Fri,May03,2024
ಕನ್ನಡ / English

ಕಾರವಾರ: ಬಿಜೆಪಿ ಕರೆ ಕೊಟ್ಟ ಸ್ವಯಂಪ್ರೇರಿತ ಬಂದ್ ಭಾಗಶಃ ಯಶಸ್ವಿ | Janata news

28 May 2018
999

ಕಾರವಾರ : ರೈತರ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಕರೆಕೊಟ್ಟ ಬಂದ್‍ಗೆ ಕಾರವಾರದಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಾವು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲೇ ಕೃಷಿ ಸಾಲ ಮನ್ನಾ ಮಾಡುತ್ತೇನೆಂದು ಚುನಾವಣೆಯ ಮುನ್ನ ಭರವಸೆ ನೀಡಿದ್ದ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಘೋಷಣೆಯಂತೆ ರೈತರ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿ, ರಾಜ್ಯ ಬಿಜೆಪಿ ಘಟಕವು ರಾಜ್ಯಾದ್ಯಂತ ಸ್ವಯಂಪ್ರೇರಿತ ಬಂದ್‍ಗೆ ಕರೆಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಾರವಾರದಲ್ಲೂ ಸಹ ಬಹುತೇಕ ಅಂಗಡಿ ಮುಂಗಟ್ಟುಗಳು ಹಾಗೂ ಹೊಟೇಲ್‍ಗಳು ಬಂದ್ ಆಗಿದ್ದವು. ಬಸ್ ಹಾಗೂ ರಿಕ್ಷಾ ಸಂಚಾರವು ಎಂದಿನಂತೆ ಇತ್ತು. ಶಾಲಾ ಹಾಗೂ ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದವು. ಜನಸಂಚಾರ ಕೂಡ ಎಂದಿನಂತೆ ಸಾಮಾನ್ಯವಾಗಿತ್ತು.
KarwarBundh
ಶಾಸಕಿ ರೂಪಾಲಿ ನಾಯ್ಕ ನೇತೃತ್ವದಲ್ಲಿ ಬಿಜೆಪಿ ಮುಖಂಡರುಗಳು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ಮಿತ್ರಸಮಾಜದಿಂದ ಹೊರಟ ಪ್ರತಿಭಟನಾ ಮೆರವಣಿಗೆ ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.
KarwarBundh
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಶಾಸಕಿ ರೂಪಾಲಿ ನಾಯ್ಕ, ಕುಮಾರಸ್ವಾಮಿಯವರು ರಾಜ್ಯದ ರೈತರಿಗೆ ಸಾಲಮನ್ನಾದ ಭರವಸೆ ನೀಡಿ ನಂತರ ಯೂಟರ್ನ್ ತೆಗೆದುಕೊಂಡಿದ್ದಾರೆ. ಅವರು ಕೊಟ್ಟಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಈ ಮೂಲಕ ಮುಖ್ಯಮಂತ್ರಿಗಳು ರಾಜ್ಯದ ರೈತವರ್ಗಕ್ಕೆ ಮೋಸ ಮಾಡಿದ್ದಾರೆಂದು ಟೀಕಿಸಿದರು. ಕುಮಾರಸ್ವಾಮಿಯವರು ತಾವು ಕೊಟ್ಟ ಮಾತಿನಂತೆ ರೈತರ ಕೃಷಿ ಸಾಲ ಮನ್ನಾ ಮಾಡಬೇಕು ಇಲ್ಲವಾದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಶಾಸಕಿ ರೂಪಾಲಿ ನಾಯ್ಕ ಆಗ್ರಹಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಣಪತಿ ಉಳ್ವೇಕರ್ ಇನ್ನಿತರರು ಇದ್ದರು.

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Karwar: Bundh called by BJP partly successful

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...