Thu,May02,2024
ಕನ್ನಡ / English

ಮಹಿಳೆಯರಿಗಾಗಿ ತಾಯಿ-ಮಗು ಆಸ್ಪತ್ರೆ ನಿರ್ಮಾಣ, ಪ್ರಚಾರದ ಕೊನೇ ದಿನ ಡಿಕೆಶಿ ಘೋಷಣೆ | JANATA NEWS

08 May 2023
1380

ಬೆಂಗಳೂರು : ಬಹಿರಂಗ ಪ್ರಚಾರಕ್ಕೆ ತೆರೆ ಬೀದ್ದಿದ್ದು, ಹೆಣ್ಣುಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನ್ನ ಹೊಸದಾಗಿ ನಿರ್ಮಿಸಿ, ಉಚಿತವಾಗಿ ಹೆರಿಗೆ ಸೌಲಭ್ಯ ಸಿಗುವಂತೆ ಮಾಡುತ್ತೇವೆ ಎಂದು ಪ್ರಚಾರದ ಕೊನೇ ದಿನ ಡಿಕೆಶಿ ಗ್ಯಾರಂಟಿ ಘೋಷಿಸಿದ್ದಾರೆ.

ಕಾಂಗ್ರೆಸ್ ಚುನಾವಣೆಗೂ ಮುನ್ನ ಹಲವು ಗ್ಯಾರಂಟಿ ಘೋಷಣೆಗಳನ್ನು ತಿಳಿಸಿದೆ. ಇವುಗಳನ್ನು ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲೂ ಸೇರಿಸಲಾಗಿದೆ. ಈಗಾಗಲೇ ಪ್ರತಿ ಮನೆಯ ಯಜಮಾನಿಗೆ 2 ಸಾವಿರ ರೂ., ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿಯೊಬ್ಬರಿಗೆ 10 ಕೆಜಿ ಉಚಿತ ಅಕ್ಕಿ, ನಿರುದ್ಯೋಗಿ ಪದವೀಧರರಿಗೆ 3000 ರೂಪಾಯಿ, ಅಂಗನವಾಡಿ ಕಾರ್ಯಕರ್ತರಿಗೆ 15 ಸಾವಿರ ವೇತನ, ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ವೇತನದಂತಹ ಗ್ಯಾರಂಟಿಗಳನ್ನು ಘೋಷಿಸಿದೆ.

ಕೊನೆಯ ದಿನದ ಚುನಾವಣಾ ಪ್ರಚಾರದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಮತ್ತೊಂದು ಗ್ಯಾರಂಟಿ ಭರವಸೆಯನ್ನು ಘೋಷಿಸಿದ್ದಾರೆ.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು, ಈ ರಾಜ್ಯಕ್ಕೆ ಒಳ್ಳೆಯ ಸರ್ಕಾರ ಕೊಡ್ತೀವಿ. ರೈತರಿಗಾಗಿ ಎಷ್ಟು ಸಾಧ್ಯವೋ ಅಷ್ಟೂ ಕೆರೆಗಳನ್ನ ತುಂಬಿಸುತ್ತೇವೆ. ಹೆಣ್ಣುಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನ್ನ ಹೊಸದಾಗಿ ನಿರ್ಮಿಸಿ, ಉಚಿತವಾಗಿ ಹೆರಿಗೆ ಸೌಲಭ್ಯ ಸಿಗುವಂತೆ ಮಾಡುತ್ತೇವೆ. ಎಲ್ಲರನ್ನೂ ಸಮಾನತೆಯಿಂದ ನೋಡುತ್ತೇವೆ. ಮಕ್ಕಳಿಗೆ ಗ್ರಾಮೀಣ ಭಾಗದಲ್ಲೇ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಿ, ಬೆಂಗಳೂರಿನಂತಹ ನಗರಗಳಿಗೆ ಬರೋದು ತಪ್ಪಿಸುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್ ಬೀಳಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, "ಮಿಸ್ಟರ್ ನಡ್ಡಾಜಿ, ಏನ್ ಹೆದರಿಸ್ತೀರಾ? ಕೇಂದ್ರದ ಯೋಜನೆಗಳನ್ನು ನಿಲ್ಲಿಸುತ್ತೇವೆ ಅಂತ ಹೆದರಿಸ್ತೀರಾ? ಇಂತಹ ಬ್ಲ್ಯಾಕ್‌ಮೇಲ್‌ಗೆ ಹೆದರಲ್ಲ, ಎಂದರು.

RELATED TOPICS:
English summary :Construction of a mother-child hospital for women, DKshi announced on the last day of the campaign

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...