Thu,May02,2024
ಕನ್ನಡ / English

ಈ ವರ್ಷವೇ ಪಠ್ಯಪುಸ್ತಕಗಳ ಪರಿಷ್ಕರಣೆ ನಡೆಯಲಿದೆ: ಮಧು ಬಂಗಾರಪ್ಪ | JANATA NEWS

08 Jun 2023
1565

ಬೆಂಗಳೂರು : ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆಯಾಗಲಿದೆ. ಬಿಜೆಪಿ ಸರ್ಕಾರದಲ್ಲಿ ಪಠ್ಯಕ್ರಮದಲ್ಲಿ ಪರಿಷ್ಕರಣೆ ಆದ ಪಾಠಗಳನ್ನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿಯೇ ಮಾಡುತ್ತೇವೆ. ಮಕ್ಕಳು ತಪ್ಪು ಓದಬಾರದು. ಪಠ್ಯ ಬದಲಾವಣೆಗೆ ಮುಂದಿನ ವರ್ಷದ ತನಕ ಕಾಯಬೇಕಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪಠ್ಯಪುಸ್ತಕಗಳ ಪರಿಷ್ಕರಣೆಗಾಗಿ ವೈಯಕ್ತಿಕ ಅಭಿರುಚಿ ತೋರಿರುವುದರಿಂದ ಆ ಕೆಲಸವನ್ನು ಆದ್ಯತೆಯ ಮೇಲೆ ಮಾಡಲಾಗುತ್ತಿದೆ ಮತ್ತು ತಜ್ಞರ ತಂಡವೊಂದು ಈ ದಿಶೆಯಲ್ಲಿ ಈಗಾಗಲೇ ಕಾರ್ಯನಿರತವಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಿದೆ. ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಸಂಪುಟದಲ್ಲಿ ಇಟ್ಟೇ ತೀರ್ಮಾನವಾಗಲಿದೆ. ಮುಂದಿನ ಸಂಪುಟದಲ್ಲೇ ಚರ್ಚೆ ಮಾಡಲಾಗುತ್ತದೆ. ಈ ಹಿಂದೆಯೂ ಸಪ್ಲಿಮೆಂಟರಿ ಪರಿಷ್ಕರಣೆ ಆಗಿದ್ದಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಒತ್ತಡ ಬೇಡ ಎಂದು ಹೇಳಿದ್ದಾರೆ.

ಸ್ವತಃ ಸಿಎಂ ಅವರೇ ಈ ಬಗ್ಗೆ ಹೆಚ್ಚು ಆಸಕ್ತಿ ಇಟ್ಟುಕೊಂಡಿದ್ದಾರೆ. ತಜ್ಞರೂ ಕೂಡಾ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕ್ಷಣದಲ್ಲೂ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧಿಸಿ ಸಭೆ ನಡೆಯುತ್ತಿದೆ. ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೆವೆ. ಯಾವ ಪಾಠ ಮಾಡಬೇಕು, ಯಾವುದು ಮಾಡಬಾರದು ಎಂಬುದನ್ನೂ ತಿಳಿಸುತ್ತೇವೆ, ಎಂದರು.

ಆರಂಭದಲ್ಲಿ ಸೇತು ಬಂಧ ಇರಲಿದೆ. ಮಕ್ಕಳು ಪಠ್ಯಕ್ಕೆ ಹೋಗಲ್ಲ. ಮತ್ತು ಪಠ್ಯದಲ್ಲಿ ಏನು ಓದಿಸಬೇಕು, ಯಾವುದು ಬೇಡ ಎಂಬುದನ್ನು ನಿರ್ಧರಿಸಲಾಗುತ್ತದೆ. ಇದು ಬಹಳ ಸೂಕ್ಷ್ಮ ವಿಚಾರವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ‌. ಮಕ್ಕಳ ಭವಿಷ್ಯಕ್ಕೆ ಒಳ್ಳೆಯ ಅಂಶ ಉಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ತಜ್ಞರು ಪಕ್ಷಕ್ಕೆ ಸೀಮಿತವಾಗಿರಲ್ಲ. ಅವರು ಕೊಡುವ ಸಲಹೆ ಪರಿಗಣಿಸಲಾಗುತ್ತದೆ. ತಪ್ಪು ತಿಳುವಳಿಕೆ ತಕ್ಷಣ ತಡೆ ಹಿಡಿಯಬೇಕಾಗುತ್ತದೆ. ಅದನ್ನು ನಾವು ಮಾಡುತ್ತೇವೆ. ಯಾವ ಪಠ್ಯ ಬೇಡ ಎಂದು ತಜ್ಞರು ಸೂಚಿಸುತ್ತಾರೋ ಅದನ್ನು ಬೋಧಿಸದಂತೆ ತಿಳಿಸಲು ಅವಕಾಶವಿದೆ ಎಂದಿದ್ದಾರೆ.

ಶಿಕ್ಷಕರ ನೇಮಕದಲ್ಲಿ ಎರಡು ಸಮಸ್ಯೆ ಇದೆ. ಕಾನೂನಿನ ತೊಡಕಿದೆ ಅದನ್ನು ಎಜಿ ಅವರ ಚರ್ಚೆ ಮಾಡಲಾಗುತ್ತದೆ‌. ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರೇ ಸಮಸ್ಯೆಗೆ ಪರಿಹಾರವಲ್ಲ. ಈ ಸಮಸ್ಯೆಯನ್ನು ಆದಷ್ಟು ಶೀಘ್ರವಾಗಿ ಪರಿಹರಿಸಲಾಗುತ್ತದೆ‌ ಎಂದರು.

RELATED TOPICS:
English summary :Textbooks will be revised this year itself: Madhu Bangarappa

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...