Tue,May07,2024
ಕನ್ನಡ / English

ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ... ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ - ಎಚ್ಡಿಕೆ | JANATA NEWS

14 Jun 2023
1184

ಬೆಂಗಳೂರು : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಭೆಯನ್ನು, ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತ್ರತ್ವದ ಸಭೆಯ ಫೋಟೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, "ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ??

ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ.

ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು?

ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು." ಎಂದು ಸವಾಲು ಹಾಕಿದ್ದಾರೆ.

ಇನ್ನೂ ಜೆಡಿಎಸ್ ರಾಜ್ಯ ವಕ್ತಾರ ಪ್ರತಾಪ್ ಕಣಗಾಲ್ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ:

1) ಕರ್ನಾಟಕ ಸರ್ಕಾರದ ಅಧಿಕೃತ ಸಭೆಯ ಅಧ್ಯಕ್ಷತೆ ವಹಿಸಲು ರಣದೀಪ್ ಸಿಂಗ್ ಸುರ್ಜೆವಾಲಾ ಯಾರು, ಇದರಲ್ಲಿ ಬಿಡಿಎ ಮತ್ತು ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ?
2) ಕರ್ನಾಟಕದ ಈ ಸರ್ಕಾರವನ್ನು ಯಾರು ನಡೆಸುತ್ತಿದ್ದಾರೆ? ಕರ್ನಾಟಕದ ಸಿಎಂ ಅಥವಾ ಕಾಂಗ್ರೆಸ್ ಹೈಕಮಾಂಡ್?
3) ಇದು ಕಾಂಗ್ರೆಸ್ ಪಕ್ಷದ ಅಧಿಕೃತ ಸಭೆಯಲ್ಲದಿದ್ದರೆ, ಈ ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಏನು ಮಾಡುತ್ತಿದ್ದಾರೆ?

English summary :The people vote gone to debt govt... It has been proved even before a month is over - HDK

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...