Tue,Apr30,2024
ಕನ್ನಡ / English

ಉಚಿತ ವಿದ್ಯುತ್​ ಪಡೆಯಲು ಷರತ್ತುಗಳು ಅನ್ವಯ: ಸಚಿವ ಜಾರ್ಜ್​ | JANATA NEWS

07 Jun 2023
1761

ಬೆಂಗಳೂರು : ರಾಜ್ಯ ಕಾಂಗ್ರೆಸ್​ ಸರ್ಕಾರ ವಿಧಾನಸಭೆ ಚುನಾವಣೆ ವೇಳೆ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜೂನ್​ 1ರಂದು ಜಾರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾರಿ ಮಾಡಿದೆ.

ಗೃಹಜ್ಯೋತಿ ಯೋಜನೆ ಕುರಿತು ಸಾರ್ವಜನಿಕ ವಲಯಗಳಲ್ಲಿ ಹಲವು ಅನುಮಾನಗಳಿದ್ದು ಈ ಕುರಿತಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್​ ಸ್ಪಷ್ಟೀಕರಣವನ್ನು ನೀಡಿದ್ದಾರೆ.

ಗೃಹ ಬಳಕೆ ಬಳಕೆದಾರರು ಸರಾಸರಿ ಒಂದು ವರ್ಷ ಬಳಕೆ ಮಾಡಿದ ವಿದ್ಯುತ್ ಅಂಕಿ ಅಂಶಗಳನ್ನು ಪಡೆದುಕೊಂಡು ಉಚಿತವಾಗಿ ವಿದ್ಯುತ್ ನೀಡಲಾಗುತ್ತದೆ ಎಂದರು. ಜೂನ್ 15 ರಿಂದ ಯೋಜನೆಯನ್ನು ಜಾರಿ ಮಾಡುತ್ತೇವೆ. ಗ್ರಾಹಕರು ಸರಾಸರಿ ಬಿಲ್ ಗಿಂತ ಹೆಚ್ಚು ಉಪಯೋಗ ಮಾಡಿದರೆ ಹೆಚ್ಚುವರಿ ಬಳಕೆಗೆ ಬಿಲ್ ಕಟ್ಟಬೇಕಿದೆ ಎಂದರು.

ರಾಜ್ಯದಲ್ಲಿ ಒಟ್ಟು 2. 16 ಕೋಟಿ ಗ್ರಾಹಕರು ಇದ್ದಾರೆ, ಈ ಪೈಕಿ 200 ಯೂನಿಟ್ ಗಿಂತ ಕಡಿಮೆ ಬಳಕೆ ಮಾಡುವ ಗ್ರಾಹಕರು 2.14 ಕೋಟಿ ಇದ್ದಾರೆ. ಈ ಗ್ರಾಹಕರು ಸರಾಸರಿ 53 ಯೂನಿಟ್ ವಿದ್ಯುತ್ ಬಳಕೆ ಮಾಡುತ್ತಾರೆ.‌ ಎರಡು ಲಕ್ಷ ಜನರು 200 ಯೂನಿಟ್ ಹೆಚ್ಚು ಬಳಕೆ ಮಾಡುತ್ತಾರೆ ಎಂದು‌ ತಿಳಿಸಿದರು. ಉಚಿತ ಯೋಜನೆ ಅಡಿಯಲ್ಲಿ ಗ್ರಾಹಕರು ನಿಗದಿತ ಶುಲ್ಕವನ್ನು ಕಟ್ಟುವ ಹಾಗಿಲ್ಲ. ಅದರೆ ಸರಾಸರಿ ಬಳಕೆಗಿಂತ ಹೆಚ್ಚುವರಿ ಬಳಕೆ ಮಾಡಿದರೆ ಅಂತಹ ಗ್ರಾಹಕರು ನಿಗದಿತ ಶುಲ್ಕ ಕಟ್ಟಬೇಕಿದೆ ಎಂದು‌ ತಿಳಿಸಿದರು.

