Wed,May01,2024
ಕನ್ನಡ / English

ನಾವು ನಂಬಿ ಪ್ರತಿಪಾದಿಸುತ್ತಾ ಬಂದಿರುವ ಎಲ್ಲಾ ತತ್ವ, ಆದರ್ಶಗಳ ವಿರುದ್ಧ ಕೆಲಸ ಮಾಡುವ ಕಾಂಗ್ರೆಸ್‌ ಪಕ್ಷದೊಂದಿಗೆ ಕೆಲಸ ಮಾಡುವುದು ಹೇಗೆ ಸಾಧ್ಯ? | JANATA NEWS

17 Apr 2023
1169

ಶಿವಮೊಗ್ಗ : ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಇಂದು ಕಾಂಗ್ರೆಸ್‌ ಸೇರ್ಪಡೆ ಆಗಿದ್ದಾರೆ. ಈ ಬಗ್ಗೆ ಕೆ.ಎಸ್. ಈಶ್ವರಪ್ಪ ಅವರು ಶೆಟ್ಟರ್‌ಗೆ ಬಹಿರಂಗ ಪತ್ರ ಬರೆದಿದ್ದು, ನಾವು ನಂಬಿ ಪ್ರತಿಪಾದಿಸುತ್ತಾ ಬಂದಿರುವ ಎಲ್ಲಾ ತತ್ವ, ಆದರ್ಶಗಳ ವಿರುದ್ಧ ಕೆಲಸ ಮಾಡುವ ಕಾಂಗ್ರೆಸ್‌ ಪಕ್ಷದೊಂದಿಗೆ ಕೆಲಸ ಮಾಡುವುದು ಹೇಗೆ ಸಾಧ್ಯ? ಎಂದು ಜಗದೀಶ್‌ ಶೆಟ್ಟರ್‌ ಅವರಿಗೆ ಪ್ರಶ್ನಿಸಿದ್ದಾರೆ.

ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ಅವರಿಗೆ ನನ್ನ ಅತ್ಮೀಯ ನಮಸ್ಕಾರಗಳು.

ಸುಮಾರು 4 ದಶಕಗಳಿಗೂ ಹೆಚ್ಚಿನ ಕಾಲ ತಾವು ನಂಬಿ ತಮ್ಮ ರಾಜಕೀಯ ಜೀವನವನ್ನು ರೂಪಿಸಿಕೊಂಡಿದ್ದ ತತ್ವ ಸಿದ್ಧಾಂತ, ರಾಜಕೀಯ ನಿಲುವನ್ನು ತ್ಯಜಿಸಿ ಕಾಂಗ್ರೆಸ್‌ ಪಕ್ಷದ ಕಡೆ ತಾವು ಮುಖ ಮಾಡಿರುವ ಈ ಬದಲಾದ ಪರಿಸ್ಥಿತಿಯಲ್ಲಿ ನನಗೆ ನಿಮ್ಮ ಪೂಜ್ಯ ತಂದೆಯವರಾದ ದಿ.ಶಿವಪ್ಪ ಶೆಟ್ಟರು ಬಹಳವಾಗಿ ನೆನಪಾಗುತ್ತಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ (RSS) ಸಂಘದ ದಟ್ಟ ಪ್ರಭಾವದಲ್ಲಿ ತಮ್ಮ ರಾಜಕೀಯ ಜೀವನ ರೂಪಿಸಿಕೊಂಡ ದಿ.ಶಿವಪ್ಪ ಶೆಟ್ಟರು, ಭಾರತೀಯ ಜನತಾ ಪಕ್ಷದ ಮೂಲಕ ನಗರ ಸಭೆಯ ಸದಸ್ಯರಾಗಿ, ಮಹಾಪೌರರಾಗಿ, ಶಾಸಕರಾಗಿ ಎಲ್ಲದಕ್ಕಿಂತ ಮಿಗಿಲಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಜನಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು ಅವರದೇ ಪ್ರಭಾವದಲ್ಲಿ ಬೆಳೆದ ತಾವು ಸಹ ರಾಷ್ಟ್ರೀಯತೆಯ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡವರು. ಕಾಂಗ್ರೆಸ್‌ ಪಕ್ಷದ ದೇಶ ವಿರೋಧಿ ಧೋರಣೆಗಳನ್ನು ಸದಾ ಖಂಡಿಸುತ್ತಾ ಬಂದವರು, ಭಾರತೀಯ ಜನತಾ ಪಕ್ಷದ ಮೂಲಕ ಅನೇಕ ಬಾರಿ ಶಾಸಕರಾಗಿ ಚುನಾಯಿತರಾಗಿದ್ದು ಮಾತ್ರವಲ್ಲದೇ ರಾಜ್ಯದ ಮುಖ್ಯಮಂತ್ರಿಯಾಗುವಷ್ಟು ಎತ್ತರಕ್ಕೆ ಬೆಳೆದವರು.

