Thu,May02,2024
ಕನ್ನಡ / English

ಪರಪುರುಷನ ಜತೆಗಿನ ಸಂಬಂಧಕ್ಕಾಗಿ ತನ್ನ ಸ್ನೇಹಿತರೊಂದಿಗೆ ಸೇರಿ ಗಂಡನನ್ನೇ ಕೊಂದ ಪತ್ನಿ | JANATA NEWS

23 Jun 2023
1775

ಬೆಳಗಾವಿ : ಪರಪುರುಷನ ಜತೆಗಿನ ಸಂಬಂಧಕ್ಕಾಗಿ ಪತ್ನಿ ತನ್ನ ಸ್ನೇಹಿತರೊಂದಿಗೆ ಸೇರಿ ಗಂಡನನ್ನೇ ಕೊಂದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಇದೀಗ ನಾಲ್ವರು ಆರೋಪಿಗಳನ್ನ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಅಂಬೇಡ್ಕರ್ ನಗರ ನಿವಾಸಿ ರಮೇಶ ಕಾಂಬಳೆ (38) ಕೊಲೆಯಾದ ದುರ್ದೈವಿ. ರಮೇಶ್ ಕಾಂಬಳೆ ವೃತ್ತಿಯಲ್ಲಿ ಪೇಂಟರ್ ಆಗಿದ್ದು, ಮನೆಯಲ್ಲಿ ಮೊಬೈಲ್ ಬಿಟ್ಟು ದಿಢೀರ್​ ಮಾ.28ರಂದು ಬೆಳಗಾವಿಯಿಂದ ನಾಪತ್ತೆಯಾಗಿದ್ದ. ಏಪ್ರಿಲ್ 5ರಂದು ಗಂಡ ರಮೇಶ್ ನಾಪತ್ತೆ ಆಗಿದ್ದಾನೆಂದು ಪತ್ನಿ ಸಂಧ್ಯಾ ದೂರು ನೀಡಿದ್ದಳು. ಪತಿ ಪರಸ್ತ್ರೀಯೊಂದಿಗೆ ಓಡಿ ಹೋಗಿದ್ದಾನೆ ಎಂದು ಕಥೆ ಕಟ್ಟಿದ್ದಳು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ರಮೇಶ್ ಪತ್ನಿ ಸಂಧ್ಯಾ ಹಾಗೂ ರಮೇಶ್ ಸ್ನೇಹಿತರನ್ನ ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಾವೇ ಕೊಲೆ ಮಾಡಿರುವುದಾಗಿ ರಮೇಶ್​ ಪತ್ನಿ ಹಾಗೂ ಸ್ನೇಹಿತರು ಬಾಯ್ಬಿಟ್ಟಿದ್ದಾರೆ.

ರಮೇಶ್ ಕಾಂಬಳೆಯ ಸ್ನೇಹಿತ ಬಾಳು ಬಿರಂಜೆ ಹಾಗೂ ಪತ್ನಿ ಸಂಧ್ಯಾ ಮಧ್ಯೆ ಅನೈತಿಕ ಸಂಬಂಧ ಇತ್ತು. ಈ ಸಂಬಂಧಕ್ಕೆ ರಮೇಶ್‌ ಅಡ್ಡಿಯಾಗಿದ್ದ. ಅದಕ್ಕಾಗಿ ರಮೇಶ್​ಗೆ​ ನಿದ್ರೆ ಮಾತ್ರೆಯನ್ನ ನೀಡಿ, ಬಳಿಕ ಕತ್ತು ಹಿಸುಕಿ ಕೊಲೆಗೈದಿದ್ದಾರೆ. ಸಂದ್ಯಾ, ಬಾಳು ಬಿರಂಜೆ ಹಾಗೂ ಆತನ ಸ್ನೇಹಿತರು ಜೊತೆಗೂಡಿ ಕೊಲೆ ಮಾಡಿ, ಗೋವಾದ ಚೋರ್ಲಾ ಘಾಟ್​ನಲ್ಲಿ ಶವ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾರೆ.

RELATED TOPICS:
English summary :A wife kills her husband with her friends for having an affair with a man

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...