Thu,May02,2024
ಕನ್ನಡ / English

ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ! | JANATA NEWS

01 Jun 2023
1615

ಬೆಂಗಳೂರು : ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ ಎಂದು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಮೇಕೆದಾಟು ಯೋಜನೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ ನಂತರ ರಾಜ್ಯ ಬಜೆಟ್​ನಲ್ಲಿ 1 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ, ಅದನ್ನು ಖರ್ಚು ಮಾಡಿಲ್ಲ ಎಂದು ಹೇಳಿದರು.

ನಮಗೇನು ತಮಿಳುನಾಡಿನ ಮೇಲೆ ದ್ವೇಷ ಇಲ್ಲ, ಅವರೊಂದಿಗೆ ಯುದ್ದ ಮಾಡಬೇಕೆಂದಿಲ್ಲ. ಅಲ್ಲಿರುವವರು ನಮ್ಮ ಅಣ್ಣ- ತಮ್ಮಂದಿರು. ಅಲ್ಲಿರುವವರ ಅಣ್ಣ-ತಮ್ಮಂದಿರು ಇಲ್ಲಿದ್ದಾರೆ. ಯಾರ ಮೇಲೂ ದ್ವೇಷ-ಅಸೂಯೆ ಮಾಡಬೇಕಾಗಿಲ್ಲ” ಎಂದರು.

”ಮೇಕೆದಾಟು ಯೋಜನೆ ನಮ್ಮ ಯೋಜನೆ. ತಮಿಳುನಾಡಿನವರಿಗೂ ಅನುಕೂಲ ಆಗುತ್ತದೆ. ಸಮುದ್ರಕ್ಕೆ ಹೋಗುವಂತಹ ನೀರಿನಿಂದ ಅವರಿಗೂ ಅನುಕೂಲ ಆಗುತ್ತದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಲ್ಲಾ ರೈತರಿಗೆ ನಾವು ಸಾಹಾಯ ಮಾಡಬಹುದು. ಬೀಗ ನಮ್ಮ ಹತ್ತಿರ ಇಲ್ಲ, ಕೇಂದ್ರ ಸರಕಾರದ ಹತ್ತಿರ ಇದೆ.ಎಷ್ಟು ನೀರನ್ನು ನಾವು ಅವರಿಗೆ ಬಿಡಬೇಕೋ ಆ ನೀರನ್ನು ನಾವು ಬಿಡಲು ಈಗಾಗಲೇ ಆದೇಶಗಳಾಗಿವೆ. ನಮ್ಮ ರಾಜ್ಯದ ರಕ್ಷಣೆ ಮಾಡುತ್ತೇವೆ. ನಮ್ಮಲ್ಲಿ ಜಲ ವಿದ್ಯುತ್ ಸ್ಥಾವರ ಮಾಡುವುದರಿಂದ ಅವರಿಗೇನಾದರೂ ನಷ್ಟವಿದೆಯಾ” ಎಂದು ಪ್ರಶ್ನಿಸಿದರು.

ಕಾವೇರಿ ನದಿಗೆ ಆಣೆಕಟ್ಟುಗಳ ಬೀಗ ಕೇಂದ್ರ ಸರ್ಕಾರದ ಕೈಯಲ್ಲಿದೆ. ಅವರಿಗೆ ಯಾವಾಗ ಎಷ್ಟು ನೀರು ಬಿಡಬೇಕು ಎಂದು ಅವರು ತೀರ್ಮಾನಿಸಿ ಬಿಡುತ್ತಾರೆ ಎಂದು ತಿಳಿಸಿದರು. ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಘಟಕ ಆರಂಭಿಸುವುದರಿಂದ ಅವರಿಗೆ ಆಗುವ ತೊಂದರೆ ಏನು? ನಮ್ಮಲ್ಲಿ ನೀರು ಸಂರಕ್ಷಣೆ ಮಾಡಿಕೊಂಡು ಕುಡಿಯುವ ನೀರು ಪೂರೈಸಬಹುದು ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಹೀಗಾಗಿ ತಮಿಳುನಾಡಿನವರು ಆತಂಕಪಡುವ ಅಗತ್ಯವಿಲ್ಲ.ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆ ಇಲ್ಲ. ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ. ಹೀಗಾಗಿ ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು.

ಸೌಹಾರ್ದತೆಯಿಂದ ಕುಡಿಯುವ ನೀರು ಹಾಗೂ ತಮಿಳುನಾಡಿನ ರೈತರಿಗೆ ಅನುಕೂಲವಾಗುವ ಯೋಜನೆಗೆ ಸಹಕರಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಮನವಿ ಮಾಡಿದರು.

RELATED TOPICS:
English summary :Appeal to the Tamil Nadu government, let the neighboring states live like their brothers!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...