ಪ್ರಸಕ್ತ ಸಂದರ್ಭದಲ್ಲಿ ತಾಯಿಯಂತೆ ಕಾಪಾಡಿದ ಪಕ್ಷ ತೆಗೆದುಕೊಂಡ ನಿರ್ಣಯದ ವಿರುದ್ಧ ಅಸಮಾಧಾನಗೊಂಡಿರುವ ತಮ್ಮ ಮನಸ್ಥಿತಿ ನನಗೆ ಅರ್ಥವಾಗುತ್ತದೆ. ಆದರೆ ಪಕ್ಷವನ್ನು ಬಿಟ್ಟು ನಂಬಿದ ಎಲ್ಲಾ ಆದರ್ಶಗಳನ್ನು ತೊರೆದು ನಮ್ಮ ಪಕ್ಷದ ಚಿಂತನೆಗೆ ವಿರುದ್ಧವಾದ ಕಾಂಗ್ರೆಸ್‌ ಪಕ್ಷಕ್ಕೆ ತಾವು ಸೇರಲು ಬಯಸಿರುವುದು ಮಾತ್ರ ಅತ್ಯಂತ ದುರದೃಷ್ಟಕರ.

ಮುಂದೆ ಒಂದು ದಿನ ತಾವು ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದ ಸಂಧರ್ಭದಲ್ಲಿ ಸದನದಲ್ಲಿ ಗೋ ಹತ್ಯೆ ಪರ – ವಿರೋಧದ ಚರ್ಚೆ ನಡೆದರೆ ತಾವು ಗೋ ಹತ್ಯೆಯನ್ನು ಸಮರ್ಥಿಸಲು ಸಾಧ್ಯವೇ? ಉಗ್ರ ಪಿಎಫ್‌ಐ ಸಂಘಟನೆ ಕುರಿತಾದ ಪರ-ವಿರೋಧದ ಚರ್ಚೆಯಲ್ಲಿ ಪಿಎಫ್‌ಐ ನಿರ್ಬಂಧ ತೆರವು ಮಾಡಲು ತಾವು ಸಮ್ಮತಿಸಲು ಸಾಧ್ಯವೇ? ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಲು ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್‌ ಪಕ್ಷದ ವಿರುದ್ಧ ತಮ್ಮ ಉಗ್ರ ಹೋರಾಟ ನನಗಿನ್ನೂ ಮನಸ್ಸಿನಲ್ಲಿ ಹಸಿರಾಗಿದೆ.

ಈಗ ತಾವು ಅದೇ ಪಕ್ಷವನ್ನು ಯಾವ ರೀತಿ ಒಪ್ಪಿಕೊಳ್ಳಲು ಸಾಧ್ಯ? ನಾವು ನಂಬಿ ಪ್ರತಿಪಾದಿಸುತ್ತಾ ಬಂದಿರುವ ಎಲ್ಲಾ ತತ್ವ, ಆದರ್ಶಗಳ ವಿರುದ್ಧ ಕೆಲಸ ಮಾಡುವ ಕಾಂಗ್ರೆಸ್‌ ಪಕ್ಷದೊಂದಿಗೆ ಕೆಲಸ ಮಾಡುವುದು ಹೇಗೆ ಸಾಧ್ಯ? ಈ ಕುರಿತು ಒಮ್ಮೆ ಯೋಚಿಸಿ ಎಂದು ಕೋರುತ್ತೇನೆ.

ಕೇವಲ ಈ ಬಾರಿಯ ಚುನಾವಣೆಯಲ್ಲಿ ತಮಗೆ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲವೆಂಬ ಕಾರಣವನ್ನು ಮುಂದಿಟ್ಟುಕೊಂಡು ಪಕ್ಷ ತೊರೆಯುವ ಮಹತ್ವದ ನಿರ್ಧಾರ ಮಾಡುವ ಮುನ್ನ ಪಕ್ಷ ತಮಗೆ ಈ ಹಿಂದೆ ನೀಡಿದ ಸ್ಥಾನ-ಮಾನಗಳ ಕುರಿತು ಒಮ್ಮೆ ಅವಲೋಕಿಸಬೇಕೆಂದು ಕೋರುತ್ತೇನೆ.

RELATED TOPICS:
English summary :How is it possible to work with the Congress party which works against all the principles and ideals that we have believed in and advocated?

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...