Sun,May05,2024
ಕನ್ನಡ / English

ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ಸರ್ಕಾರ ಬಿದ್ದು ಹೋಗಲಿದೆ: ನಳಿನ್ ಕುಮಾರ್ ಕಟೀಲ್ | JANATA NEWS

19 Jun 2023
1012

ಬೆಂಗಳೂರು : ಈ ಸರಕಾರ ಡಿಸೆಂಬರ್‌ ನಲ್ಲಿ ಬಿದ್ದು ಹೋಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್‌ ಹೇಳಿದರು.

ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಹಿಂದೆ ಸಿದ್ರಾಮಣ್ಣನ ಸರಕಾರ ಇದ್ದಾಗ ಕೇಂದ್ರದಿಂದ ಅಕ್ಕಿ ಪಡೆದು ಅದನ್ನು ತಮ್ಮ ಫೋಟೊ ಹಾಕಿ ಜನರಿಗೆ ನೀಡುತ್ತಿದ್ದರು. ಕೋವಿಡ್ ಅವಧಿಯಲ್ಲಿ ನಾವು ಅಕ್ಕಿ ನೀಡಿದ್ದೇವೆ ಎಂದು ಸವಾಲೆಸೆದರು.

ವಿದ್ಯುತ್ ಬಿಲ್‍ನಲ್ಲಿ ವಂಚನೆ ಮಾಡಲಾಗುತ್ತಿದೆ. ಈಗಾಗಲೇ ರಾಜ್ಯದ ಕೈಗಾರಿಕಾ ವಾಣಿಜ್ಯ ಮಂಡಳಿ ಕಾಸಿಯಾವು ಹೋರಾಟ, ಬಂದ್‍ಗೆ ಕರೆ ಕೊಟ್ಟಿದೆ. ಕಳೆದ 15- 20 ದಿನಗಳಿಂದ ರಾಜ್ಯದ ಜನರ ಬಾಯಲ್ಲಿ ವಿದ್ಯುತ್ ಬಿಲ್ ಕುರಿತು ಚರ್ಚೆಗಳು ನಡೆಯುತ್ತಿವೆ. ಸಾಮಾನ್ಯ ಜನರಿಗೂ 2 ಸಾವಿರದ ಬದಲು 6ರಿಂದ 8 ಸಾವಿರದ ಬಿಲ್ ಬರುತ್ತಿದೆ. 20 ಸಾವಿರ ಬಿಲ್ ಬರುವ ಉದ್ಯಮಿಗೆ 1 ಲಕ್ಷದ ಬಿಲ್ ಬಂದಿದೆ. ಕೆಲವೆಡೆ 7ರಿಂದ 8 ಲಕ್ಷದ ಬಿಲ್ ವಿಧಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಹಠಮಾರಿ ಧೋರಣೆಯನ್ನು ಕೈಬಿಡಬೇಕು. ಈ ರಾಜ್ಯದಲ್ಲಿ ಉದ್ಯಮಿಗಳಿಗೆ ಅವಕಾಶಗಳನ್ನು ಕೊಡಿ. ಅವರ ಸಮಸ್ಯೆಗಳನ್ನು ಆಲಿಸಿ ನ್ಯಾಯ ಕೊಡಬೇಕೆಂದು ಅವರು ಹೇಳಿದರು.

ಅಕ್ಕಿ ವಿಚಾರದಲ್ಲೂ ಸಿದ್ರಾಮಣ್ಣ, ಡಿ.ಕೆ.ಶಿವಕುಮಾರ್ 10 ಕೆಜಿ ಕೊಡುವುದಾಗಿ ಸುಳ್ಳು ಹೇಳಿದ್ದಾರೆ. ಅದರಲ್ಲಿ 5 ಕೆಜಿ ಕೇಂದ್ರದ್ದು ಎಂದು ಜನರಿಗೂ ಗೊತ್ತಾಗಲಿ. ಕಾಂಗ್ರೆಸ್ಸಿಗರು ಪ್ರತಿಭಟನೆ ಜೋರಾಗಿ ಮಾಡಿದರೆ ವಿಷಯ ಜನರಿಗೂ ತಿಳಿಯುತ್ತದೆ.

ರಾಜ್ಯದಲ್ಲಿ ವಿದ್ಯುತ್ ದರ ತೀವ್ರ ಹೆಚ್ಚಳದ ವಿರುದ್ಧ ಉದ್ಯಮಿಗಳ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ಕೊಡಲಿದೆ ಎಂದು ತಿಳಿಸಿದರು. ನಾವು ಅನುಷ್ಠಾನಕ್ಕೆ ತಂದ ಮತಾಂತರ ನಿಷೇಧ ಕಾಯ್ದೆ, ಗೋಹತ್ಯಾ ನಿಷೇಧ ಕಾಯ್ದೆ ಹಿಂದಕ್ಕೆ ಪಡೆಯುವ ಕಾಂಗ್ರೆಸ್ ಸರಕಾರಕ್ಕೆ ವಿದ್ಯುತ್ ದರ ಏರಿಕೆ ಹಿಂದಕ್ಕೆ ಪಡೆಯಲಾಗುವುದಿಲ್ಲವೇ ಎಂದು ಅವರು ಪ್ರಶ್ನಿಸಿದರು.

ಈ ಸರಕಾರ ಡಿಸೆಂಬರ್‍ನಲ್ಲಿ ಬಿದ್ದು ಹೋಗಲಿದೆ ಎಂದು ನಳಿನ್‍ಕುಮಾರ್ ಅವರು ತಿಳಿಸಿದರು. ಅಧಿವೇಶನ ಆರಂಭವಾಗುವ ವೇಳೆಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ ಎಂದ ಅವರು, ಸರಕಾರ ನಡೆಸಲು ಮುಖ್ಯಮಂತ್ರಿ ಬೇಕಿತ್ತು. ಮುಖ್ಯಮಂತ್ರಿ ಆಯ್ಕೆಗೆ ಅವರು 4 ದಿನ ತೆಗೆದುಕೊಂಡರಲ್ಲವೇ ಎಂದು ಪ್ರಶ್ನೆಗೆ ಉತ್ತರ ನೀಡಿದರು.

RELATED TOPICS:
English summary :The government will fall in the state in December: Nalin Kumar Kateel

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...