Wed,May08,2024
ಕನ್ನಡ / English

ಹಣ ಇದ್ದರೂ ಸಮರ್ಪಕ ಬಳಕೆ ಯಾಕಿಲ್ಲ? ಜನ ಸರ್ಕಾರಿ ಆಸ್ಪತ್ರೆಗಳಿಗೆ ಬರಬೇಕೋ ಬೇಡ್ವೋ? | JANATA NEWS

13 Jun 2023
1028

ಬೆಂಗಳೂರು : ಹಣ ಇದ್ದರೂ ಸಮರ್ಪಕ ಬಳಕೆ ಯಾಕಿಲ್ಲ? ನಮ್ಮ ಜನ ಸರ್ಕಾರಿ ಆಸ್ಪತ್ರೆಗಳಿಗೆ ಬರಬೇಕೋ ಬೇಡ್ವೋ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ ಲೋಪಗಳನ್ನು ಸರಿಪಡಿಸಿರಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಷ್ಟ್ರೀಯ ಆರೋಗ್ಯ ಮಿಷನ್ ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವುದನ್ನು ಗುರುತಿಸಿದರು. ಬಳಿಕ, ರಾಷ್ಟ್ರೀಯ ಆರೋಗ್ಯ ಮಿಷನ್‌ ನಡಿ ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ ಶೇ. 52 ರಷ್ಟು ತಜ್ಞ ವೈದ್ಯರ ಕೊರತೆ ಇದೆ, ಶೇ. 31 ರಷ್ಟು ಎಂಬಿಬಿಎಸ್‌ ವೈದ್ಯರ ಕೊರತೆ ಹಾಗೂ ಶೆ. 18 ರಷ್ಟು ನರ್ಸ್‌ ಸಿಬ್ಬಂದಿ ಕೊರತೆ ಇರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, ಇವರಿಗೆ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ನಿರಂತರವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನೆ ಮಾಡಬೇಕು. ನಿಗದಿತ ಗುರಿ ಸಾಧನೆಯನ್ನು ಖಾತರಿ ಪಡಿಸಬೇಕು ಹಾಗೂ ಅನುದಾನ ಸಕಾಲದಲ್ಲಿ ವೆಚ್ಚ ಮಾಡಬೇಕು ಎಂದು ಮುಖ್ಯಮಂತ್ರಿಗಳು ಇಲಾಖೆಯ ಆಯುಕ್ತರಿಗೆ ಸೂಚಿಸಿದರು.

ಕಳೆದ ಒಂದು ವರ್ಷದಲ್ಲಿ ನಿಗಮಕ್ಕೆ 5 ಎಂಡಿ ನೇಮಕ ಮಾಡಿರುವುದರಿಂದ ಸಮಸ್ಯೆ ಆಗಿರುವುದನ್ನು ಅಧಿಕಾರಿಗಳಿಂದ ಕೇಳಿ ತಿಳಿದ ಮುಖ್ಯಮಂತ್ರಿಗಳು, ನಮ್ಮ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುವುದಿಲ್ಲ ಎಂದು ಭರವಸೆ ನೀಡಿದ್ದಲ್ಲದೇ, ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕನಿಷ್ಠ 2 ವರ್ಷ ಸೇವೆ ಸಲ್ಲಿಸಬೇಕು ಎಂದು ಸೂಚಿಸಿದರು.

ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಎಂ.ಆರ್.ಐ. ಸ್ಕ್ಯಾನಿಂಗ್ ಹಾಗೂ ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸಬೇಕು ಹಾಗೂ ಈ ಎಲ್ಲ ಸೇವೆಗಳನ್ನು ಒದಗಿಸಲು ತಂತ್ರಜ್ಞರನ್ನು ನೇಮಕ ಮಾಡಬೇಕು ಎಂದು ಸೂಚಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾದ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸಬೇಕು.

ಸರ್ಕಾರಿ ಆಸ್ಪತ್ರೆಗಳಿಗೆ ಜನ ಬರಬೇಕು. ಮೂರು ತಿಂಗಳಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇನೆ. ಇದೇ ಪರಿಸ್ಥಿತಿ ಮುಂದುವರಿದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಸಿದರು.

RELATED TOPICS:
English summary :Even if there is money, why is it not being used properly? Do people want to come to government hospitals?

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...