Fri,May03,2024
ಕನ್ನಡ / English

ಸಾಯುತ್ತೇನೆ ಎಂದು ನೇಣಿನ ಕುಣಿಕೆಯನ್ನು ಕೊರಳಿಗೆ ಹಾಕಿಕೊಂಡಿದ್ದ ಪ್ರೇಯಸಿ, ಹಗ್ಗ ಎಳೆದು ಚೇರ್ ಒದ್ದ ಪ್ರಿಯತಮ! | JANATA NEWS

27 Apr 2023
947

ಬೆಂಗಳೂರು : ಸಾಯುತ್ತೇನೆ ಎಂದು ನೇಣಿನ ಕುಣಿಕೆಯನ್ನು ಕೊರಳಿಗೆ ಹಾಕಿಕೊಂಡಿದ್ದ ಪ್ರೇಯಸಿ, ಪ್ರಿಯತಮ ಹಗ್ಗ ಎಳೆದು ಚೇರ್ ಒದ್ದ ಪರಿಣಾಮ ಹಗ್ಗ ಕೊರಳಿಗೆ ಬಿಗಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವೇಶ್ವರ ನಗರದ ಜೆ.ಸಿ ನಗರ ಬಳಿ ನಡೆದಿದೆ.

ಈ ಸಂಬಂಧ ಗಣೇಶ್​​(22) ಎಂಬಾತನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಶ್ರಾವಣ (35) ಮೃತ ಮಹಿಳೆ. ಈಕೆಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದರು. ಹೀಗಿದ್ದೂ ಈಕೆ ಗಣೇಶ್ (22) ಎಂಬ ಯುವಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.

ಮೃತ ಸರಗುಣಂ ಈಗಾಗಲೇ ಮದುವೆಯಾಗಿದ್ದು 17 ವರ್ಷದ ಮಗನಿದ್ದಾನೆ. ಪತಿ ಕೂಲಿ ಕೆಲಸ ಮಾಡಿಕೊಂಡಿದ್ದು, ಈಕೆ ಮನೆಕೆಲಸ ಮಾಡಿಕೊಂಡಿದ್ದಳು. ಕಳೆದ ನಾಲ್ಕು ವರ್ಷದ ಹಿಂದೆ ಬಸವೇಶ್ವರ ನಗರ ಬಳಿಯ ಎಂಜಿ ನಗರದಲ್ಲಿ ವಾಸವಿದ್ದಾಗ ಸರಗುಣಗೆ​ ಆಟೋ ಚಾಲಕನಾಗಿದ್ದ ಗಣೇಶ್​​ ಎಂಬಾತನ ಪರಿಚಯವಾಗಿತ್ತು. ಇಬ್ಬರ ಪರಿಚಯ ಪ್ರೀತಿಗೆ ತಿರುಗಿತ್ತು. ಜೊತೆಗೆ ಇಬ್ಬರೂ ಅಕ್ರಮ ಸಂಬಂಧ ಹೊಂದಿದ್ದರು.

ಶ್ರಾವಣ 50 ಸಾವಿರ ಹಣವನ್ನು ಯುವಕನಿಗೆ ನೀಡಿ ಮನೆ ಮಾಡಿಕೊಟ್ಟಿದ್ದಳು. ಆದರೆ ಗಣೇಶ್ ಬೇರೆ ಮಹಿಳೆ ಜತೆ ಸಲುಗೆ ಬೆಳೆಸಿಕೊಂಡಿದ್ದ. ಇದು ತಿಳಿಯುತ್ತಿದ್ದಂತೆ ಯುವಕನನ್ನು ಮನೆಗೆ ಕರೆಸಿಕೊಂಡಿದ್ದಳು. ಆ ಮಹಿಳೆ ಯಾರೆಂದು ಗಲಾಟೆ ಮಾಡಿದ್ದಾಳೆ. ಮನೆ ಮಾಡಿಕೊಟ್ಟು ಹಣ ಕೊಟ್ಟಿದ್ದೆನೆಲ್ಲ ಎಲ್ಲ ವಾಪಸ್​ ಕೊಡು ಎಂದಿದ್ದಾಳೆ ಎನ್ನಲಾಗಿದೆ.

ಈಕೆಯ ಮಾತಿನಿಂದ ರೋಸಿಹೋಗಿದ್ದ ಗಣೇಶ್​, ತಾನು ಸಾಯುವುದಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮುಂದಾಗಿದ್ದ. ಇದೇ ವೇಳೆ ಸರಗುಣಂ, ನಾನು ಸಾಯ್ತೀನಿ ಎಂದು ಗಣೇಶ್ ಹಾಕಿದ್ದ ನೇಣಿನ ಕುಣಿಕೆಗೆ ಕೊರಳೊಡ್ಡಿದ್ದಾಳೆ. ಈ ವೇಳೆ ಇದೇ ಸರಿಯಾದ ಸಮಯ ಎಂದುಕೊಂಡ ಗಣೇಶ್​ ಕುಣಿಕೆ ಹಾಕಿಕೊಳ್ಳಲು ಹತ್ತಿದ್ದ ಕುರ್ಚಿಯನ್ನು ಎಳೆದಿದ್ದಾನೆ. ಈ ವೇಳೆ ಸರಗುಣಂ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಈ ಬಗ್ಗೆ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The lover who put a hanging noose on his neck to die, the lover who pulled the rope and kicked the chair!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...