Tue,May07,2024
ಕನ್ನಡ / English

ಗ್ಯಾರಂಟಿ ಯೋಜನೆಗಳಿಗೆ ಷರತ್ತು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ! ಮಕ್ಕಳಿಗೆ ಪರಿಶುದ್ಧ ವಾತಾವರಣ ಸೃಷ್ಟಿ ಮಾಡಬೇಕು.. | JANATA NEWS

08 Jun 2023
1165

ಬೆಂಗಳೂರು : ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಮಾತನಾಡಿ, ಗ್ಯಾರಂಟಿ ಘೋಷಣೆ ಮಾಡುವಾಗ ಸಿಎಂ
ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಪರಿಜ್ಞಾನ ಇರಲಿಲ್ಲವಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಮುಖ್ಯವಾಗಿ ಗೃಹಲಕ್ಷ್ಮಿ ಕಾರ್ಯಕ್ರಮದಲ್ಲಿ ಮತ್ತೊಂದು ಗೊಂದಲ ತಂದಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಅವರು, ಅವರೊಬ್ಬ ಸಚಿವರಷ್ಟೇ ಅಲ್ಲ, ಬಹುತೇಕ ಎಲ್ಲ ಸಚಿವರಿಗೆ ಗ್ಯಾರಂಟಿಗಳ ಯಾವ ಗ್ಯಾರಂಟಿಯೂ ಇಲ್ಲ ಎಂದರು.

ಇದು ಒಂದು ಕಾರ್ಯಕ್ರಮದ ಗೊಂದಲ ಅಲ್ಲ, ಐದು ಕಾರ್ಯಕ್ರಮಗಳ ಗೊಂದಲ. ಯಾರಿಗೂ ಯಾವ ಸ್ಪಷ್ಟತೆಯೂ ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಗ್ಯಾರಂಟಿಗಳು ಲೇವಡಿಯ ವಸ್ತುವಾಗಿವೆ. ಮಾಧ್ಯಮಗಳಲ್ಲಿ ಕೂಡ ಇವುಗಳ ಬಗ್ಗೆ ಸಾಕಷ್ಟು ನಕಾರಾತ್ಮಕ ವರದಿಗಳು ಬರುತ್ತಿವೆ ಎಂದು ಕುಮಾರಸ್ವಾಮಿ ಅವರು ಉಲ್ಲೇಖ ಮಾಡಿದರು.

ಚುನಾವಣೆ ಪೂರ್ವದಲ್ಲಿ ಏನು ಘೋಷಣೆ ಮಾಡಿದ್ದರು? ಈಗ ಸಬೂಬು ಏನು ಕೊಡುತ್ತಿದ್ದಾರೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, 15 ಲಕ್ಷ ಬಿಜೆಪಿ ಯವರು ಕೊಟ್ಟಿದ್ದಾರಾ ಅಂತ ಕೇಳುತ್ತಾ ಇದ್ದಾರೆ. ಅವರು ಕೊಟ್ಟಿಲ್ಲ ಅಂತ ನಾನು ಕೊಡಲ್ಲ ಅನ್ನೋದು ಎಷ್ಟು ಸರಿ? ಘೋಷಣೆ ಮಾಡುವಾಗ ಪರಿಜ್ಞಾನ ಇರಲಿಲ್ವಾ ಹಾಗಾದರೆ ಎಂದು ಪ್ರಶ್ನಿಸಿದ್ದಾರೆ.

ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅತೀವ ಕುತೂಹಲ, ನಿರೀಕ್ಷೆ ಹುಟ್ಟು ಹಾಕಲಾಗಿತ್ತು. ಕೊನೆಪಕ್ಷ ಆ ಇಲಾಖೆಗಳನ್ನು ಮುನ್ನಡೆಸುವ ಇಬ್ಬರೂ ಸಚಿವರಿಗೆ ಈ ಕಾರ್ಯಕ್ರಮಗಳ ಬಗ್ಗೆ ಖಾತರಿ, ಸ್ಪಷ್ಟತೆ ಇಲ್ಲ ಎನ್ನುವುದು ಅವರ ಹೇಳಿಕೆಗಳಿಂದ ಗೊತ್ತಾಗುತ್ತದೆ. ಚುನಾವಣೆ ಪೂರ್ವದಲ್ಲಿ ಏನು ಘೋಷಣೆ ಮಾಡಿದ್ದರು ಎನ್ನುವುದು ನನಗೆ ಮಾತ್ರವಲ್ಲ ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಈಗ ನೋಡಿದರೆ ಸರಕಾರ ಸಬೂಬುಗಳ ಪಟ್ಟಿ ಮಾಡಿಕೊಂಡು ಕಾಲಹರಣ ಮಾಡುತ್ತಿದೆ, ಜನರ ನಂಬಿಕೆಯ ಹರಣ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.

