Sun,May19,2024
ಕನ್ನಡ / English

ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ: ಸಚಿವ ಕೆ.ಹೆಚ್ ಮುನಿಯಪ್ಪ | JANATA NEWS

23 Jun 2023
1255

ನವದೆಹಲಿ : ಕೇಂದ್ರದ ಬಳಿ ಸಾಕಷ್ಟು ಪ್ರಮಾಣದಲ್ಲಿ ಅಕ್ಕಿಯ ದಾಸ್ತಾನು ಇದ್ದರೂ ಅದನ್ನು ಬೇರೆ ಯೋಜನೆಗೆ ಉಪಯೋಗಿಸಲು ಅಗತ್ಯವಾಗಿದೆ ಆದ್ದರಿಂದ ಕರ್ನಾಟಕಕ್ಕೆ ಅಕ್ಕಿಯನ್ನು ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪಿಯೂಶ್ ಗೊಯಲ್ ಹೇಳಿದ್ದಾರೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ, ಇಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿದೆ. ಅವರು ಅಕ್ಕಿ ಕೊಡುವುದಕ್ಕೆ ಆಗುವುದಿಲ್ಲ ಅಂತ ಹೇಳಿದ್ದಾರೆ. ನಿಮ್ಮ ಬಳಿ ಸ್ಟಾಕ್ ಇದೆ. ದ್ವಿಗುಣ ಪ್ರಮಾಣದಲ್ಲಿ ಇದೆ. ಏಕೆ ಅಕ್ಕಿ ಕೊಡುವುದಿಲ್ಲ ಎಂದು ಕೇಳಿದೆ. ಕೇಂದ್ರದ ದರ ನೀಡಲೂ ನಾವು ರೆಡಿ ಇದ್ದೀವಿ ಅಂತಾನೂ ಹೇಳಿದೆ. ಆದರೆ, ಬೇರೆ ಬೇರೆ ಕಾರ್ಯಕ್ರಮಕ್ಕೆ ನೀಡಲು ಬೇಕಾಗುತ್ತದೆ ಎಂದು ಅಕ್ಕಿ ಕೊಡಲು ನಿರಾಕರಿಸಿದರು ಎಂದು ಮುನಿಯಪ್ಪ ತಿಳಿಸಿದರು.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಕ್ಕಿ ಕೊಡಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಸಾಧ್ಯವಿಲ್ಲ ಎಂದಿದ್ದಾರೆ. ನಾವು ಹಣ ಕೊಡುತ್ತೇವೆ ಅಕ್ಕಿ ಪೂರೈಸಿ ಎಂದು ಕೋರಿದ್ದೇವೆ. ಆದ್ರೇ ಕೇಂದ್ರ ಆಹಾರ ಸಚಿವ ಪಿಯೂಸ್ ಗೋಯಲ್ ಮಾತ್ರ ಆಗಲ್ಲ ಎಂದಿದ್ದಾರೆ ಎಂದರು.

janata

ರಾಜ್ಯದ ಜನರಿಗೆ ನಾವು 10 ಕೆಜಿ ಅಕ್ಕಿ ಕೊಡುವುದಾಗಿ ಗ್ಯಾರಂಟಿಯ ಭರವಸೆ ನೀಡಿದ್ದೇವೆ. ಎಷ್ಟೇ ಕಷ್ಟವಾದರೂ ಉಚಿತ ಅಕ್ಕಿ ಕೊಟ್ಟೇ ಕೊಡುತ್ತೇವೆ. ಜನರಿಗೆ ನಾವು ನೀಡಿರುವಂತ ಭರಸೆಯಂತೆ ಅಕ್ಕಿ ನೀಡೇ ನೀಡುತ್ತೀವಿ ಎಂಬುದಾಗಿ ತಿಳಿಸಿದರು.

