Sun,May19,2024
ಕನ್ನಡ / English

ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಮಂತ್ರಿ ಮೋದಿ, ಪಕ್ಷ ನಿಷ್ಠೆಗೆ ಭಾರಿ ಮೆಚ್ಚುಗೆ! | JANATA NEWS

21 Apr 2023
2085

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಮಾಜಿ ಸಚಿವ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಕೆಲ ಹಿರಿಯರಿಗೆ ಟಿಕೆಟ್ ನೀಡದೆ ಹೊಸ ಮುಖ ಪರಿಚಯ ಮಾಡಬೇಕು ಎನ್ನುವ ನಿರ್ಣಯದಿಂದ ಕೆ ಎಸ್​ ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್​ಗೆ ಚುನಾವಣಾ ನಿವೃತ್ತಿ ಪಡೆಯುವಂತೆ ಹೈಕಮಾಂಡ್ ಸೂಚಿಸಿತ್ತು. ಅದರಂತೆ ಈಶ್ವರಪ್ಪ ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ.

ಇನ್ನು ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್‍ಗೆ ಟಿಕೆಟ್ ಬಯಸಿದ್ದರು. ಆದರೆ ಪುತ್ರನಿಗೆ ಟಿಕೆಟ್ ಸಿಗಲಿಲ್ಲ. ಹೀಗಾಗಿ ಈಶ್ವರಪ್ಪ ಅಸಮಾಧಾನಗೊಳ್ಳಬಹುದು ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಈಶ್ವರಪ್ಪ ಇದು ಯಾವುದಕ್ಕು ತಲೆ ಕೆಡಿಸಿಕೊಳ್ಳದೇ ಪಕ್ಷ ನಿಷ್ಠೆ ಮೆರೆದರು.

ಈಶ್ವರಪ್ಪ ಅವರ ಪಕ್ಷ ನಿಷ್ಠೆ ಮೆಚ್ಚಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದರು. ಈ ವೇಳೆ ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದರು.

ನೀವು ಬಿ.ಎಸ್ ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ತಿಳಿಸಿದ್ದಾರೆ ಎನ್ನಲಾಗಿದೆ, ಈಶ್ವರಪ್ಪ ಅವರು ಉತ್ತರಿಸಿ, ನೀವು ಪೋನ್ ಮಾಡಿದ್ದು ಖುಷಿ ಆಯ್ತು. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ನೀವು ಕರೆ ಮಾಡಿದ್ದು ಬಹಳ ಖುಷಿ ಆಗಿದೆ ಎಂದರು.

ಪಕ್ಷದ ಸೂಚನೆ ಪಾಲಿಸಿ ಮೋದಿ ಮೆಚ್ಚುಗೆಗೆ ಪಾತ್ರವಾಗಿರುವ ಈಶ್ವರಪ್ಪಗೆ ಹೈಕಮಾಂಡ್ ಮುಖ್ಯ ಜವಾಬ್ದಾರಿ ಅಥವಾ ಉನ್ನತ ಸ್ಥಾನಮಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

RELATED TOPICS:
English summary :Modi called Eshwarappa and praised his party loyalty!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...