ಈ ಕುರಿತು ಇಂಧನ ಸಚಿವ ಕೆ ಜೆ ಜಾರ್ಜ್ ಬೆಂಗಳೂರಿನ ಬೆಸ್ಕಾಂ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಗೃಹಜ್ಯೋತಿ ಯೋಜನೆಯನ್ನು ನಾಗರಿಕರು ಪಡೆಯುವುದು ಹೇಗೆ, ಯಾವ ರೀತಿ ಅರ್ಜಿ ಸಲ್ಲಿಸಬೇಕು, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಆಗಸ್ಟ್ 1ರಿಂದ ಗೃಹಜ್ಯೋತಿ ಯೋಜನೆ ಜಾರಿಗೆ ಬರಲಿದ್ದು, ಜೂನ್ ತಿಂಗಳ ವಿದ್ಯುತ್ ಶುಲ್ಕವನ್ನು ನಾಗರಿಕರು ಕಡ್ಡಾಯವಾಗಿ ಪಾವತಿಸಬೇಕು. ಜುಲೈ ತಿಂಗಳ ಬಿಲ್ ಆಗಸ್ಟ್ ತಿಂಗಳಿನಲ್ಲಿ ಪಾವತಿ ಮಾಡುವುದು ಬೇಡ. ರಾಜ್ಯದಲ್ಲಿ 2.16 ಕೋಟಿ ಗ್ರಾಹಕರು 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದು 200 ಯೂನಿಟ್ ಗಿಂತ ಹೆಚ್ಚು ಬಳಕೆ ಮಾಡುವವರು 2 ಲಕ್ಷ ಮಂದಿಯಿದ್ದಾರೆ. ರಾಜ್ಯದ 2 ಕೋಟಿ 14 ಲಕ್ಷ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದು ತಿಳಿಸಿದರು.

ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಸೇವಾಸಿಂಧು ಪೋರ್ಟಲ್​ ಮೂಲಕ ಅರ್ಜಿ ಸಲ್ಲಿಸಬೇಕು.

ಇದಕ್ಕಾಗಿ ಪ್ರತ್ಯೇಕ ಆಯಪ್​ ಒಂದನ್ನು ಅಭಿವೃದ್ದಿ ಪಡಿಸಲಾಗುತ್ತಿದೆ. ಸ್ವಂತ ಮನೆ ಅಥವಾ ಬಾಡಿಗೆ ಮನೆ ಇರಲಿ ಅರ್ಜಿ ಸಲ್ಲಿಸುವಾಗ ಕರಾರು ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಜೂನ್ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ. ಅರ್ಜಿ ಸಲ್ಲಿಕೆಗೆ ಜುಲೈ 5 ಕೊನೆಯ ದಿನವಾಗಿದೆ.

ಆಯಪ್ ಡೌನ್ ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸುವುದು,

ಬಾಡಿಗೆದಾರರು ಕನಿಷ್ಠ ಮೂರು ದಾಖಲೆಗಳನ್ನು ನೀಡಬೇಕು

ಆಧಾರ್ ಕಾರ್ಡು, ಬಾಡಿಗೆ ಕರಾರು ಪತ್ರ ಹಾಗೂ ಪ್ರತಿ ತಿಂಗಳು ಕಟ್ಟುವ ವಿದ್ಯುತ್ ಸ್ಥಾವರದ ಐಡಿ ನಂಬರ್ ಇರುವ ಬಿಲ್

ಆಯಪ್ ನಲ್ಲಿ ಲಾಗಿನ್ ಆಗಿ Opt in ಆಪ್ಷನ್ ಪ್ರೆಸ್ ಮಾಡಬೇಕು, ಬಳಿಕ ಅಲ್ಲಿ ನಿಮ್ಮ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು.

ಹೊಸದಾಗಿ ಮನೆ ಕಟ್ಟಿದವರಿಗೆ, ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ಇರುವವರಿಗೆ ಈ ಯೋಜನೆ ಸದ್ಯಕ್ಕೆ ಜಾರಿಯಾಗುವುದಿಲ್ಲ. ಇದರ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಸ್ಪಷ್ಟತೆಯನ್ನು ನೀಡುತ್ತೇವೆ.

RELATED TOPICS:
English summary :Conditions apply to get free electricity: Minister George

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...