Sun,May12,2024
ಕನ್ನಡ / English

ಜೂನ್.27ರಂದು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಡಿ ಕೆ ಶಿವಕುಮಾರ್ | JANATA NEWS

22 Jun 2023
1205

ಬೆಂಗಳೂರು : ಜೂನ್ 27ರಂದು ಪ್ರತಿ ತಾಲೂಕಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಕೆಂಪೇಗೌಡ ಜಯಂತಿ ಕೇವಲ ಒಂದು ಸಮುದಾಯ, ಜಾತಿ ಅಥವಾ ಧರ್ಮಕ್ಕೆ ಸೀಮಿತವಾದುದಲ್ಲ. ಎಲ್ಲಾ ಜಾತಿ ಹಾಗೂ ಧರ್ಮಕ್ಕೆ ಸಲ್ಲುವ ರಾಜ್ಯಮಟ್ಟದ ಕಾರ್ಯಕ್ರಮ. ನಮ್ಮ ಸರ್ಕಾರದ ಅವಧಿಯಲ್ಲಿ ಜೂನ್ 27ರಂದು ಪ್ರತಿ ತಾಲೂಕಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಬೇಕು ಎಂದು ಆದೇಶ ಮಾಡಿದ್ದೆವು. ಅದೇ ರೀತಿ ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯುತ್ತಿದೆ. ಎಲ್ಲಾ ಸಂಘ ಸಂಸ್ಥೆಗಳು ಭಾಗವಹಿಸುವಂತೆ ಮನವಿ ಮಾಡಿದ್ದೇವೆ ಎಂದರು.

ಈ ಕಾರ್ಯಕ್ರಮದ ಜವಾಬ್ದಾರಿಯನ್ನು ಸ್ಥಳೀಯ ಶಾಸಕರಿಗೆ ನೀಡಲಾಗಿದೆ. ಬಿಬಿಎಂಪಿಯ ಎಲ್ಲಾ ವಾರ್ಡ್ ಗಳಲ್ಲೂ ಕಾರ್ಯಕ್ರಮ ನಡೆಯುತ್ತಿತ್ತು. ಬಿಬಿಎಂಪಿ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ವಾರ್ಡ್ ರಚನೆ ಕುರಿತ ಗೊಂದಲ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಜೂನ್ 28ರಿಂದ ಜುಲೈ 8ನೇ ತಾರೀಕಿನವರೆಗೆ 28 ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನಲ್ಲಿ ಜೂನ್ 27ರ ಬೆಳಗ್ಗೆ 9 ಗಂಟೆಗೆ ಕೆಂಪೇಗೌಡರ 4 ಗೋಪುರಗಳಿಂದ ಹಾಗೂ ಮಾಗಡಿಯಿಂದ ಮೂರ್ನಾಲ್ಕು ಶಾಸಕರ ಸಮ್ಮುಖದಲ್ಲಿ ಜ್ಯೋತಿ ಉದ್ಘಾಟನೆ ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ಐವರು ಸಚಿವರು ತೆರಳಲಿದ್ದಾರೆ. ಅಂದು 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿ ಕಾರ್ಯಕ್ರಮ ಜರುಗಲಿದ್ದು, ಬಿ.ಎಲ್ ಶಂಕರ್ ಅವರ ನೇತೃತ್ವದ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಿದೆ.

ಎಲ್ಲಾ ಕಾರ್ಯಕ್ರಮಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕೆಂಪೇಗೌಡ ಪ್ರಾಧಿಕಾರ ವತಿಯಿಂದ ನಡೆಸಲಾಗುವುದು. ಇನ್ನು, ಪಾಲಿಕೆ ವತಿಯಿಂದ ಜುಲೈ 9 ರಂದು 198 ವಾರ್ಡ್ ಗಳಲ್ಲಿ ಬೆಂಗಳೂರಿಗೆ ಸೇವೆ ಮಾಡಿದವರನ್ನು ಗುರುತಿಸಿ ಅವರಿಗೆ ಕೆಂಪೇಗೌಡ ಬೆಂಗಳೂರು ನಗರ ಪ್ರಶಸ್ತಿ ನೀಡಲಾಗುವುದು ಎಂದು ಶಿವಕುಮಾರ್​ ಮಾಹಿತಿ ನೀಡಿದರು.

English summary :Kempegowda Jayanti celebrations in all taluk centers on June 27: DK Shivakumar

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...