ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ | JANATA NEWS
ಬೆಂಗಳೂರು : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಏಪ್ರಿಲ್ 21 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಇಲಾಖೆಯು ಕರ್ನಾಟಕದ್ವಿತೀಯ ಪಿಯುಸಿ ಫಲಿತಾಂಶ 2023 ಅನ್ನು ನಾಳೆ ಅಂದರೆ, ಏಪ್ರಿಲ್ 21, 2023 ರಂದು ಬಿಡುಗಡೆ ಮಾಡಲಿದೆ. ಇತ್ತೀಚಿನ ಅಧಿಸೂಚನೆಯ ಪ್ರಕಾರ, ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಮತ್ತು ಫಲಿತಾಂಶಗಳು ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಬೆಳಿಗ್ಗೆ 11 ಗಂಟೆಯಿಂದ ಲಭ್ಯವಿರುತ್ತವೆ.
English summary :Karnataka 2nd PUC Result 2023