Mon,May20,2024
ಕನ್ನಡ / English

ಕಾಂಗ್ರೆಸ್‌ನ ಹಿಂಸಾ ಗ್ಯಾರಂಟಿ ಸ್ಕೀಮ್ ಸಹಿಸಲ್ಲ, ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ | JANATA NEWS

15 May 2023
1458

ಬೆಂಗಳೂರು : ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾಗುತ್ತಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್ ಖಂಡಿಸಿದ್ದಾರೆ.

ಕಾಂಗ್ರೆಸ್ ಬಹುಮತ ಗಳಿಸುತ್ತಿದ್ದಂತೆಯೇ ರಾಜ್ಯದಲ್ಲಿ ಗಲಾಟೆ, ಹಿಂಸಾಚಾರಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಕಾಂಗ್ರೆಸ್‌ನಿಂದ ಹಿಂಸಾ ಗ್ಯಾರಂಟಿ ಸ್ಕೀಮ್ ಜಾರಿಯಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದು, ಇತರ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ.

ಇದು ಅತ್ಯಂತ ಖಂಡನೀಯ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು ಎಂದು ಅವರು ಎಚ್ಚರಿಸಿದ್ದಾರೆ.

ರಾಜ್ಯದ ವಿವಿಧೆಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ, ಇದನ್ನು ತಡೆಯಬೇಕು. ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದ್ದು ಇದನ್ನು ನಿಯಂತ್ರಿಸಬೇಕು ಯಾವುದೇ ಕಾರಣಕ್ಕೂ ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

"ಕಾಂಗ್ರೆಸ್ ನಾಯಕರು ಇಂತಹ ಹಿಂಸಾತ್ಮಕ ಪ್ರವೃತ್ತಿಗೆ ಅವಕಾಶ ನೀಡಬಾರದು. ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಈಗಲೇ ಇದನ್ನು ತಡೆಯಬೇಕು. ಪಾಕಿಸ್ತಾನದ ಧ್ವಜ ಹಾರಿಸುವುದು, ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವುದು ದೇಶದ್ರೋಹದ ಚಟುವಟಿಕೆಯಾಗಿದೆ," ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಇಂತಹ ಹಿಂಸಾಚಾರ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತ ಬದಿಗಿಟ್ಟು ಉತ್ತಮ ಆಡಳಿತ ನೀಡಬೇಕು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತವನ್ನು ಬದಿಗಿಟ್ಟು, ತಾವು ಈಗಾಗಲೇ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದಾಗಬೇಕು. ಹಿಂಸೆಯನ್ನು ಪ್ರಚೋದಿಸುವವರು ಮತ್ತು ದೇಶದ್ರೋಹಿ ಚಟುವಟಿಕೆಗಳಿಗೆ ಬೆಂಬಲ ನೀಡುವವರನ್ನು ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

RELATED TOPICS:
English summary :Congress violence guarantee scheme not tolerable, warns Nalin Kumar Kateel

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...