Sat,May04,2024
ಕನ್ನಡ / English

ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು ವಿಪಕ್ಷಗಳ ಮೇಲೆ ಆರೋಪಿಸುತ್ತಿರುವ ಹಾಸ್ಯಾಸ್ಪದ! | JANATA NEWS

06 Jun 2023
1329

ಬೆಂಗಳೂರು : ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು.

ಗ್ಯಾರಂಟಿಗಳ ಬಗ್ಗೆ ಚರ್ಚೆ ಮಾಡಿ ವೇದಿಕೆ ಸಿದ್ಧ ಮಾಡಿದ್ದವರೇ ನೀವು, ಚುನಾವಣಾ ಪೂರ್ವದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಂದು ಹೇಳಿದ್ದ ನೀವು ಈಗ ಷರತ್ತು ವಿಧಿಸಿದ್ದಿರಿ. ವಿನಾಕಾರಣ ಜನರನ್ನು ಪ್ರತಿಪಕ್ಷಗಳು ದಾರಿ ತಪ್ಪಿಸುತ್ತಿವೆ ಎಂಬ ಆರೋಪ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಕಳೆದ ಬಾರಿ ಇಂಧನ ಸಚಿವರು ಯಾರಿದ್ರು, ಸಿಎಂ ಯಾರಿದ್ರು, ಇವರೇ ತಾನೇ ಇದ್ದಿದ್ದು, ಆಗ ಏಕೆ ಈ ಬಗ್ಗೆ ಯೋಚನೆ ಮಾಡಿಲ್ಲ. ಸಿದ್ದರಾಮಯ್ಯನವರೇ ಎಲ್ಲರಿಗೂ 200 ಯುನಿಟ್ ಉಚಿತ ಎಂದು ಹೇಳಿದ್ದು ನೀವೆ ಅಲ್ಲವೇ? ಒಂದು ಮನೆಯಲ್ಲಿ ಮೂರು ಮಹಡಿ ಕಟ್ಟಿರುತ್ತಾರೆ. ಮೀಟರ್ ಒಬ್ಬರ ಹೆಸರಿನಲ್ಲಿ ಇರುತ್ತದೆ. ಆಗ ಬಾಡಿಗೆದಾರರು ಏನು ಮಾಡಬೇಕು.

ನಾವು ಪ್ರತಿಪಕ್ಷದಲ್ಲಿ ಇರುವುದೇ ಯುದ್ಧ ಮಾಡಲು, ಇದನ್ನೇ ಮಾಡೋದು. ಬಾಡಿಗೆದಾರರಿಗೆ, ಹೊಸಮನೆ ಕಟ್ಟಿದವರಿಗೆ ಉಚಿತ ವಿದ್ಯುತ್‌ ಇಲ್ಲವೆ ಎಂದು ಪ್ರಶ್ನಿಸಿದ ಅವರು, ಉಪಮುಖ್ಯಮಂತ್ರಿ ಸ್ನೇಹಕ್ಕೂ ಸಿದ್ಧ, ಯುದ್ಧಕ್ಕೂ ಸಿದ್ಧ ಎಂದು ಹೇಳಿದ್ದಾರೆ. ಜನ ನಮ್ಮನ್ನು ಪ್ರತಿಪಕ್ಷದ ಸ್ಥಾನದಲ್ಲಿ ಕೂರಿಸಿರುವುದು ಸ್ನೇಹ ಮಾಡಲು ಅಲ್ಲ, ಯುದ್ಧ ಮಾಡಲು. ಜನಪರವಾದ ಹೋರಾಟವನ್ನು ಮಾಡುತ್ತೇವೆ. ಚುನಾವಣಾ ಪೂರ್ವದಲ್ಲಿ ನೀಡಿದ ಗ್ಯಾರಂಟಿಗಳು ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಡೂಪ್ಲಿಕೇಟ್ ಆಗಿವೆ ಎಂದು ಹೆಚ್​ಡಿಕೆ ಕಿಡಿಕಾರಿದರು.

ತುಳಿತಕ್ಕೆ ಒಳಗಾದ ವರ್ಗಗಳಿಗೆ ಸುಲಭವಾಗಿ ಈ ಯೋಜನೆಗಳು ಸಿಗುವುದಿಲ್ಲ. ಬಡವರಿಗೆ ಬದುಕು ಕಟ್ಟಿಕೊಳ್ಳಲು ನಮ್ಮ ಸಹಮತವಿದೆ. ಆದರೆ, ಜನರ ತೆರಿಗೆ ಹಣದಿಂದ ಇಂತಹ ಕಾರ್ಯಕ್ರಮ ನೀಡಲಾಗುತ್ತದೆ. ಬಿಜೆಪಿ ನಿನ್ನೆ ಯಾವ ಪುರುಷಾರ್ಥಕ್ಕೆ ಧರಣಿ ಮಾಡಿದೆ. ಅಧಿಕಾರದಲ್ಲಿದ್ದಾಗ ವಿದ್ಯುತ್ ದರ ಏರಿಕೆಗೆ ಬಿಜೆಪಿ ಅರ್ಜಿ ಹಾಕಿರಲಿಲ್ಲವೇ, ಆಗ ನಿಮಗೆ ಪರಿಜ್ಞಾನವಿರಲಿಲ್ಲವೆ? ಎರಡೂ ರಾಷ್ಟ್ರೀಯ ಪಕ್ಷಗಳ ನಡವಳಿಕೆ ಬಗ್ಗೆ ಜನರು ಎಚ್ಚರಿಕೆ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು.

ಮೇಕದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆ ಐದು ವರ್ಷದಲ್ಲಿ ಪೂರ್ಣಗೊಳಿಸುವ ತೀರ್ಮಾನವನ್ನು ಸರ್ಕಾರ ಕೈಗೊಂಡರೆ ನಾವು ಸಹಕಾರ ಕೊಡುತ್ತೇವೆ. ಇಲ್ಲದಿದ್ದರೆ ಜನರನ್ನು ಜಾಗೃತಿಗೊಳಿಸಲು ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈಗಿನ ಮುಖ್ಯಮಂತ್ರಿಗಳು ಸರ್ವವನ್ನೂ ಬಲ್ಲವರು. ಈಗಾಗಲೇ 13 ಬಜೆಟ್ ಗಳನ್ನು ಮಂಡಿಸಿದ್ದಾರೆ. ಇನ್ನೇನು 14ನೇ ಬಜೆಟ್ ಅನ್ನೂ ಮಂಡಿಸಲಿದ್ದಾರೆ. ರಾಜ್ಯದ ಹಣಕಾಸು ಬಗ್ಗೆ, ಆರ್ಥಿಕತೆ ಬಗ್ಗೆ ಅವರಿಂತ ಬಲ್ಲ ಜ್ಞಾನಿಗಳು ಯಾರಿದ್ದಾರೆ? ಮುಂದೇನು ಮಾಡಬೇಕು ಎನ್ನುವುದು ಅವರಿಗೆ ಗೊತ್ತಿರಬೇಕು. ಅದು ಬಿಟ್ಟು ಜನರನ್ನು ಪ್ರತಿಪಕ್ಷಗಳು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಅವರು ಹೇಳಿದರು.

English summary :It is ridiculous that those who came to power by lying that they are free and sure are accusing the opposition!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...