ಅಂದು ಕಾಗೋಡು ತಿಮ್ಮಪ್ಪ ಸ್ಪೀಕರ್ ಆಗಿದ್ದರು. ಆಗ ಇಂಧನ ಇಲಾಖೆಯಲ್ಲಿ ಎಷ್ಟು ರೂಪಾಯ ಖರ್ಚು ಮಾಡಿ ಸೋಲಾರ್ ಹಾಕಿಸಿದರು, ಅದರಲ್ಲಿ ಅಕ್ರಮ ಮಾಡಿದರು ಅಂತ ಮಾಹಿತಿ ಬಂತು. ದೂರು ಬಂದ ಬೆನ್ನಲ್ಲೇ ಅಂದು ನಾನು ವಿಧಾನಸಭೆಯಲ್ಲಿ ಚರ್ಚೆ ಮಾಡಿದೆ. ಸದನ ಸಮಿತಿಗೂ ನಾನು ಹೇಳಿದ್ದೆ. ಆದರೆ ಅಲ್ಲಿಗೆ ತೋಳವನ್ನೇ ತಂದರೆ ಹೇಗೆ? ಕುರಿ ಕಾಯೋಕೆ ತೋಳ ತಂದ ಹಾಗೆ ಆಗಿದೆ ಅಷ್ಟೆ. ಕೋಟ್ಯಾಂತರ ಖರ್ಚು ಮಾಡಿ ಖರೀದಿ ಮಾಡಿ ಅಗ್ರಿಮೆಂಟ್ ಮಾಡಿದ್ದರಲ್ಲ ತಾಕತ್ ಇದ್ದರೆ ಅದನ್ನು ರದ್ದು ಮಾಡಿ ಎಂದು ಸವಾಲೆಸೆದರು.

2013-18ರಲ್ಲಿ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಅಕ್ರಮ ಅದಿರು ಸಾಗಣೆ ಕುರಿತಂತೆ ಸದನ ಸಮಿತಿ ರಚನೆ ಮಾಡಲಾಗಿತ್ತು. ಸುದೀರ್ಘ ಪರಿಶೀಲನೆ ನಂತರ ಹೆಚ್.ಕೆ.ಪಾಟೀಲ್ ಅವರು ಒಂದು ವರದಿ ನೀಡಿದ್ದರು. ಬಿಜೆಪಿಯನ್ನು 40 ಪರ್ಸೆಂಟ್ ಪಾರ್ಟಿ ಎಂದವರು ಈ ವರದಿಯನ್ನು ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದರು.

ಪಠ್ಯ ಪುಸ್ತಕ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಅವರು, ಮಕ್ಕಳ ವಿಚಾರದಲ್ಲಿ ರಾಜ್ಯ ಸರಕಾರ ಚೆಲ್ಲಾಟ ಆಡುತ್ತಿದೆ ಎಂದರು.

ಹಿಂದಿನ ಸರಕಾರ ಈಗಾಗಲೇ ಪಠ್ಯ ಬದಲಾವಣೆ ಮಾಡಿದೆ. ಆ ಬಗ್ಗೆ ಸಾಕಷ್ಟು ಗೊಂದಲ ಆಗಿತ್ತು. ಈಗ ಈ ಸರಕಾರವೂ ಅದೇ ದಾರಿಯಲ್ಲಿ ಇದೆ. ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಪಠ್ಯ ಪುಸ್ತಕಗಳನ್ನು ಮುದ್ರಿಸಿ ಶಾಲೆಗಳಿಗೆ ಕಳಿಸಲಾಗಿದೆ. ಇದು ಜನರ ದುಡ್ಡಲ್ಲವೇ? ಎಂದು ಅವರು ಹೇಳಿದರು.

ಮಕ್ಕಳಿಗೆ ಪರಿಶುದ್ಧ ವಾತಾವರಣ ಸೃಷ್ಟಿ ಮಾಡಬೇಕು. ಮಕ್ಕಳಿಗೆ ಒಳ್ಳೆಯ ಜ್ಞಾನ ತುಂಬಬೇಕು. ದ್ವಂದ್ವ ಹೇಳಿಕೆ ನೀಡೋ ಮೂಲಕ ಅವರ ಮೇಲೆ ಪರಿಣಾಮ ಬೀಳುವಂತೆ ಮಾಡಬೇಡಿ ಎಂದು ಮನವಿ ಮಾಡಿಕೊಂಡರು

RELATED TOPICS:
English summary :Condition for guarantee schemes, Congress lashed out against the government!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...