನನಗೆ ಬಹಳ ನೋವಾಗಿದೆ. ಟಕೆಟ್ ಕೊಡಲಿಲ್ಲಾ ಅಂತಾ ನಾನು ಪಕ್ಷದಿಂದ ಹೊರ ಹೊರಟಿಲ್ಲ , ಅಸೂಯೆ, ಅವಮಾನ ಎಲ್ಲವೂ ನನಗೆ ಆಗಿದೆ. ಆಂತರಿಕವಾಗಿ ಜಿಲ್ಲಾ ಮತ್ತು ರಾಜ್ಯದವರು ಕೊಟ್ಟ ತೊಂದರೆಯನ್ನು ಸಹಿಸಿಕೊಂಡು ಆದರೂ ಇಲ್ಲಿವರೆಗೆ ಬಂದಿದ್ದೇನೆ. ಅನೇಕ ಕಡೆ ವೇದಿಕೆ ರಾಷ್ಟ್ರೀಯ ನಾಯಕರು ಜತೆಗೆ ವೇದಿಕೆ ಹಂಚಿಕೊಳ್ಳುಲು ಅವಕಾಶ ಕೊಟ್ಟಿಲ್ಲ. ಅದೆಲ್ಲ ಮಾತನಾಡುವ ಅಗತ್ಯ ನನಗಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.

ಡಿಸಿಎಂ ಸ್ಥಾನ ಕೊಡಬೇಕೆಂದು ನಾನು ಕೇಳಿದ್ನಾ? ನನಗೆ ಕೊಟ್ಟ ಮೇಲೆ ಕೆಲಸ ಮಾಡಿದೆ ಎಂದ ಅವರು, ಮೊದಲು ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿ ಬಿಡುವ ನನ್ನ ನಿರ್ಧಾರ ಅಚಲ. ಅದನ್ನು ಪ್ರಕಟ ಮಾಡುವ ಪೂರ್ವದಲ್ಲಿ ಏನು ಹೇಳಲ್ಲ. ಪಕ್ಷದಿಂದ ಹೊರಗೆ ಬಂದು ತೀರ್ಮಾನ ಮಾಡುವೆ. ಅಥಣಿ ಹೈಕಮಾಂಡ್ ತೀರ್ಮಾನ ಬಳಿಕ ಎಲ್ಲವೂ ಗೊತ್ತಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಹೊಸದಾಗಿ ಪಕ್ಷಕ್ಕೆ ಬಂದವರ ಮೇಲೆ ಈಗ ಮೋಹ ಹೆಚ್ಚಾಗಿದೆ ಎಂದು ಪರೋಕ್ಷವಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ಸವದಿ ವಾಗ್ದಾಳಿ ನಡೆಸಿದ್ದಾರೆ. ರಾಜಕೀಯ ಗುರು ಬಿಎಲ್ ಸಂತೋಷ್​ ಕರೆ ಮಾಡಿದರೂ ಸ್ವೀಕರಿಸಿಲ್ಲ. ಗುರುವಿನ ಮನಸಿಗೆ ನೋವು ಆಗಬಾರದು ಎಂದು ಕರೆ ಸ್ವೀಕರಿಸಲಿಲ್ಲ. ಇದೇ ಕಾರಣಕ್ಕೆ ನಾನು ಮೊದಲೇ ಕ್ಷಮೆಯಾಚನೆ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.

RELATED TOPICS:
English summary :Did you rape me? What did I do wrong? Sad because the BJP leaders were ignored!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...