ರಾಜ್ಯಕ್ಕೆ ಅಕ್ಕಿ ಕೊಡುವ ವಿಚಾರದಲ್ಲಿ ಕೇಂದ್ರ ಸರ್ಕಾರದ ರಾಜಕಾರಣ ಕಾಣಿಸುತ್ತಿದೆ. ಎಫ್ ಸಿಐ ಅಧಿಕಾರಿಗಳು ನೀಡಿದ ಪತ್ರ ಕೂಡ ಕೊಟ್ಟೆ. ಯುಪಿಎ ಅವಧಿಯಲ್ಲಿ ಆಹಾರ ಭದ್ರತೆ ಕಾಯ್ದೆ ತಂದಿದೆ. ನಾನು ಬಹಳ ಆಶಾಭವನೆಯಿಂದನೆ ಬಂದೆ. ಆದರೆ ಅಕ್ಕಿ ಇಲ್ಲವೆಂದರು. ಇದರ ಹಿಂದೆ ರಾಜಕೀಯ ಉದ್ದೇಶ ಇದೆ. ನಾವು ನಮ್ಮ ಪ್ಲಾನ್ ಮಾಡಿದ್ದೇವೆ. ಕೇಂದ್ರದ ಏಜೆನ್ಸಿಗಳಿಂದ ಈ ಹಿಂದೆ ಖರೀದಿ ಮಾಡಿದ್ದೇವೆ. ಈಗ ಅದೇ ರೀತಿ ಮಾಡುತ್ತಿದ್ದೇವೆ. ಎಷ್ಟೇ ಸ್ಟಾಕ್ ಇದ್ದರೂ ನಮಗೆ ಬೇರೆ ಬೇರೆ ಕಾರ್ಯಕ್ರಮಗಳಿಗೆ ಬೇಕು ಅಂಥ ಹಾರಿಕೆ ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಮುನಿಯಪ್ಪ ಆಕ್ರೋಶ ಹೊರಹಾಕಿದರು.

ಇಂದು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರಾದ Piyush Goyal ರವರನ್ನು ಭೇಟಿ ಮಾಡಿ ಕರ್ನಾಟಕ ರಾಜ್ಯದ ಅನ್ನಭಾಗ್ಯ ಯೋಜನೆಯ ಕುರಿತು ವಿವರಿಸಲಾಯಿತು, ಹಠಾತ್ತನೆ ಭಾರತ ಒಕ್ಕೂಟ ವ್ಯವಸ್ತೆಯ ಕೇಂದ್ರ ಸರ್ಕಾರ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯನ್ನ (OMSS) ಸ್ಥಗಿತ ಗೊಳಿಸಿದ್ದರಿಂದ ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಭಾರಿ ಹೊಡೆತ ಬೀಳಲಿದೆ ಹಾಗೂ ಈ ಹಿಂದೆ ಇದ್ದ ಯೋಜನೆಯನ್ನು ಮುಂದುವರೆಸಬೇಕು ಎಂದು ಮನವಿ ಮಾಡಿಕೊಳ್ಳಲಾಯಿತು ನಮ್ಮ ಸರ್ಕಾರ ಹಣವನ್ನು ನೀಡಲು ತಯಾರಿದ್ದು ನಮಗೆ ಅಕ್ಕಿಯನ್ನು ನೀಡಬೇಕೆಂದು ಮನವಿ ಮಾಡಲಾಯಿತು.

ಆದರೆ ಕೇಂದ್ರ ಸಚಿವರು 300 ಲಕ್ಷ ಟನ್ ಅಕ್ಕಿಯನ್ನು ಇತರೆ ವಿವಿಧ ಯೋಜನೆಗಳಿಗೆ ಮೀಸಲಿಡಲಾಗಿದೆ, ಆದ್ದರಿಂದ ರಾಜ್ಯಕ್ಕೆ ಅಕ್ಕಿ ನೀಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿರುತ್ತಾರೆ.ಆದರೆ ರಾಜ್ಯ ಸರ್ಕಾರವು ಅನ್ನಭಾಗ್ಯದ ಯೋಜನೆಯನ್ನು ಅನುಷ್ಠಾನಕ್ಕೆ ತರುತ್ತದೆ ಎಂದು ಕೆ ಎಚ್ ಮುನಿಯಪ್ಪ ರವರು ಸ್ಪಷ್ಟಪಡಿಸಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದ ಅವರು ಈ ನಿಲುವು ಬಡವರ ವಿರೋಧಿಯಾಗಿದೆ ಹಾಗೂ ರಾಜಕೀಯ ಪ್ರೇರಿತವಾಗಿದೆ ಎಂದು ಖಂಡಿಸುತ್ತೇನೆ.ಎಷ್ಟೇ ಅಡೆ ತಡೆಗಳಾದರು ನಾವು ಅನ್ನಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

RELATED TOPICS:
English summary :Union government refused to provide rice to the state for Annabhagya Yojana: Minister KH Muniyappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...