Mon,May13,2024
ಕನ್ನಡ / English

ಬಿ.ಎಸ್. ಯಡಿಯೂರಪ್ಪ ಮನೆಗೆ ಸಿಎಂ ಬೊಮ್ಮಾಯಿ‌ ದೌಡು, ಮೀಟಿಂಗ್! | JANATA NEWS

12 May 2023
1744

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಸಚಿವರಾದ ಮುರುಗೇಶ್ ನಿರಾಣಿ, ಬೈರತಿ ಬಸವರಾಜ್ ಸಭೆ ನಡೆಸಿದ್ದಾರೆ.

ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳು ಬಂದ ನಂತರ ಹೈಕಮಾಂಡ್‌ ನಾಯಕರ ಜೊತೆಗೆ ದೂರವಾಣಿ ಕರೆ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತುಕತೆ ನಡೆಸಿದ್ದು, ಮತದಾನೋತ್ತರ ಅಂಕಿ-ಅಂಶಗಳ ವಿವರ ತರಿಸಿಕೊಂಡು ಖುದ್ದು ವರಿಷ್ಠರಿಗೆ ಕರೆ ಮಾಡಿ, ಮತ ಹಾಗೂ ಸ್ಥಾನಗಳ ಗಳಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಕಾವೇರಿ ನಿವಾಸದ ಬಳಿ ಎನ್.ರವಿಕುಮಾರ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಾವು ಏನೇ ಹೇಳಿದರೂ ನಾಳೆ ರಿಸಲ್ಟ್​ನಲ್ಲಿ ವಾಸ್ತವ ಗೊತ್ತಾಗಲಿದೆ. ನಾವು 105-120ರವರೆಗೆ ತಲುಪುತ್ತೇವೆ. ನನ್ನ ಪ್ರಕಾರ ಕಲ್ಯಾಣ ಕರ್ನಾಟಕದಲ್ಲಿ 15ಕ್ಕಿಂತ ಕಡಿಮೆ ಬರುವುದಿಲ್ಲ. ಬೆಂಗಳೂರಿನಲ್ಲಿ ಕೂಡ 15ಕ್ಕಿಂತ ಹೆಚ್ಚು ಸ್ಥಾನ ಗಳಿಸುತ್ತೇವೆ. ಕರಾವಳಿಯಲ್ಲಿ ಅತಿ ಹೆಚ್ಚು ಗೆಲ್ಲುತ್ತೇವೆ ಎಂದರು.

ನಾನು ಮೊದಲಿಂದಲೂ ಒಂದೇ ಮಾತು ಹೇಳುತ್ತ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಾವು ಗೆಲ್ಲುವ ವಿಶ್ವಾಸ ಇದ್ದು, ಬಹುಮತದ ಗಡಿ ದಾಟುತ್ತೇವೆ. ಮ್ಯಾಜಿಕ್ ನಂಬರ್ ತಲುಪುತ್ತೇವೆ. ಎಲ್ಲ ಕ್ಷೇತ್ರ, ಬೂತ್ ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಸದ್ಯದ ಸಮೀಕ್ಷಾ ವರದಿಗಳು ಹಾಗು ಪಕ್ಷದ ವರದಿಯನ್ನು ಹೈಕಮಾಂಡ್‌ಗೆ ಕಳುಹಿಸಿಕೊಡಲಾಗಿದ್ದು ಆ ಬಗ್ಗೆಯೂ ಯಡಿಯೂರಪ್ಪ ಜೊತೆ ಸಿಎಂ ಚರ್ಚಿಸಿದರು. ಚುನಾವಣೆ ನಂತರ ಯಡಿಯೂರಪ್ಪ ನಿವಾಸದಲ್ಲಿ ನಡೆದ ಮೊದಲ ಸಭೆ ಇದಾಗಿದ್ದು, ರಾಜಕೀಯವಾಗಿ ಬಿಜೆಪಿ ಮುಂದಿಡಬೇಕಾದ ಹೆಜ್ಜೆಗಳ ಕುರಿತು ಚರ್ಚಿಸಿದರು. ಬಹುಶಃ ಆಪರೇಷನ್ ಕಮಲದ ವಿಚಾರವೂ ಚರ್ಚೆಯಾಗಿದೆ ಎನ್ನಲಾಗುತ್ತಿದೆ.

RELATED TOPICS:
English summary :B.S. CM Bommayi Daudu at Yeddyurappa house, meeting!

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...