Sun,May19,2024
ಕನ್ನಡ / English

ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ! | JANATA NEWS

01 Jun 2023
1373

ಬೆಂಗಳೂರು : ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ, ವಿಧಾನಸಭೆ ಚುನಾವಣೆ ವೈಫಲ್ಯಗಳಿಂದ ಪಾಠ ಕಲಿಯುವಂತೆ ಹೇಳಿದರಲ್ಲದೆ, ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು.

ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜತೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು.

ಬಿಡದಿಯ ತೋಟದಲ್ಲಿ ಕರೆದಿದ್ದ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು ಮುಖಂಡರಿಗೆ ಕೆಲ ಗಂಭೀರ ಸೂಚನೆಗಳನ್ನು ನೀಡಿದರು.

ವಿಧಾನಸಭೆ ಚುನಾವಣೆಯ ಸೋಲಿನ ಕಾರಣಗಳನ್ನು ಮುಂದಿಟ್ಟುಕೊಂಡು ಕೆಲ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದು, ಗುಂಪುಗಾರಿಕೆ ಬೇಡ, ಕೆಲಸ ಮಾಡುವವರಷ್ಟೇ ಬೇಕು, ಯಾವುದೇ ಕಾರಣಕ್ಕೂ ಗುಂಪುಗಾರಿಕೆ ಸಹಿಸುವ ಪ್ರಶ್ನೆ ಇಲ್ಲ ಎಂದಿದ್ದಾರೆ.

ಯಾವುದೇ ಕ್ಷಣದಲ್ಲಿ ಬಿಬಿಎಂಪಿ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಚುನಾವಣೆ ಯಾವಾಗ ಬೇಕಾದರೂ ಬರಲಿ. ನಮ್ಮ ಸಿದ್ಧತೆಗಳನ್ನು ನಾವು ಮಾಡಿಕೊಳ್ಳೋಣ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇವೆ ಎನ್ನುವ ಅಧೈರ್ಯ ಬೇಡ ಎಂದರು

ಯಾರು ಯಾರನ್ನೂ ಮೆಚ್ಚಿಸುವ ರೀತಿಯಲ್ಲಿ ಕೆಲಸ ಮಾಡುವ ಅಗತ್ಯವಿಲ್ಲ, ಪಕ್ಷವನ್ನು ಇನ್ನೂ ಅಧೋಗತಿಗೆ ತಳ್ಳುವುದು ಬೇಡ. ಪಕ್ಷದ ನೆಲೆ ಇರುವ ವಾರ್ಡುಗಳಲ್ಲಿ ಉತ್ತಮವಾಗಿ ಕೆಲಸ ಮಾಡಿ. ಜನರ ಸಂಪರ್ಕದಲ್ಲಿರಿ ಹಾಗೂ ಅವರಲ್ಲಿ ವಿಶ್ವಾಸ ಮೂಡಿಸಿ ಎಂದು ತಾಕೀತು ಮಾಡಿದರು.

ಪ್ರತಿ ವಾರ್ಡಿನ, ಪ್ರತಿ ಮತಗಟ್ಟೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಬೆಳೆಸಿ, ಜನರು ಹೆಚ್ಚೆಚ್ಚು ಪಕ್ಷಕ್ಕೆ ಸೇರಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿ ಮಾಡಿ. ಜನರಲ್ಲಿ ಪಕ್ಷದ ಪರ ಒಲವು ವ್ಯಕ್ತವಾಗುವ ರೀತಿಯಲ್ಲಿ ಕೆಲಸ ಮಾಡಿ ಎಂದು ಮುಖಂಡರಿಗೆ ಕಿವಿಮಾತು ಹೇಳಿದರು.

RELATED TOPICS:
English summary :Do not push the party down further, work better in the wards where the party is based!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...