Thu,May02,2024
ಕನ್ನಡ / English

ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ | JANATA NEWS

30 May 2023
1128

ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ಸಿದ್ದವಿದ್ದು, ಮಕ್ಕಳ ಭವಿಷ್ಯ, ಮಕ್ಕಳ ಚಿಂತನೆ, ಮಕ್ಕಳ ಅವಶ್ಯಕತೆ ಇರುವ ವಿದ್ಯಾಭ್ಯಾಸ ಬಿಟ್ಟು ಬೇರೆ ಏನಾದರೂ ಪಠ್ಯದಲ್ಲಿ ಇದ್ದರೆ ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ನಾನು ಪ್ರಣಾಳಿಕೆಯ ಉಪಾಧ್ಯಕ್ಷನಾಗಿದ್ದೆ. ಅದರಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ, ಪಠ್ಯ ಪುಸ್ತಕ ಪರಿಷ್ಕರಣೆ ಆಗಲಿದೆ ಎಂದು ಭರವಸೆ ನೀಡಿದ್ದೇವೆ. ಅದರಂತೆ ಮಕ್ಕಳ ಚಿಂತನೆ ಕಲ್ಮಶವಾಗಬಾರದು ವಿದ್ಯಾಭ್ಯಾಸದಲ್ಲಿ ಅಡಚಣೆ ಆಗಬಾರದು. ಹಾಗಾಗಿ ಇದರಲ್ಲಿರುವ ತಪ್ಪುಗಳನ್ನು ಸರ್ಕಾರದ ಕಡೆಯಿಂದ, ನನ್ನ ಕಡೆಯಿಂದ ತೆರವು ಮಾಡುವ ಕೆಲಸ ಮಾಡುತ್ತೇವೆ.

ಈ ಸಂಬಂಧ ಈಗಾಗಲೇ ಸಿಎಂ ನಿರ್ದೇಶನದಂತೆ ನಾನೇ ಒಂದು ತಂಡವನ್ನು ರಚಿಸಿಕೊಳ್ಳುತ್ತಿದ್ದೇನೆ. ಇನ್ನೆರಡು ದಿನಗಳಲ್ಲಿ ತಂಡ ರಚನೆಯಾಗಲಿದೆ ಒಂದನೇ ತಾರೀಕು ಸಚಿವ ಸಂಪುಟ ಸಭೆ ಇದೆ. ಅಂದು ಇದರ ಬಗ್ಗೆ ಒಂದು ಚಿತ್ರಣ ಸಿಗಲಿದೆ. ಪಠ್ಯಪುಸ್ತಕದಲ್ಲಿನ ಎಲ್ಲವನ್ನು ಕೂಡ ಪರಿಶೀಲನೆ ಮಾಡಿ ಮಕ್ಕಳ ಭವಿಷ್ಯಕ್ಕೆ, ಮಕ್ಕಳ ಚಿಂತನೆಗೆ, ಅವಶ್ಯಕತೆ ಇರುವ ವಿದ್ಯಾಭ್ಯಾಸ ಬಿಟ್ಟು ಬೇರೆ ಏನಾದರೂ ಇದ್ದರೆ ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದ ಬದಲಾವಣೆ ಮಾಡುವ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಹಿಜಾಬ್ ವಿಚಾರ ಕುರಿತು ಮಾತನಾಡಿ, ಈ ಸಂಬಂಧ ಕಾನೂನುಬದ್ಧ ಹೋರಾಟ ಮುಂದುವರೆಯಲಿದೆ. ವಿಚಾರ ನ್ಯಾಯಾಲಯದ ಅಂಗಳದಲ್ಲಿರುವುದರಿಂದ ಈ ಬಗ್ಗೆ ಹೆಚ್ಚು ಏನನ್ನೂ ಹೇಳುವುದಿಲ್ಲ. ಏನೇ ಹೋರಾಟ ಮಾಡಿದರೂ ಕಾನೂನು ಬದ್ಧವಾಗಿ ಮಾಡಲಾಗುತ್ತದೆ ಎಂದು ತಿಳಿಸಿದರು. ಇಲಾಖೆ ಅಧ್ಯಯನ ಮಾಡಲು 2-3 ತಿಂಗಳು ಕಾಲಾವಕಾಶ ಬೇಕಾಗಿದೆ.

ಮಕ್ಕಳ ಭವಿಷ್ಯದ ವಿಚಾರವಾಗಿರುವುದರಿಂದ ಬಹಳ ಜವಾಬ್ದಾರಿಯುತವಾಗಿ ನಿರ್ಧಾರಗಳ ಕೈಗೊಳ್ಳಬೇಕಾಗಿದೆ. ಹಾಗಾಗಿ ಏನೇ ನಿರ್ಧಾರ ಮಾಡಿದರೂ ಅಧ್ಯಯನ ಮಾಡಿ ಯೋಚಿಸಿ, ಚರ್ಚಿಸಿಯೇ ನಿರ್ಧಾರ ಮಾಡುತ್ತೇವೆ. ಆತುರದ ನಿರ್ಧಾರಕ್ಕೆ ಮುಂದಾಗಲ್ಲ ಎಂದು ಸ್ಪಷ್ಟಪಡಿಸಿದರು.

RELATED TOPICS:
English summary :Textbook revision sure, team formation as directed by CM: Education Minister Madhu Bangarappa

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...