Tue,May14,2024
ಕನ್ನಡ / English

ಗಂಡ ತೆರಿಗೆ ಪಾವತಿ ಮಾಡಿದ್ರೆ ಮಾತ್ರ ಗೃಹಲಕ್ಷ್ಮಿ ಭಾಗ್ಯ ಇಲ್ಲ! | JANATA NEWS

09 Jun 2023
1640

ಬೆಂಗಳೂರು : ತೆರಿಗೆ ಪಾವತಿಸುವ ಕುಟುಂಬದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2,000 ರೂಪಾಯಿ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಮಹಿಳೆಯರು ಅವರ ಪತಿ ತೆರಿಗೆ ಪಾವತಿಸುತ್ತಿದ್ದರೆ ಗೃಹಲಕ್ಷ್ಮೀ ಯೋಜನೆಯಡಿ ತಿಂಗಳಿಗೆ 2,000 ರೂ.ಗೆ ಪರಿಗಣಿಸಲಾಗುವುದಿಲ್ಲ ಎಂದು ಸರ್ಕಾರ ಈ ಹಿಂದೆ ನಿರ್ದಿಷ್ಟಪಡಿಸಿದೆ.

ಯಜಮಾನಿಯ ಮಕ್ಕಳು ತೆರಿಗೆ ಪಾವತಿಸಿದರೆ ಆ ಕುಟುಂಬಕ್ಕೆ ಗೃಹಲಕ್ಷ್ಮೀ ಯೋಜನೆ ಅನ್ವಯವಾಗುತ್ತದೆ. ಪತಿ, ಪತ್ನಿ ಇಬ್ಬರಲ್ಲಿ ಒಬ್ಬರು ತೆರಿಗೆ ಪಾವತಿಸಿದರೆ ಯೋಜನೆ ಅನ್ವಯಿಸಲ್ಲ. ಈ ಸಂಬಂಧ ಈಗಾಗಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದಿದ್ದಾರೆ.

ಗೃಹ ಲಕ್ಷ್ಮೀ ಯೋಜನೆ ಅಡಿ ಮನೆಯೊಡತಿಗೆ 2 ಸಾವಿರ ರೂಪಾಯಿ ಸಿಗಲ್ಲ. ಬಿಪಿಎಲ್‌​ ಕಾರ್ಡ್​ ಇಲ್ಲದ ಮಹಿಳೆಯರಿಗೂ ಯೋಜನೆ ವಿಸ್ತರಣೆಗೆ ಚಿಂತನೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಬಗ್ಗೆ ಬಿಪಿಎಲ್​​, ಎಪಿಎಲ್​​ ಕಾರ್ಡ್​ದಾರರಿಗೆ ಗೃಹಲಕ್ಷ್ಮೀ ಯೋಜನೆ ಅನ್ವಯವಾಗಲಿದೆ. ತೆರಿಗೆ ಪಾವತಿದಾರರು, ಜಿಎಸ್‌ಟಿ ನೋಂದಣಿದಾರರಿಗೆ ಯೋಜನೆ ಇಲ್ಲ. ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತೆ ಎಂದು ತಿಳಿಸಿದ್ದರು.

ಗೃಹಲಕ್ಷ್ಮೀ ಯೋಜನೆಗೆ ಆನ್​ಲೈನ್​​ ಮತ್ತು ನಾಡಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಸಾಮಾಜಿಕ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಚಿತ್ರ ವೈರಲ್ ಆಗುತ್ತಿರುವುದು, ಡ್ರಾಫ್ಟ್ ಮಾತ್ರ. ಆದರೆ ಅದರಲ್ಲಿ ಕೆಲವು ಬದಲಾವಣೆ ಮಾಡಲಿದ್ದೇವೆ. ಅದರಲ್ಲಿ ಬ್ಯಾಂಕ್ ಪಾಸ್‍ಬುಕ್ ಸೇರಿಸಲಾಗುವುದು. ಜಾತಿ ಬದಲಿಗೆ ವರ್ಗ ಎಂದು ಬದಲಾಯಿಸಲಾಗುವುದು. 90% ಬಿಪಿಎಲ್ ಕಾರ್ಡ್ ಮಹಿಳೆಯರೇ ಯೋಜನೆಯ ಪ್ರಮುಖ ಫಲಾನುಭವಿಗಳಾಗಲಿದ್ದಾರೆ. ಈ ಬಗ್ಗೆ ಆ. 17 ಅಥವಾ 18ರಂದು ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

RELATED TOPICS:
English summary :Grilahakshmi is not lucky if the husband pays taxes!

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...