Wed,May01,2024
ಕನ್ನಡ / English

ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಕಡ್ಡಾಯ: ಮಾರ್ಗಸೂಚಿ ಪ್ರಕಟ | JANATA NEWS

05 Jun 2023
1699

ಬೆಂಗಳೂರು : ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ "ಶಕ್ತಿ ಯೋಜನೆ"ಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಸರ್ಕಾರ ಸೋಮವಾರ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.

ಉಚಿತ ಪ್ರಯಾಣಕ್ಕಾಗಿ ಮಹಿಳೆಯರು 'ಶಕ್ತಿ ಸ್ಮಾರ್ಟ್ ಕಾರ್ಡ್'ಗಳನ್ನು ಹೊಂದಿರಬೇಕು ಎಂದು ಸರ್ಕಾರ ಸೂಚಿಸಿದೆ.

ಈ ಯೋಜನೆಯು ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಅನ್ವಯಿಸುವುದು.

ಐಷಾರಾಮಿ ಬಸ್ ಗಳಾದ ರಾಜಹಂಸ, ನಾನ್ ಎ.ಸಿ ಸ್ಲೀಪರ್ ಹಾಗೂ ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ ಬಸ್ ಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.

ಬಿಎಂಟಿಸಿ ಹೊರತುಪಡಿಸಿ ಉಳಿದ ರಸ್ತೆ ಸಾರಿಗೆ ಬಸ್ ಗಳಲ್ಲಿ (ಎಸಿ, ಐಷಾರಾಮಿ ಮತ್ತು ಅಂತಾರಾಜ್ಯ ಬಸ್ ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಬೇಕು.

ಪ್ರಯಾಣಿಸಬೇಕಿದ್ದರೆ 'ಶಕ್ತಿ ಸ್ಮಾರ್ಟ್​​ಕಾರ್ಡ್' ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಈ ಯೋಜನೆಯಲ್ಲಿ ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್‌ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು.

"ಶಕ್ತಿ ಸ್ಮಾರ್ಟ್ ಕಾರ್ಡ್"ನ್ನು ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್‌ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕದ್ದು ಎಂದು ಸರ್ಕಾರ ಆದೇಶ ಹೊರಡಿಸಿದೆ.

RELATED TOPICS:
English summary :Shakti Smart Card Mandatory for Free Travel for Women: Guidelines Announced

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...