Sat,Apr27,2024
ಕನ್ನಡ / English

ನಾಮಪತ್ರ ಸಲ್ಲಿಸಿದ ಎಂಟಿಬಿ ನಾಗರಾಜ್, ಕಳೆದ ಬಾರಿಗಿಂತ 495 ಕೋಟಿ ರೂ. ಆಸ್ತಿ ಹೆಚ್ಚಳ! | JANATA NEWS

17 Apr 2023
1410

ಹೊಸಕೋಟೆ : ಎಂಟಿಬಿ ನಾಗರಾಜ್‌ ಹೊಸಕೋಟೆಯಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

ಹೊಸಕೋಟೆ ನಗರದಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ರ್‍ಯಾಲಿ ನಡೆಸಿ ತಾಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

2019ರ ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್‌ 1195 ಕೋಟಿ ರೂ. ಆಸ್ತಿಯನ್ನು ಘೋಷಿಸಿದ್ದರು. ಅದಕ್ಕೂ ಮುನ್ನ 2018ರ ಚುನಾವಣೆಯಲ್ಲಿ 1,015 ಕೋಟಿ ರೂ. ಆಸ್ತಿಯನ್ನು ಎಂಟಿಬಿ ಸಲ್ಲಿಸಿದ್ದರು.

2020ರಲ್ಲಿ ನಡೆದ ವಿಧಾನ ಪರಿಷತ್‌ ಚುನಾವಣೆ ವೇಳೆ 1224 ಕೋಟಿ ರೂ. ಆಸ್ತಿಯನ್ನು ಎಂಟಿಬಿ ಘೋಷಿಸಿದ್ದರು. ಈಗ 1510 ಕೋಟಿ ರೂ. ಮೌಲ್ಯದ ಚರಾಸ್ತಿ ಹಾಗೂ ಸ್ಥಿರಾಸ್ತಿಯನ್ನು ಎಂಟಿಬಿ ಘೋಷಿಸಿದ್ದು, ಮೂರು ವರ್ಷದಲ್ಲಿ ಬರೋಬ್ಬರಿ 286 ಕೋಟಿ ರೂ. ಆಸ್ತಿ ಹೆಚ್ಚಾಗಿದೆ.

ಎಂಟಿಬಿ ನಾಗರಾಜ್‌ ವಿವಿಧ ಬ್ಯಾಂಕ್‌ಗಳಲ್ಲಿ 29.12 ಕೋಟಿ ರೂ. ಉಳಿತಾಯ ಹೊಂದಿದ್ದು, 33.08 ಕೋಟಿ ರೂ. ನಿಶ್ಚಿತ ಠೇವಣಿ ಹೊಂದಿದ್ದಾರೆ. ಎಂಟಿಬಿ ಎಸ್ಟೇಟ್ಸ್‌ ಮತ್ತು ಪ್ರಾಪರ್ಟಿಸ್‌ನಲ್ಲಿ 196.54 ಕೋಟಿ ರೂ. ಹೂಡಿಕೆ ಮಾಡಿದ್ದರೆ, ಶಬರಿ ಎಂಟರ್‌ಪ್ರೈಸಸ್‌ನಲ್ಲಿ 2.81 ಕೋಟಿ ರೂ. ಹೂಡಿಕೆ, ಎಂಟಿಬಿ ಪ್ರಾಪರ್ಟಿಸ್‌ ಪ್ರೈವೆಟ್‌ ಲಿಮಿಟೆಡ್‌ನಲ್ಲಿ 20,000 ರೂ. ಇಕ್ವಿಟಿ ಷೇರುಗಳನ್ನು ಹೊಂದಿದ್ದು, ಎಂಟಿಬಿ ಶುಭಮೇರು ಕನ್ವೆನ್ಷನ್‌ ಹಾಲ್‌ನಲ್ಲಿ 5.54 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. 105 ಕೋಟಿ ರೂ. ಸಾಲ ನೀಡಿದ್ದಾರೆ.

38.88 ಲಕ್ಷ ರೂ. ಮೌಲ್ಯದ 996 ಗ್ರಾಂ ಚಿನ್ನ ಹೊಂದಿದ್ದಾರೆ. 98.93 ಲಕ್ಷ ರೂ. ಮೌಲ್ಯದ ವಜ್ರಗಳಿವೆ. 2.21 ಲಕ್ಷ ರೂ. ಮೌಲ್ಯದ ಪ್ಲಾಟಿನಂ ಒಡವೆ ಇದ್ದು, 214.5 ಕೆಜಿ ಬೆಳ್ಳಿ ಉತ್ಪನ್ನಗಳನ್ನು ಹೊಂದಿದ್ದಾರೆ. ಈ ಮೂಲಕ ಒಟ್ಟು 372.42 ಕೋಟಿ ಚರಾಸ್ತಿಯನ್ನು ಎಂಟಿಬಿ ನಾಗರಾಜ್‌ ಹೊಂದಿದ್ದಾರೆ. ಇನ್ನೂ, ಎಂಟಿಬಿ ನಾಗರಾಜ್‌ ಅವರ ಹೆಸರಲ್ಲಿ 49 ಎಕರೆ 8 ಗುಂಟೆ ಕೃಷಿ ಭೂಮಿ ಕೂಡ ಇದ್ದು, 71.01 ಕೋಟಿ ರೂ. ಸಾಲವನ್ನು ಹೊಂದಿದ್ದಾರೆ.

ಎಂಟಿಬಿ ನಾಗರಾಜ್ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಬದಲುನ ಪುತ್ರನಿಗೆ ಟಿಕೆಟ್ ನೀಡಬೇಕೆಂದು ಕೋರಿದ್ದರು. ಆದರೆ ಅಂತಿಮವಾಗಿ ಬಿಜೆಪಿ ಬಿಜೆಪಿ ಹೈಕಮಾಂಡ್‌ ನಾಗರಾಜು ಅವರಿಗೆ ಟಿಕೆಟ್‌ ನೀಡಿದೆ. 2004ರಲ್ಲಿ ಹೊಸಕೋಟೆ ಕ್ಷೇತ್ರಕ್ಕೆ ಬಂದು ತಾಲೂಕಿನ ಜನರ ಸೇವೆಯನ್ನು 19 ವರ್ಷ ಮಾಡಿದ್ದೇನೆ. ಈಗ ರಾಜಕೀಯ ನಿವೃತ್ತಿ ಪಡೆದು, ಮಗ ಜನಸೇವೆಗೆ ಮುಂದಾಗಲಿ ಎಂದು ಬಯಸಿ ಟಿಕೆಟ್‌ ಬೇಡ ಎಂದು ಪತ್ರ ಬರೆದಿದ್ದೆ ಎಂದು ಎಂಟಿಬಿ ನಾಗರಾಜ್ ಹೇಳಿಕೊಂಡಿದ್ದರು.

RELATED TOPICS:
English summary :MTB Nagaraj, who submitted his nomination paper, got Rs 495 crore more than last time. Property increase!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...