Sun,May19,2024
ಕನ್ನಡ / English

ಮಧು ಬಂಗಾರಪ್ಪಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲು ನಾಮಧಾರಿ ಈಡಿಗ ಸಂಘಗಳ ಬೇಡಿಕೆ | JANATA NEWS

15 May 2023
1800

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರ ಹಾಗೂ ಸೊರಬ ಕ್ಷೇತ್ರದಿಂದ ಮತ್ತೊಮ್ಮೆ ಚುನಾಯಿತರಾಗಿರುವ ಶಾಸಕ ಮಧು ಬಂಗಾರಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಗ್ಲೋಬಲ್ ನಾಮಧಾರಿ(ಈಡಿಗ) ಸೇರಿದಂತೆ ಸಮುದಾಯದ ಪ್ರಮುಖ ಸಂಘಗಳ ಮುಖಂಡರು ಬೇಡಿಕೆ ಇಟ್ಟಿದ್ದಾರೆ.

ಎಸ್.ಬಂಗಾರಪ್ಪಜಿ ಅವರು ಬಿಜೆಪಿ ಸೇರಿದ್ದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಹಾಗೂ ಕಾಂಗ್ರೆಸ್ ರಾಜ್ಯದಲ್ಲಿ ದುರ್ಬಲಗೊಂಡಿತ್ತು. ಆದರೆ ಈಗ ಅದು ಮಧು ಬಂಗಾರಪ್ಪ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷ ಈ ಬಾರಿ ರಾಜ್ಯದಲ್ಲಿ ಅದ್ಭುತ ಬಹುಮತ ಪಡೆಯಲು ಸಾಧ್ಯವಾಗಿದೆ. ಆದ್ದರಿಂದ ಕಾಂಗ್ರೆಸ್ ಹೈಕಮಾಂಡ್ ನವರು ಇದೆಲ್ಲಾ ಅಂಶವನ್ನು ಗಮನದಲ್ಲಿಟ್ಟುಕೊಂಡು ನಾಮಧಾರಿ ಈಡಿಗ ಹಾಗೂ ಬಿಲ್ಲವ ಸಮುದಾಯದ ಪರವಾಗಿ ನೇತಾರರಾದ ಶ್ರೀ ಮಧು ಬಂಗಾರಪ್ಪ ಅವರಿಗೆ ಪ್ರಮುಖ ಪೋರ್ಟ್ಪೋಲಿಯೋಗಳೊಂದಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ, ಎಂದು ಗ್ಲೋಬಲ್ ನಾಮಧಾರಿ ಸಂಘದ ಉಪಾಧ್ಯಕ್ಷರಾದ ಹರೀಶ್ ನಾಯ್ಕ ಅವರು ಹೇಳಿದ್ದಾರೆ.

ಬಿಜೆಪಿಯ ಭದ್ರ ಕೋಟೆಯಾಗಿದ್ದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಮಧಾರಿ ಸಮುದಾಯವು ಪ್ರತಿ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ದಾರಿಯಲ್ಲಿ ಮುನ್ನುಗ್ಗುತ್ತಿರುವ ಅವರ ಪುತ್ರ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರಿಂದ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲ ವೇಳೆ ನಾಮಧಾರಿ ಈಡಿಗ ಹಾಗೂ ಬಿಲ್ಲವ ಸಮುದಾಯದ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿ ಕಾಂಗ್ರೆಸ್ ಐತಿಹಾಸಿಕ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದರು ತಪ್ಪಾಗಲಾರದು.

ಬಡವರ ಬಂದು ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಬಳಿಕ ತೆರವುಗೊಂಡಿದ್ದ ಸಮುದಾಯದ ನೇತಾರ ಸ್ಥಾನವನ್ನು, ಸಂಪುಟ ಸಚಿವ ಸ್ಥಾನದೊಂದಿಗೆ ಮಧು ಬಂಗಾರಪ್ಪ ಅವರು ಯಶಸ್ವಿಯಾಗಿ ತುಂಬುವ ವಿಶ್ವಾಸವನ್ನು ಸಮುದಾಯದ ಮುಖಂಡರುಗಳು ವ್ಯಕ್ತಪಡಿಸಿದ್ದಾರೆ. ಶಾಸಕರಾಗಿ ಹಿಂದಿನ ಅವಧಿಯಲ್ಲಿ ಮಧು ಬಂಗಾರಪ್ಪ ಅವರು ತಮ್ಮ ಸೊರಬ ಕ್ಷೇತ್ರದಲ್ಲಿ ಹತ್ತುಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು. ಕಳೆದ ಬಾರಿ ಅಧಿಕಾರದಲ್ಲಿರದಿದ್ದರೂ ಜನರ ಸಂಕಷ್ಟಗಳಿಗೆ ನಿರಂತರವಾಗಿ ಸ್ಪಂದಿಸಿದ ಕಾರಣ ಮತ್ತೆ ಕ್ಷೇತ್ರದ ಜನರು ಅವರಿಗೆ ಪುನಃ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.

English summary : Cabinet position for Madhu Bangarappa - Naamadhaari Ediga Assoc demands

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...