Thu,May09,2024
ಕನ್ನಡ / English

ಪಕ್ಷಕ್ಕೆ ದ್ರೋಹ ಮಾಡಿದ ಶೆಟ್ಟರ್‌ನ್ನು ಯಾರು ಕ್ಷಮಿಸಲ್ಲ: ಬಿ.ಎಸ್ ಯಡಿಯೂರಪ್ಪ | JANATA NEWS

16 Apr 2023
1819

ಬೆಂಗಳೂರು : ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ಧ ಮಾಜಿ ಸಿಎಂ,ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಕಿಡಿ ಕಾರಿದ್ದು, ಅವರು ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮುನಿಸಿಕೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮನವೊಲಿಕೆ ಯತ್ನ ವಿಫಲವಾಗಿದ್ದು, ಇಂದು ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಶೆಟ್ಟರ್ ಜನಸಂಘದಿಂದಲೂ ಬಿಜೆಪಿ ಜತೆಗಿದ್ದರು. ಜಗದೀಶ್ ಶೆಟ್ಟರ್ ಅವರು ಜನಸಂಘದ ಕಾಲದಿಂದ ಬಿಜೆಪಿ ಕುಟುಂಬದಲ್ಲಿದ್ದವರು. ಪಕ್ಷದ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕ, ಸಚಿವ ಮತ್ತು ಮುಖ್ಯಮಂತ್ರಿ ಸ್ಥಾನಗಳನ್ನು ಬಿಜೆಪಿ ನೀಡಿತ್ತು.

ಶೆಟ್ಟರ್ ಅವರನ್ನು ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ, ಮಂತ್ರಿ, ಸಿಎಂ ಮಾಡಿದ್ವಿ. ಬಿ.ಬಿ ಶಿವಪ್ಪರನ್ನು ಎದುರು ಹಾಕಿಕೊಂಡು ಶೆಟ್ಟರ್ ಅವರನ್ನು ವಿಪಕ್ಷ ನಾಯಕ ಮಾಡಿದ್ದೆವು. ನಾನು, ಅನಂತ ಕುಮಾರ್ ಅವರಿಗೆ ಕಾವಲು ಇದ್ದೆವು. ನಮ್ಮ ಜತೆ ಹೆಜ್ಜೆ ಹಾಕುವುದು ಅವರ ಜವಾಬ್ದಾರಿ ಆಗಿತ್ತು. ಮೋದಿಯವರ ಬಗ್ಗೆ ಜಗತ್ತಿನಾದ್ಯಂತ ಗೌರವ ಇದೆ. ಇಂಥ ಸಂದರ್ಭದಲ್ಲಿ ಶೆಟ್ಟರ್ ಹೇಳಿಕೆ ಹಾಗೂ ಅವರ ನಿರ್ಧಾರ ಅವರು ನಂಬಿದ ವಿಚಾರಕ್ಕೆ ತದ್ವಿರುದ್ಧ ಇದೆ ಎಂದರು.

ಜಗದೀಶ್‌ ಶೆಟ್ಟರ್‌ ಅವರ ಹೇಳಿಕೆ ಮತ್ತು ನಿರ್ಧಾರ ಅವರು ನಂಬಿದ ಸಿದ್ಧಾಂತಕ್ಕೆ ತದ್ವಿರುದ್ಧವಾಗಿದೆ. ಬಿಜೆಪಿ ಪಕ್ಷ ಅವರಿಗೆ ಎಲ್ಲವನ್ನೂ ನೀಡಿತ್ತು. ಆದರೂ ಕಾಂಗ್ರೆಸ್ ಜೊತೆ ಹೊರಟಿರುವುದು ಅಕ್ಷಮ್ಯ ಅಪರಾಧ ಎಂದರು.

ಸ್ಥಾನ ಸಿಗದಿದ್ದರೂ ದೇಶಕ್ಕಾಗಿ ಶ್ರಮಿಸಬೇಕಿದೆ. ಶೆಟ್ಟರ್ ಅವರನ್ನು ಗುರುತಿಸಿದ್ದು ಬಿಜೆಪಿ. ವ್ಯಕ್ತಿ ಎಷ್ಟೇ ದೊಡ್ಡವನಾದರೂ ಪಕ್ಷದ ಬೆಂಬಲವಿಲ್ಲದೆ ಎತ್ತರಕ್ಕೇರಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿ ಅಲಂಕರಿಸಲು ಸಾಧ್ಯವಿಲ್ಲ. ಧಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಅವರ ಮನೆಗೆ ಭೇಟಿ ನೀಡಿ ಅವರ ಮನವೊಲಿಸಲು ಪ್ರಯತ್ನಿಸಿದರು.ಕೇಂದ್ರದಲ್ಲಿ ಸಚಿವರಾಗಿ ಮಾಡುತ್ತೇವೆ ಎಂದೂ ಹೇಳಿದ್ದಾರೆ. ಆದರೆ, ಹಠಮಾಡಿ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವುದು ಅಕ್ಷಮ್ಯ ಅಪರಾಧ. ನಾಡಿನ ಜನತೆ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಇದು ಪಕ್ಷಕ್ಕೆ ಮಾಡಿರುವ ದ್ರೋಹ ಎಂದರು.

RELATED TOPICS:
English summary :Who will not forgive Shettar for betraying the party: BS Yeddyurappa

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...