Mon,May06,2024
ಕನ್ನಡ / English

5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ | JANATA NEWS

02 Jun 2023
1113

ಬೆಂಗಳೂರು : ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್‌ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲೇಬೇಕಾದ ಅಂಶಗಳನ್ನು ಡಿಸಿಎಂ ಡಿಕೆ. ಶಿವಕುಮಾರ ಅವರು ಹಂಚಿಕೊಂಡಿದ್ದಾರೆ.

ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್‌ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ಕೆಳಕಂಡಂತಿವೆ.

ಗೃಹಜ್ಯೋತಿ:
* ವಾರ್ಷಿಕ ವಿದ್ಯುತ್‌ ಬಿಲ್‌ನ ಸರಾಸರಿಯಲ್ಲಿ 200 ಯೂನಿಟ್‌ ಒಳಗೆ ಬಳಸಿದ್ದರೆ ಅಂತಹ ಕುಟುಂಬಕ್ಕೆ ಉಚಿತ ವಿದ್ಯುತ್‌ ನೀಡಲಾಗುವುದು.
* ವಾರ್ಷಿಕ ಸರಾಸರಿ ಮೇಲೂ ಕೂಡ 10%ಅನ್ನು ಉಚಿತ ಎಂದು ಪರಿಗಣಿಸಲಾಗುವುದು.

ಗೃಹಲಕ್ಷ್ಮಿ ಗ್ಯಾರಂಟಿ:
* ಅರ್ಹ ಫಲಾನುಭವಿಯಾಗಲು ಮನೆಯ ಯಜಮಾನಿಯರು ಜೂನ್‌ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಿ ಮೊಬೈಲ್‌ ಸಂಖ್ಯೆ, ಬ್ಯಾಂಕ್‌ ಖಾತೆ, ಆಧಾರ್‌ ಕಾರ್ಡ್‌ ಮೊದಲಾದ ವಿವರಗಳನ್ನು ನೀಡಬೇಕಿದೆ. ಆಗಸ್ಟ್‌ 15ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಮನೆಯ ಯಜಮಾನಿ ಖಾತೆಗೆ ನೇರ 2000 ರೂ. ಜಮಾವಣೆಯಾಗಲಿದೆ.
* ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರು, ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರೂ ಕೂಡ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

ಶಕ್ತಿ ಗ್ಯಾರಂಟಿ:
* ಜೂನ್‌ 11ರಿಂದ ಈ ಯೋಜನೆ ಜಾರಿಗೆ ಬರಲಿದೆ. ಸಿಟಿ ಬಸ್‌ಗಳು ಸೇರಿದಂತೆ ರಾಜ್ಯ ಸಾರಿಗೆಯ ಎಲ್ಲ ಬಸ್‌ಗಳಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು. ಆದರೆ, ರಾಜ್ಯ ಸಾರಿಗೆ ಬಸ್‌ಗಳಲ್ಲೇ ಹೊರ ರಾಜ್ಯಗಳಿಗೆ ಪ್ರಯಾಣಿಸಲು ಅವಕಾಶವಿಲ್ಲ.

ಅನ್ನ ಭಾಗ್ಯ:
ಈಗಾಗಲೇ ಪ್ರಸಕ್ತ ತಿಂಗಳ ಪಡಿತರ ವಿಲೇವಾರಿಯಾಗಿರುವ ಕಾರಣ, ಜುಲೈ 1ರಿಂದ ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.

ಯುವನಿಧಿ:
* 2022-23ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆ ಹೊಂದಿದವರಿಗೆ 6 ತಿಂಗಳ ಗ್ರೇಸ್‌ ಪಿರಿಯಡ್‌ ಇರುತ್ತದೆ. ಆರು ತಿಂಗಳ ನಂತರವೂ ಕೆಲಸ ಸಿಗದಿದ್ದರೆ 24 ತಿಂಗಳುಗಳ ಕಾಲ ಪಧವೀಧರರಿಗೆ ಮಾಸಿಕ 3ಸಾವಿರ ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು.
* 6 ತಿಂಗಳ ಒಳಗೆ ಖಾಸಗಿ/ಸರ್ಕಾರಿ ಕೆಲಸ ದೊರೆತರೆ ಅಥವಾ ಅರ್ಜಿ ಸಲ್ಲಿಸಿದ ನಂತರ ಕೆಲಸ ಸಿಕ್ಕರೂ ಕೂಡ ಅಂತಹವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

English summary : 5 Cabinet approval to implement guarantees: Points you need to know about the schemes

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...