Sun,Apr28,2024
ಕನ್ನಡ / English

ಬಿಜೆಪಿ ಬಿಟ್ಟೋಗಿರೋದು ನಾನೊಬ್ನೇನಾ, ನನ್ನ ಮೇಲೇಕೆ ಇಷ್ಟು ಹಠ | JANATA NEWS

26 Apr 2023
1186

ಹುಬ್ಬಳ್ಳಿ : ನನ್ನನ್ನು ಸೋಲಿಸಲು ಬಿಜೆಪಿ ನಾಯಕರಿಗೆ ಏಕಿಷ್ಟು ಹಠ? ಬೇರೆ ನಾಯಕರೂ ಬಿಜೆಪಿ ಬಿಟ್ಟು ಹೋಗಿದ್ದಾರೆ, ಅವರ ಮೇಲೆ ಹಠ ಏಕಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಬೇಕೆಂಬ ಮಾತುಗಳನ್ನು ಆಡಿದ್ದಾರೆ. ಜೊತೆಗೆ ಬಿ.ಎಸ್.ಯಡಿಯೂರಪ್ಪ ಅವರು ಕೂಡಾ ಮಂಗಳವಾರ ಪ್ರಮುಖರ ಸಭೆ ನಡೆಸಿ ನನ್ನನ್ನು ಸೋಲಿಸಲು ಆಂದೋಲನ ನಡೆಸಿದ್ದಾರೆ. ಬಡಪಾಯಿ ಶೆಟ್ಟರ್ ಅನ್ನು ಸೋಲಿಸುವ ಗುರಿಯನ್ನು ಬಿಜೆಪಿ ಮಾಡಿಕೊಂಡಿದೆ ಗೊತ್ತಾಗುತ್ತಿಲ್ಲ ಎಂದರು.

ಯಡಿಯೂರಪ್ಪ ನನ್ನ ಟಿಕೆಟ್ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಅಸಹಾಯಕರಾದರು. ನಾನು ಅತಿ ಹೆಚ್ಚು ಲೀಡ್‌ನಿಂದ ಗೆಲುವು ಸಾಧಿಸುತ್ತೇನೆ. ಒಬ್ಬ ಲಿಂಗಾಯತ ನಾಯಕನಿಂದ ಮತ್ತೊಬ್ಬ ಲಿಂಗಾಯತ ನಾಯಕನನ್ನು ಬೈಯಿಸಲಾಗುತ್ತಿದೆ. ಯಡಿಯೂರಪ್ಪನವರು ಅಸಹಾಯಕರಾಗಿದ್ದಾರೆ. ಯಡಿಯೂರಪ್ಪನವರು ರಕ್ತದಲ್ಲಿ ಬರೆದು ಕೊಡಲಿ ಅಥವಾ ಯಾವುದರಿಂದಾದಲೂ ಬರೆದು ಕೊಡಲಿ. ಯಡಿಯೂರಪ್ಪ ಎಷ್ಟೇ ಬೈದರು ಅದು ಅವರ ಆಶೀರ್ವವಚನ ಎಂದು ಭಾವಿಸುತ್ತೆನೆ ಎಂದು ಹೇಳಿದರು.

ಸೆಂಟ್ರಲ್ ಕ್ಷೇತ್ರ ಬರೀ ಹುಬ್ಬಳ್ಳಿ ಧಾರವಾಡಕ್ಕೆ ಸೀಮಿತವಲ್ಲಾ. ಇದು ರಾಷ್ಟ್ರೀಯ ಸೆಂಟ್ರಲ್ ಆಗಿದೆ. ಅಮಿತ್ ಶಾ ಹುಬ್ಬಳ್ಳಿ ಮತ್ತು ಯಾದಗಿರಿಯಲ್ಲಿ ಜಗದೀಶ್ ಶೆಟ್ಟರ್ ಸೋಲಿಸಬೇಕು ಅಂತ ಭಾಷಣ ಮಾಡುತ್ತಿದ್ದಾರೆ. ಸ್ಮೃತಿ ಇರಾನಿ, ಯಡಿಯೂರಪ್ಪ ಮತ್ತು ಜೆಪಿ ನಡ್ಡಾ ಸಹ ನನ್ನ ಸೋಲಿಸಲು ಕರೆ ನೀಡಿದ್ದಾರೆ. ನನ್ನ ಮೇಲೆ ಎಲ್ಲರೂ ಮುಗಿ ಬಿದ್ದಿದ್ದಾರೆ. ಈ ಬಡಪಾಯಿ ಮೇಲೆ ಯಾಕೆ ಎಲ್ಲರೂ ಬಿದ್ದಿದ್ದಾರೆ ಗೊತ್ತಿಲ್ಲ.

ನಾನಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿಲ್ಲ, ನನ್ನಂತೆಯೇ ಆಯನೂರು ಮಂಜುನಾಥ, ಲಕ್ಷ್ಮಣ ಸವದಿ, ಯಲ್ಲಾಪುರದಲ್ಲಿ ಮಾಜಿ ಶಾಸಕ, ಎನ್.ಆರ್. ಸಂತೋಷ್ ಬಿಜೆಪಿ ತೊರೆದು ಕಾಂಗ್ರೆಸ್ ಅಥವಾ ಜೆಡಿಎಸ್ ಪಕ್ಷವನ್ನು ಸೇರ್ಪಡೆ ಆಗಿದ್ದಾರೆ. ಆದರೆ ನಾನು ಬಿಟ್ಟ ಮಾತ್ರಕ್ಕೆ ಯಾವುದೋ ಅಪರಾಧ ಮಾಡಿದಂತೆ ಎಲ್ಲರೂ ನನಗೆ ಪ್ರಶ್ನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ನಾನು ಬಿಜೆಪಿಗೆ ದ್ರೋಹ ಮಾಡಿದ್ದೆ ಎಂದು ಹೇಳುತ್ತಾರೆ. ಈ ಬಗ್ಗೆ ಮಾತನಾಡಲು ಯಾರಿಗೂ ನೈತಿಕತೆ ಇಲ್ಲ. ಜಗದೀಶ್ ಶೆಟ್ಟರ್ ಎಂದೂ ಪಕ್ಷ ದ್ರೋಹ ಮಾಡಿಲ್ಲ. ನಾನು ಎಂದೂ ಬಿಜೆಪಿಗೆ ಮೋಸ ಮಾಡಿಲ್ಲ ಎಂದರು.

RELATED TOPICS:
English summary :I am the one who left the BJP, why are you so stubborn about me?

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...